ಶುಕ್ರವಾರ, ಏಪ್ರಿಲ್ 19, 2024
ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?-ಇಸ್ರೇಲ್-ಇರಾನ್ ನಡುವೆ ಯುದ್ಧ ಆರಂಭ?-ನಾಳೆ ಮಂಗಳೂರಿನಲ್ಲಿ ಮೋದಿ ರೋಡ್ ಶೋ ; ವಾಹನ ಸಂಚಾರದಲ್ಲಿ ಬದಲಾವಣೆ.!-ರಾಮೇಶ್ವರಂ ಕೆಫೆ ಬಾಂಬ್​ ಬ್ಲಾಸ್ಟ್: ಬಾಂಬರ್ ಮತ್ತು ಸ್ಫೋಟದ ಮಾಸ್ಟರ್ ಮೈಂಡ್ 10 ದಿನಗಳ ಕಾಲ ಎನ್ಐಎ ವಶಕ್ಕೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ್ಯೂಜಿಲೆಂಡ್‌ನ ಕೆರ್ಮಾಡೆಕ್ ದ್ವೀಪಗಳಲ್ಲಿ 7.1 ತೀವ್ರತೆಯ ಭೂಕಂಪ – ಸುನಾಮಿ ಎಚ್ಚರಿಕೆ

Twitter
Facebook
LinkedIn
WhatsApp
Earthquake

ವೆಲ್ಲಿಂಗ್ಟನ್: ನ್ಯೂಜಿಲೆಂಡ್‌ನ (New Zealand) ಉತ್ತರ ಭಾಗದಲ್ಲಿರುವ ಕೆರ್ಮಾಡೆಕ್ ದ್ವೀಪಗಳ (Kermadec Islands) ಪ್ರದೇಶದಲ್ಲಿ ಗುರುವಾರ ಬೆಳಗ್ಗೆ 7.1 ತೀವ್ರತೆಯ ಭಾರೀ ಭೂಕಂಪ (Earthquake) ಸಂಭವಿಸಿದೆ. ಭೂಕಂಪ ಭೂಮಿಯಿಂದ 10 ಕಿ.ಮೀ ಆಳದಲ್ಲಿ ಸಂಭವಿಸಿದೆ ಎಂದು ಅಮೆರಿಕದ ಜಿಯೋಲಾಜಿಕಲ್ ಸರ್ವೆ ತಿಳಿಸಿದೆ.

 

ಭಾರೀ ಭೂಕಂಪ ಉಂಟಾದ ತಕ್ಷಣ ಸುನಾಮಿ ಎಚ್ಚರಿಕೆ (Tsunami Alert) ನೀಡಲಾಗಿದೆ. ಭೂಕಂಪ ಸಂಭವಿಸಿದ 300 ಕಿಮೀ ವ್ಯಾಪ್ತಿಯ ಪ್ರದೇಶದೊಳಗೆ ಸುನಾಮಿಯ ಭೀತಿಯಿದೆ. ಸದ್ಯ ಈ ಪ್ರದೇಶದಲ್ಲಿ ಯಾವುದೇ ಜನವಸತಿ ಇಲ್ಲ. ಭೂಕಂಪದ ಬಳಿಕ ರಾಷ್ಟ್ರೀಯ ತುರ್ತು ನಿರ್ವಹಣಾ ಏಜೆನ್ಸಿ ನ್ಯೂಜಿಲೆಂಡ್‌ಗೆ ಯಾವುದೇ ಸುನಾಮಿಯ ಭೀತಿ ಇಲ್ಲ ಎಂದು ತಿಳಿಸಿದೆ.

ಪೆಸಿಫಿಕ್ ಪ್ಲೇಟ್ ಮತ್ತು ಆಸ್ಟ್ರೇಲಿಯನ್ ಪ್ಲೇಟ್ ಒಟ್ಟುಗೂಡುವ ಪ್ರದೇಶದಲ್ಲಿ ಭಾರೀ ಭೂಕಂಪಗಳು ಸಂಭವಿಸುತ್ತದೆ. ಈ ಪ್ರದೇಶ ರಿಂಗ್ ಆಫ್ ಫೈರ್‌ಗೆ ಅತ್ಯಂತ ಸಮೀಪವಿದೆ ಮಾತ್ರವಲ್ಲದೇ ಈ ಪ್ರದೇಶದಲ್ಲಿ ಆಗಾಗ ಭೂಕಂಪಗಳು ಸಂಭವಿಸುತ್ತಲೇ ಇರುತ್ತದೆ. ವಾರ್ಷಿಕವಾಗಿ ನ್ಯೂಜಿಲೆಂಡ್‌ನಲ್ಲಿ ಸಾವಿರಾರು ಭೂಕಂಪಗಳು ನಡೆಯುತ್ತವೆ. 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ