ಬುಧವಾರ, ಮೇ 15, 2024
ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ-ಮುಂಬೈ: ಬಿರುಗಾಳಿ ಮಳೆಗೆ ಜಾಹೀರಾತು ಫಲಕ ಕುಸಿದು 14 ಮಂದಿ ಸಾವು..!-ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!-ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!-ಕರಾವಳಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು-ಮಿಂಚು ಮತ್ತು ಗಾಳಿಯೊಂದಿಗೆ ಮಳೆ ಮುನ್ಸೂಚನೆ..!-ಕೊನೆಗೂ ಹೆಚ್ ಡಿ ರೇವಣ್ಣಗೆ ಜಾಮೀನು ಮಂಜೂರು ; ಕೋರ್ಟ್ ಷರತ್ತುಗಳೇನು.?-ಕಾಂಗ್ರೆಸ್ ಶಾಸಕರೇ ಸರ್ಕಾರವನ್ನು ಪತನಗೊಳಿಸುತ್ತಾರೆ: ಆರ್ ಅಶೋಕ್-ಹುಣಸೂರು : ಕಲುಷಿತ ನೀರು ಸೇವಿಸಿ ಹಲವಾರು ಜನರು ಅಸ್ವಸ್ಥ-ವಕೀಲ ಜೆ. ದೇವರಾಜೇಗೌಡಗೆ 14 ದಿನಗಳ ನ್ಯಾಯಾಂಗ ಬಂಧನ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!

Twitter
Facebook
LinkedIn
WhatsApp
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!

ಬಿಹಾರ್ :  ಬಿಹಾರದ ಭಾಗಲ್‌ಪುರದಲ್ಲಿರುವ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಭೋಜ್‌ಪುರಿ ನಟಿ ಅಮೃತಾ ಪಾಂಡೆ(amrita pandey)  ಶವವಾಗಿ ಪತ್ತೆಯಾಗಿದ್ದಾರೆ. ಅಮೃತಾ ತನ್ನ ಸೀರೆಯಿಂದ ತಮ್ಮ ನಿವಾಸದ ಸೀಲಿಂಗ್ ಫ್ಯಾನ್‌ಗೆ ನೇಣು ಹಾಕಿಕೊಂಡು ಜೀವಾಂತ್ಯ ಮಾಡಿಕೊಂಡಿದ್ದಾರೆ.

ಅಮೃತಾ ಪಾಂಡೆ ಅವರು ತನ್ನ ಪತಿಯೊಂದಿಗೆ ನೆಲೆಸಿದ್ದರು. ಕೆಲ ದಿನಗಳ ಹಿಂದೆ ಸಂಬಂಧಿಕರ ಮದುವೆಯ ಹಿನ್ನೆಲೆಯಲ್ಲಿ ಬಿಹಾರದ ಭಾಗಲ್‌ಪುರಕ್ಕೆ ಭೇಟಿ ನೀಡಿದ್ದರು. ಆದರೆ ಭಾಗಲ್‌ಪುರದಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಅಮೃತಾ ಪಾಂಡೆ ನೇಣಿಗೆ ಶರಣಾಗಿದ್ದಾರೆ.

ಅಮೃತಾ ಪಾಂಡೆ ಅವರು ಅಪಾರ್ಟ್‌ಮೆಂಟ್‌ನಲ್ಲಿ ಸಾವನ್ನಪ್ಪಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಆದರೆ, ಆತ್ಮಹತ್ಯೆ ಮಾಡಿಕೊಳ್ಳುವುದಕ್ಕಿಂತ ಕೆಲವೇ ಗಂಟೆ ಮುಂಚೆ ಅಮೃತಾ ಪಾಂಡೆ ವಾಟ್ಸ್‌ಆ್ಯಪ್‌ನಲ್ಲಿ ಸ್ಟೇಟಸ್ ಹಾಕಿದ್ದು, ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ. ವಾಟ್ಸ್‌ಆ್ಯಪ್‌ನಲ್ಲಿ ಸ್ಟೇಟಸ್ ಹಾಕಿದ ಮೇಲೆ ತನ್ನ ರೂಮಿಗೆ ಹೋಗಿ ನೇಣಿಗೆ ಶರಣಾಗಿದ್ದಾರೆ.

ಆಕೆಯ ಅಪಾರ್ಟ್‌ಮೆಂಟ್‌ನಿಂದ ಯಾವುದೇ ಸೂಸೈಡ್ ನೋಟ್ ಪತ್ತೆಯಾಗಿಲ್ಲವಾದರೂ, ಅಮೃತ ಪಾಂಡೆ ಅವರು ವಾಟ್ಸ್‌ಆ್ಯಪ್‌ ಸ್ಟೇಟಸ್‌ನಲ್ಲಿ “ಎರಡು ದೋಣಿಗಳಲ್ಲಿ ಜೀವನ ಸಾಗುತ್ತಿತ್ತು, ನಾವು ದೋಣಿಯನ್ನು ಮುಳುಗಿಸಿ ಪ್ರಯಾಣವನ್ನು ಸುಲಭಗೊಳಿಸಿದೆವು” ಎನ್ನುವ ಹಿಂದಿ ಸಾಲುಗಳನ್ನು ಹಾಕಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ