ಸೋಮವಾರ, ಏಪ್ರಿಲ್ 29, 2024
ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ್ಯೂಜಿಲ್ಯಾಂಡ್ ವಿರುದ್ಧ ಟಿ20 ಸರಣಿ: ಡಕ್ವರ್ಥ್ ಲೂಯಿಸ್ ನಲ್ಲೂ 'ಟೈ', ಸರಣಿ ಭಾರತ ಕೈವಶ!

Twitter
Facebook
LinkedIn
WhatsApp
ನ್ಯೂಜಿಲ್ಯಾಂಡ್ ವಿರುದ್ಧ ಟಿ20 ಸರಣಿ: ಡಕ್ವರ್ಥ್ ಲೂಯಿಸ್ ನಲ್ಲೂ ‘ಟೈ’, ಸರಣಿ ಭಾರತ ಕೈವಶ!

ನೇಪಿಯರ್(ನ.22): ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ಮೂರನೇ ಹಾಗೂ ಕೊನೆಯ ಟಿ20 ಪಂದ್ಯವು ಟೈನಲ್ಲಿ ಅಂತ್ಯವಾಗಿದೆ. ಈ ಮೂಲಕ ಮೂರು ಪಂದ್ಯಗಳ ಟಿ20 ಸರಣಿಯನ್ನು 1-0 ಅಂತರದಲ್ಲಿ ಕೈವಶ ಮಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ನ್ಯೂಜಿಲೆಂಡ್ ನೀಡಿದ್ದ 161 ರನ್‌ಗಳ ಸವಾಲಿನ ಗುರಿ ಬೆನ್ನತ್ತಿದ ಟೀಂ ಇಂಡಿಯಾ, 9 ಓವರ್ ಅಂತ್ಯದ ವೇಳೆಗೆ 4 ವಿಕೆಟ್ ಕಳೆದುಕೊಂಡು 75 ರನ್ ಗಳಿಸಿದ್ದಾಗ ಪಂದ್ಯಕ್ಕೆ ಮಳೆರಾಯ ಅಡ್ಡಿಪಡಿಸಿದ. ಹೀಗಾಗಿ ಡೆಕ್ವರ್ಥ್ ಲೂಯಿಸ್ ನಿಯಮದನ್ವಯ ಪಂದ್ಯವನ್ನು ಟೈ ಎಂದು ಘೋಷಿಸಲಾಯಿತು.

ಇಲ್ಲಿನ ಮೆಕ್‌ಲ್ಯಾನ್ ಪಾರ್ಕ್‌ ಮೈದಾನದಲ್ಲಿ ಆಯೋಜನೆಗೊಂಡಿದ್ದ ಮೂರನೆ ಟಿ20 ಪಂದ್ಯ ಆರಂಭಕ್ಕೂ ಮುನ್ನವೇ ಮಳೆರಾಯ ಕೊಂಚ ಅಡ್ಡಿಪಡಿಸಿದ್ದ. ಹೀಗಾಗಿ ಟಾಸ್ ಕೂಡಾ ಕೆಲಕಾಲ ತಡವಾಗಿ ನಡೆಯಿತು. ಇನ್ನು ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ ತಂಡವು ಮೊಹಮ್ಮದ್ ಸಿರಾಜ್ ಹಾಗೂ ಆರ್ಶದೀಪ್ ಸಿಂಗ್ ಮಾರಕ ದಾಳಿಗೆ ತತ್ತರಿಸಿ 19.4 ಓವರ್‌ಗಳಲ್ಲಿ 160 ರನ್ ಬಾರಿಸಿ ಸರ್ವಪತನ ಕಂಡಿತು. ನ್ಯೂಜಿಲೆಂಡ್ ತಂಡದ ಪರ ಆರಂಭಿಕ ಬ್ಯಾಟರ್ ಡೆವೊನ್ ಕಾನ್‌ವೇ 59 ರನ್ ಬಾರಿಸಿದರೆ, ಮಧ್ಯಮ ಕ್ರಮಾಂಕದಲ್ಲಿ ಗ್ಲೆನ್ ಫಿಲಿಫ್ಸ್‌ 54 ರನ್ ಬಾರಿಸಿ ತಂಡ ಸವಾಲಿನ ಮೊತ್ತ ಕಲೆಹಾಕಲು ನೆರವಾದರು.

ಭಾರತದ ಪರ ಇಶಾನ್ ಕಿಶನ್ 10, ರಿಷಬ್ ಪಂತ್ 11, ಸೂರ್ಯಕುಮಾರ್ ಯಾದವ್ 13, ಹಾರ್ದಿಕ್ ಪಾಂಡ್ಯ ಅಜೇಯ 30 ಹಾಗೂ ದೀಪಕ್ ಹೂಡಾ ಅಜೇಯ 9 ರನ್ ಗಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ