ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಳು ಅರುಣ್ ಪುತ್ತಿಲ ಬಹುತೇಕ ಫಿಕ್ಸ್.. ! ಪುತ್ತೂರಿನಲ್ಲಿ ಕಾವೇರಿದ ಚುನಾವಣಾ ಸಮರ

Twitter
Facebook
LinkedIn
WhatsApp
WhatsApp Image 2023 04 11 at 7.19.00 PM

ಪುತ್ತೂರು:ಪುತ್ತೂರಿನ ಹಿಂದೂ ಕಾರ್ಯಕರ್ತರು ಇದೀಗ ವಿಧಾನ ಸಭಾ ಚುನಾವಣೆಯ ಬಿಜೆಪಿ ಅಭ್ಯರ್ಥಿಯ ಆಯ್ಕೆಯ ವಿಷಯವಾಗಿ ಅಸಮಾಧಾನಗೊಂಡಿದ್ದು, ಪುತ್ತೂರು ಪಾಳಯದಲ್ಲಿ ಪಟ್ಟಿ ಪ್ರಕಟಗೊಳ್ಳುತ್ತಿದ್ದಂತೆ ಅಸಮಧಾನದ ಹೊಗೆಯಾಡಲಾರಂಭಿಸಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಣಕ್ಕಿಳಿಯುವ ಬಿಜೆಪಿ ಅಭ್ಯರ್ಥಿಗಳ ಮೊದಲ ಹಂತದ ಪಟ್ಟಿ ಬಿಡುಗಡೆಯಾಗಿದ್ದೇ ತಡ ಕರಾವಳಿಯಲ್ಲಿ ಭಿನ್ನ ಮತ ಸ್ಫೋಟಗೊಂಡಿದೆ.ಪುತ್ತೂರಿನಲ್ಲಿ ಅರುಣ್ ಪುತ್ತಿಲರವರಿಗೆ ಅಭ್ಯರ್ಥಿ ಸ್ಥಾನ ನೀಡಬೇಕೆನ್ನುವುದು ಹಿಂದು ಕಾರ್ಯಕರ್ತರ ಆಶಯವಾಗಿತ್ತು. ಅವರಿಗೆ ಟಿಕೆಟ್ ಕೈ ತಪ್ಪಿದ ಬೆನ್ನಲ್ಲೇ ಕಾರ್ಯಕರ್ತರು ಅಸಮಾಧಾನಗೊಂಡಿದ್ದಾರೆ. ಒತ್ತಾಯದ ಮೇರೆಗೆ ಹಾಗೂ ಹಿಂದುತ್ವದ ಧ್ವ ನಿಯನ್ನು ಮತ್ತೆ ಮುನ್ನಲೆಗೆ ತರಲು, ಕಾರ್ಯಕರ್ತರ ಭಾವನೆಗೆ ಬೆಲೆ ನೀಡಿ ಅವರ ಪರವಾಗಿ ಕೆಲಸ ನಿರ್ವಹಿಸಲು ಅರುಣ್ ಕುಮಾರ್ ಪುತ್ತಿಲರವರು ಪಕ್ಷೇತರರಾಗಿ ಸ್ಪರ್ಧಿಸಲಿದ್ದಾರೆ ಎಂದು ತಿಳಿದುಬಂದಿದೆ. ಪಕ್ಷೇತರವಾಗಿ ಸ್ಪರ್ಧಿಸಲಿರುವ ಪುತ್ತಿಲರವರ ಪರವಾಗಿ ಕಾರ್ಯ ನಿರ್ವಹಿಸಲು ಸಾವಿರಾರು ಕಾರ್ಯಕರ್ತರು ಉತ್ಸುಕರಾಗಿದ್ದಾರೆ ಎಂದು ತಿಳಿದುಬಂದಿದೆ.

ನಿನ್ನೆ ಪುತ್ತೂರಿನ ಕೊಟೆಚಾ ಹಾಲ್‌ನಲ್ಲಿ ನಡೆದ ಅರುಣ್ ಕುಮಾರ್ ಪುತ್ತಿಲ ಅಭಿಮಾನಿಗಳ ಸಭೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿ ಪುತ್ತಿಲರವರು ಪಕ್ಷೇತರವಾಗಿ ಸ್ಪರ್ಧಿಸಬೇಕೆಂದು ಒತ್ತಾಯಿಸಿದರು. ಪುತ್ತಿಲರವರು ತಮ್ಮ ಅಭಿಮಾನಿಗಳ ಒತ್ತಾಯಕ್ಕೆ ಮಣಿದು ಎರಡು ದಿನದಲ್ಲಿ ತಮ್ಮ ಸ್ಪಷ್ಟ ನಿಲುವುವನ್ನು ತಿಳಿಸುತ್ತೇನೆ ಎಂದಿದ್ದರು. ಇದೀಗ ಪುತ್ತಿಲರವರು ಪುತ್ತೂರಿನಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ ಎಂದು ಹೇಳಲಾಗುತ್ತಿದ್ದು, ಇದೀಗ ಇಡೀ ಕರಾವಳಿಯ ಚಿತ್ತ ಪುತ್ತೂರು ಕ್ಷೇತ್ರದ ಮೇಲೆ ನೆಟ್ಟಿದೆ  . 

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ