ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನೋಟು ಬ್ಯಾನ್ : ಸುಪ್ರೀಂ ಕೋರ್ಟ್ ನಿಂದ ಐತಿಹಾಸಿಕ ತೀರ್ಪು

Twitter
Facebook
LinkedIn
WhatsApp
ms 020123 beach 1

ನವದೆಹಲಿ, ಜ 02 : ಕೇಂದ್ರ ಸರ್ಕಾರ ಮಾಡಿದ್ದ ನೋಟ್ ಬ್ಯಾನ್ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದ್ದು, 2016 ರ ನೋಟು ಅಮಾನ್ಯೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಮಹತ್ವದ ತೀರ್ಪು ನೀಡಿದೆ. ಅಲ್ಲದೆ ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ ಎಂದಿದೆ.

ನೋಟು ರದ್ದತಿ ಮಾಡಿದ್ದ ಕೇಂದ್ರ ಸರ್ಕಾರದ ನಿರ್ಧಾರ ಪ್ರಶ್ನಿಸಿರುವ 58 ಅರ್ಜಿಗಳಿಗೆ ಸಂಬಂಧಿಸಿದಂತೆ ತೀರ್ಪು ಪ್ರಕಟಿಸಿದ ಸುಪ್ರೀಂಕೋರ್ಟ್‌ನ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠದಿಂದ ಇಂದು ತೀರ್ಪು ಹೊರಬಿದ್ದಿದೆ.

ಕೇಂದ್ರ ಮತ್ತು ಆರ್‌ಬಿಐ ನಡುವೆ 6 ತಿಂಗಳ ಕಾಲ ಸಮಾಲೋಚನೆ ನಡೆದಿದೆ. ಅಂತಹ ಕ್ರಮವನ್ನು ತರಲು ಸಮಂಜಸವಾದ ಸಂಬಂಧವಿದೆ ಎಂದು ನಾವು ಭಾವಿಸುತ್ತೇವೆ ಮತ್ತು ಅನುಪಾತದ ಸಿದ್ಧಾಂತದಿಂದ ನೋಟು ಅಮಾನ್ಯೀಕರಣವು ಪರಿಣಾಮ ಬೀರಲಿಲ್ಲ ಎಂದು ನಾವು ಭಾವಿಸುತ್ತೇವೆ. ಸೆಕ್ಷನ್ 3 ಮತ್ತು 4ರ ಸಂಪೂರ್ಣ ಯೋಜನೆಯನ್ನು ಪರಿಗಣಿಸಬೇಕು ಎಂದು ನಾವು ಭಾವಿಸಿದ್ದೇವೆ. ಆದ್ದರಿಂದ ಆರ್‌ಬಿಐಗೆ ಸ್ವತಂತ್ರ ಅಧಿಕಾರವಿಲ್ಲ ಎಂದು ನ್ಯಾ. ಗವಾಯಿ ಈ ವೇಳೆ ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್ ಎ ನಜೀರ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠದಿಂದ ಈ ತೀರ್ಪು ಹೊರಬಿದ್ದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ