ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಂಜಾಬ್: ಫರೀದ್‌ಕೋಟ್‌ ನಲ್ಲಿ ಡೇರಾ ಅನುಯಾಯಿಗೆ ಗುಂಡಿಕ್ಕಿ ಹತ್ಯೆ, ಘಟನೆ ಸಿಸಿಟಿವಿಯಲ್ಲಿ ಸೆರೆ

Twitter
Facebook
LinkedIn
WhatsApp
ಪಂಜಾಬ್: ಫರೀದ್‌ಕೋಟ್‌ ನಲ್ಲಿ ಡೇರಾ ಅನುಯಾಯಿಗೆ ಗುಂಡಿಕ್ಕಿ ಹತ್ಯೆ, ಘಟನೆ ಸಿಸಿಟಿವಿಯಲ್ಲಿ ಸೆರೆ

ಚಂಡೀಗಢ: ಪಂಜಾಬ್‌ನ ಫರೀದ್‌ಕೋಟ್ ಜಿಲ್ಲೆಯಲ್ಲಿ 2015ರ ಧರ್ಮ ನಿಂದನೆ ಪ್ರಕರಣದ ಆರೋಪಿ ಹಾಗೂ ಡೇರಾ ಸಚ್ಚಾ ಸೌದಾ ಅನುಯಾಯಿಯೊಬ್ಬರ ಮೇಲೆ ಗುರುವಾರ ಐವರು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಫರೀದ್‌ಕೋಟ್‌ನ ಕೊಟ್ಕಾಪುರದಲ್ಲಿ ಇಂದು ಬೆಳಗ್ಗೆ 7 ಗಂಟೆ ಸುಮಾರಿಗೆ ಡೇರಾ ಅನುಯಾಯಿ ಪರ್ದೀಪ್ ಸಿಂಗ್ ಅವರ ಡೈರಿ ಅಂಗಡಿಯಲ್ಲಿ ಗುಂಡು ಹಾರಿಸಲಾಗಿದೆ. ಘಟನೆಯಲ್ಲಿ ಅವರ ಭದ್ರತಾ ಸಿಬ್ಬಂದಿ ಮತ್ತು ಇನ್ನೊಬ್ಬ ವ್ಯಕ್ತಿಯೂ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೀಕರ ಗುಂಡಿನ ದಾಳಿಯ ದೃಶ್ಯ ಸಮೀಪದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದ್ವಿಚಕ್ರವಾಹನದಲ್ಲಿ ಬಂದ ಐವರು ದಾಳಿಕೋರರಲ್ಲಿ ಇಬ್ಬರು ಪರ್ದೀಪ್ ಸಿಂಗ್ ಅವರ ಅಂಗಡಿಗೆ ನುಗ್ಗಿ ಅವರ ಮೇಲೆ ಗುಂಡು ಹಾರಿಸಿದ್ದಾರೆ.

ಅವರು ಅಂಗಡಿಯಿಂದ ಹೊರಗೆ ಓಡಿಹೋದ ನಂತರ, ಹೊರಗೆ ಕಾಯುತ್ತಿದ್ದ ಇತರ ಮೂವರು ಸಹ ಗುಂಡಿನ ದಾಳಿ ನಡೆಸಿದರು. ಘಟನೆಯಲ್ಲಿ ಹಲವು ಬಾರಿ ಗುಂಡು ಹಾರಿಸಲಾಗಿದೆ. ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಜೂನ್ 2015 ರಲ್ಲಿ ಬುರ್ಜ್ ಜವಾಹರ್ ಸಿಂಗ್ ವಾಲಾ ಗ್ರಾಮದ ಗುರುದ್ವಾರದಿಂದ ಗುರು ಗ್ರಂಥ ಸಾಹಿಬ್‌ನ ಪವಿತ್ರ ಪುಸ್ತಕ ನಾಪತ್ತೆಯಾಗಿತ್ತು. ಈ ಪವಿತ್ರ ಪುಸ್ತಕ ಕಳ್ಳತನ ಪ್ರಕರಣದಲ್ಲಿ ಮತ್ತು ಸಿಖ್ ಪವಿತ್ರ ಪುಸ್ತಕ ಹರಿದ ಹಾಕಿದ ಪ್ರಕರಣದಲ್ಲಿ ಪರ್ದೀಪ್ ಸಿಂಗ್ ಆರೋಪಿಯಾಗಿದ್ದರು. ಸದ್ಯ ಜಾಮೀನಿನ ಮೇಲಿದ್ದರು.

ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕಿ(ಕಾನೂನು ಮತ್ತು ಸುವ್ಯವಸ್ಥೆ) ಅರ್ಪಿತ್ ಶುಕ್ಲಾ ಮತ್ತು ಪೊಲೀಸ್ ಮಹಾನಿರೀಕ್ಷಕ(ಫರೀದ್‌ಕೋಟ್ ರೇಂಜ್) ಪ್ರದೀಪ್ ಕುಮಾರ್ ಯಾದವ್ ಸೇರಿದಂತೆ ಹಲವಾರು ಹಿರಿಯ ಅಧಿಕಾರಿಗಳು ಅಪರಾಧ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ