ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೂತನ ಶಾಸಕ ಪ್ರದೀಪ್ ಈಶ್ವರ್ ಸಾಕು ತಾಯಿ ನಿಧನ

Twitter
Facebook
LinkedIn
WhatsApp
Pradeep Eshwar

ಚಿಕ್ಕಬಳ್ಳಾಪುರ: ನೂತನ ಶಾಸಕ ಪ್ರದೀಪ್ ಈಶ್ವರ್ (MLA Pradeep Eshwar) ಅವರ ಸಾಕು ತಾಯಿ ರತ್ನಮ್ಮ ಇಂದು ನಿಧನರಾಗಿದ್ದಾರೆ. ಪೇರೇಸಂದ್ರ ಗ್ರಾಮದಲ್ಲಿ ಸಾಕು ತಾಯಿ ರತ್ನಮ್ಮ ನಿಧನರಾಗಿದ್ದು, ಅವರಿಗೆ 72 ವರ್ಷ ವಯಸ್ಸು ಆಗಿತ್ತು. ರತ್ನಮ್ಮ ಅವರು ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.  ಇಂದು ಸಿಎಂ ಮತ್ತು ಡಿಸಿಎಂ ಸೇರಿದಂತೆ ಪ್ರಮಾಣ ವಚನ ಕಾರ್ಯಕ್ರಮ ಹಿನ್ನೆಲೆ ಪ್ರದೀಪ್ ಈಶ್ವರ್ ಬೆಂಗಳೂರಿನಲ್ಲಿದ್ದರು. ಇನ್ನು ವಿಷಯ ತಿಳಿಯುತ್ತಿದ್ದಂತೆ ಪ್ರದೀಪ್ ಈಶ್ವರ್ ಪೇರೇಸಂದ್ರದತ್ತ ತೆರಳುತ್ತಿದ್ದಾರೆ. ಪೇರೇಸಂದ್ರ ಗ್ರಾಮಕ್ಕೆ ತೆರಳಿ ತಾಯಿ ರತ್ನಮ್ಮ ಅವರ ಅಂತಿಮ ದರ್ಶನ ಪಡೆಯಲಿದ್ದಾರೆ. 

ಪ್ರದೀಪ್ ಈಶ್ವರ್​ ಅವರು ಜೀವಶಾಸ್ತ್ರ ಉಪನ್ಯಾಸಕರಾಗಿದ್ದಾರೆ. ಜೊತೆಗೆ ಪ್ರದೀಪ್​ ಅತ್ಯುತ್ತಮ ಮೋಟಿವೇಷನಲ್​ ಸ್ಪೀಕರ್​ ಆಗಿದ್ದಾರೆ. ಪ್ರದೀಪ್ ಈಶ್ವರ್ ಅವರು, ಪರಿಶ್ರಮ ಅಕಾಡೆಮಿಯನ್ನು ಪ್ರಾರಂಭಿಸುವ ಮೊದಲು, ಭಾರತದ ಉದ್ದಗಲಕ್ಕೂ ಸಂಚರಿಸಿ ಸಾವಿರಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ.

ರಾಜ್ಯದಲ್ಲೂ MBBS ಸೀಟುಗಳನ್ನು ಪಡೆಯಲು ನೂರಾರು ವಿದ್ಯಾರ್ಥಿಗಳಿಗೆ ಸಹಾಯ ಮಾಡಿದ್ದಾರೆ. ಅವರ ವಿದ್ಯಾರ್ಥಿಗಳು ಭಾರತದ ಬಹುತೇಕ ಉನ್ನತ ವೈದ್ಯಕೀಯ ಕಾಲೇಜುಗಳಲ್ಲಿ ಸೀಟ್​ ಪಡೆದು ಓದುತ್ತಿದ್ದಾರೆ.

ಪರಿಶ್ರಮ ಸಂಸ್ಥೆಯ ಸ್ಥಾಪಕ

ಪ್ರದೀಪ್ NEET ನಂತಹ ಸ್ಪರ್ಧಾತ್ಮಕ ಪರೀಕ್ಷೆಯನ್ನು ಯಶಸ್ವಿಯಾಗಿ ಎದುರಿಸಲು ಅಗತ್ಯವಿರುವ ಜ್ಞಾನ ಹೊಂದಿದ್ದಾರೆ. ಸಾವಿರಾರು ವಿದ್ಯಾರ್ಥಿಗಳಿಗೆ ನೆರವಾಗಲು ಪರಿಶ್ರಮ ಎಂಬ ಸಂಸ್ಥೆಯನ್ನು ಕಟ್ಟಿದ್ದಾರೆ. ಇವರ ಅಕಾಡೆಮಿಯ ನೀಟ್ ವಿದ್ಯಾರ್ಥಿಗಳು ವರ್ಷದಿಂದ ವರ್ಷಕ್ಕೆ ಅತ್ಯುತ್ತಮ ಶ್ರೇಯಾಂಕಗಳನ್ನು ಪಡೆದುಕೊಳ್ಳುತ್ತಿದ್ದಾರೆ.

ಇನ್ನು2018ರ ಚುನಾವಣೆಯಲ್ಲಿ ಪ್ರದೀಪ್​ ಈಶ್ವರ್​ ನವೀನ್​ ಕಿರಣ್​ ಪರ ಪ್ರಚಾರ ಮಾಡಿದ್ದರು. ಈ ವೇಳೆ ಅವರ ವಿರುದ್ಧ 23 ಪ್ರಕರಣಗಳು ದಾಖಲಾಗಿದ್ದವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ