ಸೋಮವಾರ, ಏಪ್ರಿಲ್ 29, 2024
ನೇಣಿಗೆ ಶರಣಾದ ಖ್ಯಾತ ನಟಿ ಅಮೃತಾ ಪಾಂಡೆ.!-ಪ್ರಜ್ವಲ್ ರೇವಣ್ಣನಿಂದ 300ಕ್ಕೂ ಹೆಚ್ಚು ಮಹಿಳೆಯರ ಮೇಲೆ ಲೈಂಗಿಕ ಕೃತ್ಯ ; ಲಕ್ಷ್ಮಿ ಹೆಬ್ಬಾಳ್ಕರ್-Weather Alert: ಮುಂದಿನ 5 ದಿನ ರಾಜ್ಯದಲ್ಲಿ ಹಲವೆಡೆ ಬಿಸಿಗಾಳಿ ಎಚ್ಚರಿಕೆ..!-ಮೇ 1ರಂದು ನೇಹಾ ಮನೆಗೆ ಅಮಿತ್ ಶಾ ಭೇಟಿ ; ಮುರುಗೇಶ್ ನಿರಾಣಿ.!-ಲೈಂಗಿಕ ಹಗರಣ ಪ್ರಕರಣ; ಶಾಸಕ ಪ್ರಜ್ವಲ್ ರೇವಣ್ಣ ವಿರುದ್ಧ ಎಸ್‌ಐಟಿ ತನಿಖೆ ಆರಂಭ-ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!-ಸ್ವಾಭಿಮಾನಿ ರಾಜಕಾರಣಿ, ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ-ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ.

Twitter
Facebook
LinkedIn
WhatsApp
ನ್ಯೂಜಿಲ್ಯಾಂಡ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ.

ಜೈಪುರ : ಸೂರ್ಯ ಕುಮಾರ್‌ ಯಾದವ್‌ ಹಾಗೂ ನಾಯಕ ರೋಹಿತ್‌ ಶರ್ಮಾ ಉತ್ತಮ ಜೊತೆಯಾಟದ ನೆರವಿನಿಂದ ನ್ಯೂಜಿಲೆಂಡ್‌ ವಿರುದ್ದ ಟಿ20 ಸರಣಿಯಲ್ಲಿ ಭಾರತ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿದೆ. ಕೋಚ್‌ ರಾಹುಲ್‌ ದ್ರಾವಿಡ್‌ ಮೊದಲ ಪಂದ್ಯದಲ್ಲಿ ಜಯ ಕಂಡಿದ್ದಾರೆ. ಈ ಮೂಲಕ ಟೀಂ ಇಂಡಿಯಾ ಸರಣಿಯಲ್ಲಿ 1-0 ಅಂತರದಿಂದ ಕಾಯ್ದುಕೊಂಡಿದೆ.

ಇಂದೋರ್‌ನ ಸ್ವಾಮಿ ಮಾನಸಿಂಗ್‌ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ನಡೆಸಿದ ನ್ಯೂಜಿಲೆಂಡ್‌ ತಂಡಕ್ಕೆ ಭುವನೇಶ್ವರ್‌ ಕುಮಾರ್‌ ಆರಂಭಿಕ ಆಘಾತ ನೀಡಿದ್ರು, ಡಿ ಮಿಚೆಲ್‌ ಶೂನ್ಯಕ್ಕೆ ಔಟಾಗಿ ಫೆವಿಲಿಯನ್‌ ಹಾದಿ ಹಿಡಿಯುತ್ತಲೇ ಮಾರ್ಟಿನ್‌ ಗುಫ್ಟಿಲ್‌ಗೆ ಜೊತೆಯಾದ ಮಾರ್ಕ್‌ ಚಾಂಪ್‌ ಮನ್‌ ಉತ್ತಮ ಜೊತೆಯಾಟ ನೀಡಿದ್ರು. ಮಾರ್ಟಿನ್‌ ಗುಫ್ಟಿಲ್‌ 42 ಎಸೆತಗಳಲ್ಲಿ 70 ರನ್‌ ಬಾರಿಸಿದ್ರೆ, ಮಾರ್ಕ್‌ ಚಾಂಪ್‌ಮನ್‌ 50 ಎಸೆತಗಳಲ್ಲಿ 63 ರನ್‌ ಸಿಡಿಸಿದ್ದಾರೆ. ಸೈಫರ್ಟ್‌ ಹೊರತು ಪಡಿಸಿ ಉಳಿದ ಆಟಗಾರರು ಎರಡಂಕಿ ರನ್‌ ದಾಟುವಲ್ಲಿ ಎಡವಿದ್ದಾರೆ. ಅಂತಿಮವಾಗಿ ನ್ಯೂಜಿಲೆಂಡ್‌ ತಂಡ 20 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 164 ರನ್‌ ಬಾರಿಸಿದೆ. ಭಾರತ ಪರ ಆರ್.ಅಶ್ವಿನ್‌ ಹಾಗೂ ಭುವನೇಶ್ವರ್‌ ಕುಮಾರ್‌ ತಲಾ 2 ವಿಕೆಟ್‌ ಪಡೆದ್ರೆ ದೀಪಕ್‌ ಚಹರ್‌ ಹಾಗೂ ಸಿರಾಜ್‌ ತಲಾ 1 ವಿಕೆಟ್‌ ಪಡೆದುಕೊಂಡಿದ್ದಾರೆ.

ನ್ಯೂಜಿಲೆಂಡ್‌ ನೀಡಿದ್ದ 165 ರನ್‌ ಗುರಿಯನ್ನು ಬೆನ್ನತ್ತಲು ಹೊರಟ ಭಾರತಕ್ಕೆ ರೋಹಿತ್‌ ಶರ್ಮಾ ಹಾಗೂ ರಾಹುಲ್‌ ಉತ್ತಮ ಜೊತೆಯಾಟದ ಭರವಸೆಯನ್ನು ನೀಡಿದ್ರು. ಆದರೆ ರಾಹುಲ್‌ 14 ಎಸೆತಗಳಲ್ಲಿ 15 ರನ್‌ ಗಳಿಸಿದ್ದಾಗ ಸ್ಟನ್ನರ್‌ಗೆ ವಿಕೆಟ್‌ ಒಪ್ಪಿಸಿದ್ರು. ನಂತರ ರೋಹಿತ್‌ ಶರ್ಮಾ ಜೊತೆಯಾದ ಸೂರ್ಯಕುಮಾರ್‌ ಯಾದವ್‌ ಉತ್ತಮ ಜೊತೆಯಾಟ ನೀಡಿದ್ರು. 40 ಎಸೆತಗಳಲ್ಲಿ 62 ರನ್‌ ಗಳಿಸಿದ್ರೆ, ರೋಹಿತ್‌ ಶರ್ಮಾ 36 ಎಸೆತಗಳಲ್ಲಿ 48 ರನ್‌ ಗಳಿಸಿದ್ದಾರೆ. ನಂತರದಲ್ಲಿ ರಿಷಬ್‌ ಪಂತ್‌ 17 ರನ್‌ ಸಿಡಿಸಿದ್ರು. ಶ್ರೇಯಸ್‌ ಅಯ್ಯರ್‌ ಹಾಗೂ ವೆಂಕಟೇಶ್‌ ಅಯ್ಯರ್‌ ಕೆಟ್ಟ ಹೊಡೆತಕ್ಕೆ ವಿಕೆಟ್‌ ಒಪ್ಪಿಸಿದ್ರೆ, ಅಕ್ಷರ್‌ ಪಟೇಲ್‌ 1 ರನ್‌ ಬಾರಿಸಿದ್ದಾರೆ. ಈ ಮೂಲಕ ಭಾರತ 19.3 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 166 ರನ್‌ ಗಳಿಸುವ ಮೂಲಕ ಗೆಲುವು ಕಂಡಿದೆ. ನ್ಯೂಜಿಲೆಂಡ್‌ ಪರ ಬೌಲ್ಟ್‌ 2 ಹಾಗೂ ಸೌಥಿ ಹಾಗೂ ಸಂತನರ್‌ 1 ಒಂದೊಂದು ವಿಕೆಟ್‌ ಪಡೆದುಕೊಂಡಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.

ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !. Twitter Facebook LinkedIn WhatsApp ಮಂಗಳೂರು: 2024 ಲೋಕಸಭಾ ಚುನಾವಣೆಯಲ್ಲಿ ಮಂಗಳೂರು

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು