ಭಾನುವಾರ, ಡಿಸೆಂಬರ್ 22, 2024
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಕ್ಷವನ್ನು ಅಧಿಕಾರಕ್ಕೆ ತರುವುದು ಮಾತ್ರ ನನ್ನ ಗುರಿ: ಡಿಕೆ ಶಿವಕುಮಾರ್.

Twitter
Facebook
LinkedIn
WhatsApp
ಬಿಜೆಪಿ ಅಧಿಕಾರಕ್ಕೆ ಬಂದು ಜನರು ಎಲ್ಲದಕ್ಕೂ ಸರತಿ ಸಾಲಿನಲ್ಲಿ ನಿಲ್ಲುವಂತಾಗಿದೆ: ಡಿಕೆ ಶಿವಕುಮಾರ್.

ಬೆಂಗಳೂರು: ನನ್ನ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಷ್ಟೇ. ವಿಧಾನಸೌಧದಲ್ಲಿ ಅಧಿಕಾರ ಹಿಡಿಯಲು ನನ್ನನ್ನು ಚಪ್ಪಡಿ ಕಲ್ಲಿನ ಮೆಟ್ಟಿಲು ಮಾಡಿಕೊಳ್ಳಿ ಅಂತಾ ನಾನೇ ಹೇಳಿದ್ದೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ತಿಳಿಸಿದ್ದಾರೆ.
ಸದಾಶಿವನಗರದ ತಮ್ಮ ನಿವಾಸದ ಬಳಿ ಬುಧವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, ಬಿಜೆಪಿ ಸಮಸ್ಯೆಗೂ, ಕಾಂಗ್ರೆಸ್ ವಿಚಾರಕ್ಕೂ ಬಹಳಷ್ಟು ವ್ಯತ್ಯಾಸವಿದೆ. ಈಗ ನಮ್ಮಲ್ಲಿ ಯಾವ ಕುರ್ಚಿಯೂ ಖಾಲಿ ಇಲ್ಲ. ಈಗ ನಮ್ಮ ರೇಸ್ ಏನಿದ್ದರೂ ಬಿಜೆಪಿಯನ್ನು ಅಧಿಕಾರದಿಂದ ಇಳಿಸಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದಾಗಿದೆ. ಅದಕ್ಕೆ ನಾವು ಸಮಯ ನೀಡಬೇಕು. ಅದನ್ನು ಬಿಟ್ಟು ಬೇರೆ ವಿಚಾರಕ್ಕೆ ಸಮಯ ನೀಡಿದರೆ ಅದು ವ್ಯರ್ಥವಾಗುತ್ತದೆ ಎಂದರು.

ನಾವೆಲ್ಲರೂ ಬಿಜೆಪಿ ಮಣಿಸಲು ಶ್ರಮಿಸೋಣ. ನಾವೆಲ್ಲ ಕಾರ್ಯಕರ್ತರು. ಜನ ರಾಜ್ಯದಲ್ಲಿ ಬದಲಾವಣೆ ತರಲು ಬಯಸುತ್ತಿದ್ದಾರೆ. ಆ ನಿಟ್ಟಿನಲ್ಲಿ ಕೆಲಸ ಮಾಡೋಣ ಎಂದು ಹೇಳಿದರು.
ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಮಾತ್ರ ಗೆಲುವು ಸಾಧ್ಯ ಎಂದು ಅಖಂಡ ಶ್ರೀನಿವಾಸಮೂರ್ತಿ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ ಬಹಳ ಸಂತೋಷ ಎಂದು ಪ್ರತಿಕ್ರಿಯಿಸಿದರು.

ಡಿ.ಕೆ. ಶಿವಕುಮಾರ್ ಅವರಿಗೆ ವಯಸ್ಸಿದೆ, ಸಿದ್ದರಾಮಯ್ಯನವರು 2023ಕ್ಕೆ ಸಿಎಂ ಆಗಲಿ, ನಂತರ ಡಿ.ಕೆ. ಶಿವಕುಮಾರ್ ಆಗಲಿ ಎಂಬ ಶಾಸಕ ರಾಮಪ್ಪ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಗಮನ ಸೆಳೆದಾಗ, ಸಿಎಂ ಆಗಬೇಕೆಂಬ ಆತುರವಿದೆ ಎಂದು ನಾನು ಯಾವತ್ತಾದರೂ ಹೇಳಿದ್ದೀನಾ..? ನನ್ನ ಗುರಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರುವುದು.

ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು, ವಿಧಾನಸೌಧದ ಮೂರನೇ ಮಹಡಿ ಏರಲು ನನ್ನನ್ನು ಮೆಟ್ಟಿಲಾಗಿ ಬಳಸಿಕೊಳ್ಳಿ ಅಂತಾ ನಾನು ಹೇಳಿದ್ದೇನೆ. ಯಾರ್ಯಾರು ಏನೇನು ಸಲಹೆ ಕೊಡುತ್ತಾರೋ, ಕೊಡಲಿ ಅದನ್ನು ಸ್ವೀಕರಿಸೋಣ ಎಂದರು. ಶಾಸಕರ ಇಂತಹ ಹೇಳಿಕೆಗಳಿಂದ ಗೊಂದಲ ಸೃಷ್ಟಿಯಾಗುವುದಿಲ್ಲವೇ ಎಂಬ ಪ್ರಶ್ನೆಗೆ, ಈ ವಿಚಾರವಾಗಿ ನಮ್ ಪಕ್ಷದ ಹೈಕಮಾಂಡ್ ಏನು ಹೇಳಬೇಕೋ ಅದನ್ನು ಹೇಳಿದೆ. ಶಾಸಕರು ಹೇಳಿಕೆ ನೀಡುತ್ತಿದ್ದಾರೆ ಅಂತಾ ನೀವು ಹೇಳಿದ್ದೀರಿ, ನಾನೂ ಕೆಲವು ನೋಡಿದ್ದೇನೆ. ಶಾಸಕರ ಹೇಳಿಕೆಗಳನ್ನು ಶಾಸಕಾಂಗ ಪಕ್ಷದ ನಾಯಕರು ನೋಡಿಕೊಳ್ಳುತ್ತಾರೆ ಎಂದು ಅವರು ನುಡಿದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಮುರುಡೇಶ್ವರ

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!

ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ

ಅಂಕಣ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು