ಪಟಾಕಿ ತಯಾರಿಕೆ ಘಟಕದಲ್ಲಿ ಸ್ಫೋಟ, 8 ಜನರ ಸಾವು
ಪಟಾಕಿ ತಯಾರಿಕೆ ಘಟಕ ಕೃಷ್ಣಗಿರಿ: ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯ ಪಟಾಕಿ ತಯಾರಿಕೆ ಘಟಕದಲ್ಲಿ ಶನಿವಾರ ಸಂಭವಿಸಿದ ಸ್ಫೋಟದಲ್ಲಿ ಮೂವರು ಮಹಿಳೆ ಸೇರಿದಂತೆ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಜಿಲ್ಲೆಯ ಪಳಯಪೇಟೈ ಪಟಾಕಿ ತಯಾರಿಕಾ ಘಟಕದ ಗೋದಾಮಿನಲ್ಲಿ ಹಠಾತ್ ಸ್ಫೋಟ ಸಂಭವಿಸಿದ್ದು, ಸಮೀಪದ ಮನೆಗಳು ಹಾಗೂ ಅಂಗಡಿಗಳಿಗೆ ಹಾನಿಯಾಗಿದೆ. ಪೊಲೀಸರು, ಅಗ್ನಿಶಾಮಕ ಮತ್ತು ರಕ್ಷಣಾ ಪಡೆ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾ ನಡೆಸಿದ್ದಾರೆ. ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.
ಇನ್ನೂ ಈ ಸ್ಫೋಟಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಮೃತರ ಕುಟುಂಬಕ್ಕೆ ತಲಾ 2 ಮತ್ತು ಗಾಯಗೊಂಡವರಿಗೆ ತಲಾ 50, 000 ರೂ. ಪರಿಹಾರ ಘೋಷಿಸಿದ್ದಾರೆ. ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದೆ.
ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ ತಮಿಳುನಾಡು ಸಿಎಂ ಎಂ.ಕೆ. ಸ್ಟಾಲಿನ್ ಮೃತರ ಕುಟುಂಬಕ್ಕೆ ತಲಾ 3 ಲಕ್ಷ ರೂಪಾಯಿ ಹಾಗೂ ಗಾಯಾಗಳುಗಳಿಗೆ 50,000 ರೂಪಾಯಿಯನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಒದಗಿಸುವಂತೆ ಅಧಿಕಾರಿಗಳಿಗೆ ನಿರ್ದೇಶಿಸಿದ್ದಾರೆ.
ಗಡಿಯಲ್ಲಿ ಟ್ರಯಲ್ ಸ್ಫೋಟ ಪ್ರಕರಣ: ರಾಜ್ಯದ ಎಟಿಎಸ್ ನಿಂದ ಶಂಕಿತ ಉಗ್ರರ ವಿಚಾರಣೆ
ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಟ್ರಯಲ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶಂಕಿತ ಉಗ್ರರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ.
ಕರ್ನಾಟಕ-ಮಹಾರಾಷ್ಟ್ರದ ಗಡಿಗೆ ಹತ್ತಿರವಿರುವ ಅಂಬೀಲಿ ಅರಣ್ಯ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಬಾಂಬ್ ಸ್ಫೋಟ ನಡೆಸಿದ್ದರು. ಈ ಇಬ್ಬರು ಶಂಕಿತ ಉಗ್ರರನ್ನು ಪುಣೆಯ ಕೊಥ್ರೂಡ್ ಪೊಲೀಸರು ಬಂಧಿಸಿದ್ದರು.
ಬಂಧನಕ್ಕೊಳಗಾಗಿರುವ ಶಂಕಿತ ಉಗ್ರರು, ಬೆಳಗಾವಿಯ ನಿಪ್ಪಾಣಿ, ಸಂಕೇಶ್ವರ ಮಾರ್ಗವಾಗಿ ಮಹಾರಾಷ್ಟ್ರದ ಅಂಬೋಲಿ ಅರಣ್ಯಕ್ಕೆ ತಲುಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಶಂಕಿತರು ಪ್ರಯಾಣಿಸಿದ್ದ ಪ್ರದೇಶಗಳಲ್ಲಿ ಎಟಿಎಸ್ ಅಧಿಕಾರಿಗಳು ಆಗಮಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.
ಬೈಕ್ ಕಳ್ಳತನದ ಆರೋಪದಡಿ ಮೊಹಮ್ಮದ್ ಇಮ್ರಾನ್ ಅಲಿಯಾಸ್ ಅಮಿರ್ ಅಬ್ದುಲ್ ಹಮೀದ್ ಖಾನ್ ಮತ್ತು ಮೊಹಮ್ಮದ್ ಯಾಕೂಬ್ ಸಾಕಿ ಎಂಬವರನ್ನು ಬಂಧಿಸಿದಾಗ ಅವರು ನೀಡಿದ ಮಾಹಿತಿ ಆಧಾರದಲ್ಲಿ ಐಸಿಸ್ ಜೊತೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದೆ. ಈ ವೇಳೆ ಅಂಬೋಲಿ ಪ್ರದೇಶದಲ್ಲಿ ಟ್ರಯಲ್ ಬಾಂಬ್ ಬ್ಲಾಸ್ಟ್ ನಡೆಸಿದ ಮಾಹಿತಿ ಬಹಿರಂಗವಾಗಿದೆ.