ಮಂಗಳವಾರ, ಮೇ 21, 2024
ಈ ಆಟಗಾರ ಕಣಕ್ಕಿಳಿದಾಗಿನಿಂದ RCB ಒಂದೇ ಒಂದು ಪಂದ್ಯವನ್ನು ಸೋತಿಲ್ಲ!-ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು-ವಿಧಾನ ಪರಿಷತ್‌ನ 11 ಸ್ಥಾನಗಳಿಗೆ ಚುನಾವಣೆ ಘೋಷಣೆ..!-ಪಡೀಲ್: ರಸ್ತೆ ಬದಿ ಬೈಕ್ ನಿಲ್ಲಿಸಿ ನಿಂತಿದ್ದ ವ್ಯಕ್ತಿಗೆ ಕಾರು ಡಿಕ್ಕಿ; ಕೇಬಲ್ ಟೆಕ್ನಿಶಿಯನ್ ಸಾವು.!-ಪೋರ್ಷೆ ಕಾರು ಬೈಕ್‌ಗೆ ಡಿಕ್ಕಿ ಹೊಡೆದು 2 ಮಂದಿ ಸಾವು: ಅಪ್ರಾಪ್ತ ಚಾಲಕನಿಗೆ ಅಪಘಾತದ ಕುರಿತು ಪ್ರಬಂಧ ಬರೆಯಲು ಕೋರ್ಟ್‌ನಿಂದ ಸೂಚನೆ-ಲೈಂಗಿಕ ದೌರ್ಜನ್ಯ ಪ್ರಕರಣ; ಹೆಚ್​ಡಿ ರೇವಣ್ಣಗೆ ಜಾಮೀನು ಮಂಜೂರು..!-ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ; ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ..!-ನಾನು ರೇವ್ ಪಾರ್ಟಿಗೆ ಹೋಗಿಲ್ಲ; ನಟಿ ವಿಡಿಯೋ ಸಂದೇಶ : ಐವರ ಬಂಧನ.!-ವಾರಗಳ ಹಿಂದೆ ಅಪಾರ್ಟ್ಮೆಂಟ್ ನ ಮೇಲ್ಛಾವಣಿಯಿಂದ ಬೀಳುತ್ತಿದ್ದ ಮಗುವಿನ ರಕ್ಷಣೆ ಬಳಿಕ ತಾಯಿ ಶವವಾಗಿ ಪತ್ತೆ..!-ಬೆಂಗಳೂರು: ರೇವ್ ಪಾರ್ಟಿ ಮೇಲೆ ಸಿಸಿಬಿ ಪೊಲೀಸರ ದಾಳಿ ; ಹಲವು ತೆಲುಗು ನಟ ನಟಿಯರು ಮತ್ತು ಮಾಡೆಲ್ ಗಳು ಭಾಗಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಕ್ಕದ ರಾಜ್ಯಗಳಲ್ಲಿ ಭಾರೀ ಪ್ರಮಾಣದಲ್ಲಿ ಕೊರೊನಾ ಪ್ರಕರಣ ಏರಿಕೆ - ಮೂರನೇ ಅಲೆಯ ಆತಂಕದಲ್ಲಿ ಕರಾವಳಿ ಜಿಲ್ಲೆಗಳು.

Twitter
Facebook
LinkedIn
WhatsApp
ಕಳೆದ 24 ಗಂಟೆಗಳಲ್ಲಿ 43,509 ಮಂದಿಗೆ ಕೊರೋನಾ ಸೋಂಕು, 634 ಸಾವು.

ಕರ್ನಾಟಕದ ಪಕ್ಕದ ರಾಜ್ಯ ಕೇರಳದಲ್ಲಿ ಕೊರೊನಾ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಏರಿಕೆ ಕಂಡಿವೆ. ಕಳೆದ ಮೂರ್ನಾಲ್ಕು ದಿನಗಳಿಂದ ಪ್ರತಿನಿತ್ಯ ಸುಮಾರು 22 ಸಾವಿರಕ್ಕೂ ಹೆಚ್ಚು ಕೊರೊನಾ ಸೋಂಕಿತರು ಪತ್ತೆಯಾಗುತ್ತಿದ್ದು, ದೇಶದಲ್ಲಿ ಒಟ್ಟಾರೆಯಾಗಿ ಕಾಣಸಿಗುತ್ತಿರುವ ಕೊರೊನಾ ಪ್ರಕರಣಗಳ ಅರ್ಧ ಪಾಲನ್ನು ಕೇರಳ ಭರಿಸುತ್ತಿದೆ ಎನ್ನುವುದು ಆತಂಕಕಾರಿಯಾಗಿದೆ. ಹೊಸದಾಗಿ ಪತ್ತೆಯಾಗುತ್ತಿರುವ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆ ಕಾಣುತ್ತಿರುವುದು ಮೂರನೇ ಅಲೆಗೆ ನಾಂದಿಯೇ ಎನ್ನುವ ಅನುಮಾನವೂ ದಟ್ಟವಾಗಿದ್ದು, ಕೇರಳದ ಬೆನ್ನಲ್ಲೇ ನೆರೆಯ ಕರ್ನಾಟಕ ಹಾಗೂ ತಮಿಳುನಾಡು ರಾಜ್ಯಗಳಲ್ಲೂ ಸೋಂಕಿತರ ಪ್ರಮಾಣ ಹೆಚ್ಚಳವಾಗುತ್ತಿದೆ.

ಭಾರತದಲ್ಲಿ ಗುರುವಾರ (ಜುಲೈ 29ರಂದು) ಸುಮಾರು 45 ಸಾವಿರ ಕೊರೊನಾ ಪ್ರಕರಣಗಳು ಕಾಣಿಸಿಕೊಂಡಿದ್ದು, ಬರೋಬ್ಬರಿ 22 ದಿನಗಳ ನಂತರ ಇಷ್ಟೊಂದು ಪ್ರಮಾಣದಲ್ಲಿ ಸೋಂಕಿತರು ಪತ್ತೆಯಾಗಿರುವುದು ಮತ್ತೆ ಆತಂಕಕ್ಕೆ ಕಾರಣವಾಗಿದೆ. ಗುರುವಾರದಂದು 44,681 ಪ್ರಕರಣ ಹೊಸದಾಗಿ ದಾಖಲಾಗಿದ್ದು, ಜುಲೈ 7 ರ ನಂತರ ಇದೇ ಅತ್ಯಧಿಕವಾಗಿದೆ. ಹೀಗಾಗಿ ಸಂಭವನೀಯ ಮೂರನೇ ಅಲೆ ಆತಂಕ ಮೂಡಲಾರಂಭಿಸಿದ್ದು, ಮತ್ತೊಂದು ಅನಾಹುತ ದೇಶವನ್ನು ಕಾಡಲಿದೆಯಾ ಎಂದೆನಿಸುತ್ತಿದೆ.
ಕೇರಳ, ಕರ್ನಾಟಕ, ತಮಿಳುನಾಡು ರಾಜ್ಯಗಳ ಜತೆಗೆ ಮಹಾರಾಷ್ಟ್ರದಲ್ಲೂ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು, ಗುರುವಾರ 7,242 ಜನ ಸೋಂಕಿತರು ಪತ್ತೆಯಾಗುವ ಮೂಲಕ ಭಯ ಮೂಡಿಸಿದೆ. ಇತ್ತ ಕೇರಳದಲ್ಲಿ ಅದೇ ದಿನ 22,064 ಪ್ರಕರಣಗಳು ಹೊಸದಾಗಿ ಕಾಣಸಿಕ್ಕಿವೆ. ಹಾಗೆ ನೋಡಿದರೆ ಕಳೆದ ಮೂರು ದಿನಗಳಿಂದ ಇಡೀ ದೇಶದಲ್ಲಿ ಪತ್ತೆಯಾಗುವ ಕೊರೊನಾ ಪ್ರಕರಣಗಳ ಪಾಲಿನಲ್ಲಿ ಶೇ.50ಕ್ಕೂ ಅಧಿಕ ಸೋಂಕಿತರನ್ನು ದಾಖಲಿಸುತ್ತಿದ್ದ ಕೇರಳದಲ್ಲಿ ಗುರುವಾರ ಆ ಪ್ರಮಾಣ ಕೊಂಚ ಇಳಿಮುಖ ಕಂಡಿದೆ.

ಕರ್ನಾಟಕದಲ್ಲಿಯೂ ಸುಮಾರು 19 ದಿನಗಳ ನಂತರ ದೈನಂದಿನ ಕೊರೊನಾ ಪ್ರಕರಣಗಳ ಸಂಖ್ಯೆ 2 ಸಾವಿರದ ಗಡಿ ದಾಟಿದ್ದು, ಗುರುವಾರ 2,052 ಸೋಂಕಿತರು ಪತ್ತೆಯಾಗಿದ್ದಾರೆ. ಬುಧವಾರದಂದು 1,531 ರಷ್ಟಿದ್ದ ಸೋಂಕಿತರ ಸಂಖ್ಯೆ ಒಂದೇ ದಿನದಲ್ಲಿ 500ರಷ್ಟು ಹೆಚ್ಚಳ ಕಂಡಿದೆ. ಕೇರಳಕ್ಕೆ ಹೊಂದಿಕೊಂಡಂತಿರುವ ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಹಾಗೂ ಬೆಂಗಳೂರಿನಲ್ಲಿ ಪಾಸಿಟಿವಿಟಿ ಪ್ರಮಾಣ ಏರುಗತಿಯಲ್ಲಿ ಸಾಗುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲೆಯನ್ನು ರೆಡ್​ ಜೋನ್​ ಎಂದು ಕರ್ನಾಟಕ ರಾಜ್ಯ ಸರ್ಕಾರ ಘೋಷಿಸಿದೆ. ಬೆಂಗಳೂರಿನಲ್ಲಿ ಬುಧವಾರ 376 ಪ್ರಕರಣಗಳು ಪತ್ತೆಯಾಗಿದ್ದು, ಗುರುವಾರದಂದು 505ಕ್ಕೆ ಏರಿಕೆಯಾಗಿದ್ದರೆ, ದಕ್ಷಿಣ ಕನ್ನಡದಲ್ಲಿ 396 ಪ್ರಕರಣಗಳು ಹೊಸದಾಗಿ ಕಾಣಸಿಕ್ಕಿವೆ.

ತಮಿಳುನಾಡಿನಲ್ಲಿ ಬರೋಬ್ಬರಿ 69 ದಿನಗಳ ನಂತರ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡಿದ್ದು, ಬುಧವಾರ 1,756ರಷ್ಟಿದ್ದ ಪ್ರಕರಣಗಳು ಗುರುವಾರದಂದು 1,859ಕ್ಕೆ ಏರಿಕೆಯಾಗಿವೆ. ಈಶಾನ್ಯ ರಾಜ್ಯಗಳಲ್ಲೂ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವಂತೆ ಕಾಣುತ್ತಿದ್ದು ಮಿಜೋರಾಂನಲ್ಲಿ 1,100, ಮಣಿಪುರದಲ್ಲಿ 1,000 ಹಾಗೂ ಮೇಘಾಲಯದಲ್ಲಿ 731 ಪ್ರಕರಣಗಳು ಕಂಡುಬಂದಿವೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು

ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು Twitter Facebook LinkedIn WhatsApp ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು