ಪಂಜಾಬಿನ ಚುನಾವಣಾ ಫಲಿತಾಂಶದ ಮುನ್ನ ಬಂದಿರುವ ಸಮೀಕ್ಷೆಗಳು ಆಮ್ ಆದ್ಮಿ ಪಕ್ಷ ಅಧಿಕಾರಕ್ಕೇರುವ ಭವಿಷ್ಯ ನುಡಿದಿದೆ.
ಒಂದು ವೇಳೆ ಆಮ್ ಆದ್ಮಿ ಪಕ್ಷ ಪಂಜಾಬಿನಲ್ಲಿ ಅಧಿಕಾರಕ್ಕೇರಿದರೆ, ಭಯ ಗೊಂಡಿರುವ ಪಕ್ಷ ಬಿಜೆಪಿಯಲ್ಲ, ಕಾಂಗ್ರೆಸ್ ಎಂದರೆ ಆಶ್ಚರ್ಯಪಡಬೇಡಿ!
ಯಾಕೆಂದರೆ ಬಿಜೆಪಿಯ ಅಧಿಕಾರ ವಿರೋಧಿ ಅಲೆಯ ಲಾಭಪಡೆಯುವ ವಿರೋಧಪಕ್ಷವಾಗಿ ದೇಶಾದ್ಯಂತ ಆಮ್ ಆದ್ಮಿ ಪಕ್ಷ ಬೆಳೆಯಬಹುದು ಎಂಬುದು ರಾಜಕೀಯ ವಿಶ್ಲೇಷಕರ ಸ್ಪಷ್ಟ ನುಡಿ.
ಒಂದು ಪೂರ್ಣಪ್ರಮಾಣದ ರಾಜ್ಯದಲ್ಲಿ ಒಂದು ವೇಳೆ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೇರಿದರೆ, ಅದು ದೇಶಾದ್ಯಂತ ಬದಲಿ ವಿರೋಧಪಕ್ಷವಾಗಿ ಆಗ ವಿರೋಧ ಪಕ್ಷದ ನಾಯಕನಾಗಿ ಬೆಳೆಯಬಹುದು ಎಂಬುದು ರಾಜಕೀಯ ವಿಶ್ಲೇಷಕರ ಅಂಬೋಣ.
ಈಗ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ದೇಶಾದ್ಯಂತ ಕಾರ್ಯನಿರ್ವಹಿಸುತ್ತಿದೆ. ಆ ಸ್ಥಾನವನ್ನು ಆಮ್ ಆದ್ಮಿ ಪಕ್ಷ ತುಂಬಬಹುದು. ಕಾಂಗ್ರೆಸ್ನ ಜೊತೆಗಿರುವ ಬಿಜೆಪಿ ವಿರೋಧಿ ಮತಗಳು ಆಮ್ ಆದ್ಮಿಯ ಕಡೆಗೆ ಒಲವು ತೋರಿಸಬಹುದು ಎಂಬುದು ರಾಜಕೀಯ ವಿಶ್ಲೇಷಕರ ಮಾತು.
ಸಮರ್ಥರನ್ನು ಪಕ್ಷದಿಂದ ದೂರ ಇರಿಸುವ ಹಾಗೂ ತನ್ನ ಬೆಂಬಲಿಗರಿಗೆ ಮನೆ ಹಾಕುವ ಸಂಸ್ಕೃತಿ ಇರುವ ಕಾಂಗ್ರೆಸ್ ಪಕ್ಷ ದೇಶಾದ್ಯಂತ ತನ್ನ ನೆಲೆಯನ್ನು ಕಳೆದುಕೊಳ್ಳುತ್ತಿರುವುದು ಸ್ಪಷ್ಟವಾಗುತ್ತಿದೆ. ಈ ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ವಿರೋಧ ಪಕ್ಷದ ನಾಯಕನ ಸ್ಥಾನವನ್ನು ಆಮ್ ಆದ್ಮಿ ಪಕ್ಷ ತುಂಬಬಹುದೇ ಎಂಬುದು ಈಗ ಕುತೂಹಲದ ಸಂಗತಿ. ಪಂಜಾಬಿನ ಚುನಾವಣೆಯ ಫಲಿತಾಂಶ ಈ ಕುತೂಹಲಕ್ಕೆ ಸಮರ್ಪಕವಾದ ಉತ್ತರ ನೀಡಲಿದೆ ಎಂಬುದು ರಾಜಕೀಯ ವಿಶ್ಲೇಷಕರ ಸ್ಪಷ್ಟ ನುಡಿ. ಏನಾಗುತ್ತದೆ ಎಂಬುದನ್ನು ಕಾದು ನೋಡೋಣ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist