ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಿಎಂ ಬೊಮ್ಮಾಯಿ, ವಿವಾದಕ್ಕೆ ತೆರೆ ಎಳೆಯಲು ಯತ್ನ

Twitter
Facebook
LinkedIn
WhatsApp
ಪಠ್ಯ ಪುಸ್ತಕ ಪರಿಷ್ಕರಣೆ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿದ ಸಿಎಂ ಬೊಮ್ಮಾಯಿ, ವಿವಾದಕ್ಕೆ ತೆರೆ ಎಳೆಯಲು ಯತ್ನ
 

ಬೆಂಗಳೂರು: ರಾಜ್ಯದಲ್ಲಿ ಪಠ್ಯ ಪುಸ್ತಕ ಪರಿಷ್ಕರಣೆ ವಿವಾದ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ ಎಚ್ಚೆತ್ತುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸಂಬಂಧ ಶುಕ್ರವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ವಿವಾದತ್ತೆ ತೆರೆ ಎಳೆಯಲು ಯತ್ನಿಸಿದ್ದಾರೆ.

ಹಲವು ವಿದ್ಯಾರ್ಥಿ ಸಂಘಟನೆಗಳು, ಸಾಹಿತಿಗಳು, ಪ್ರಗತಿಪರ ಹೋರಾಟಗಾರರು ಪಠ್ಯ ಪರಿಷ್ಕರಣೆಯ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಇತ್ತ ಕೆಲ ಸಾಹಿತಿಗಳು, ಲೇಖಕರು ಪಠ್ಯ ಪುಸ್ತಕದಲ್ಲಿರು ತಾವು ಬರೆದ ವಿಷಯಗಳ ಪಾಠವನ್ನು ಕೈ ಬಿಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.

ಈ ಸಂಬಂಧ ಇಂದು ಪತ್ರಿಕಾ ಪ್ರಕಟಣೆ ಹೊರಡಿಸಿದ ಸಿಎಂ, ಶಾಲಾ ಶಿಕ್ಷಣದಲ್ಲಿ ಪಠ್ಯಕ್ರಮ ಮತ್ತು ಪಠ್ಯ ಪುಸ್ತಕಗಳನ್ನು ಕಾಲ ಕಾಲಕ್ಕೆ ತಕ್ಕಂತೆ ಪರಿಷ್ಕರಿಸಲಾಗುತ್ತದೆ. ರಾಜ್ಯದಲ್ಲಿ ಹಲವು ಬಾರಿ ಪಠ್ಯ ಪುಸ್ತಕಗಳನ್ನು ಪರಿಷ್ಕರಣೆ ಮಾಡಲಾಗಿದೆ. ಈ ಹಿಂದೆ ಜಾರಿಯಲ್ಲಿದ್ದ ಕೆಲವು ಪಠ್ಯಪುಸ್ತಕಗಳಲ್ಲಿ ಹಲವು ಆಕ್ಷೇಪಾರ್ಹ ಅಂಶಗಳು ಇದ್ದ ಕಾರಣ ಸಮಾಜ ವಿಜ್ಞಾನ ಹಾಗೂ ಕನ್ನಡ ಭಾಷಾ ವಿಷಯಗಳಿಗೆ ಸಂಬಂಧಿಸಿದಂತೆ ಪಠ್ಯ ಪುಸ್ತಕಗಳ ಅಲ್ಪ ಪರಿಷ್ಕರಣೆಯನ್ನು ಮಾಡಲಾಗಿದೆ.

 
 

ಶ್ರೀ ಪಂಡಿತಾರಾಧ್ಯ ಸ್ವಾಮೀಜಿಗಳು ಹಾಗೂ ನಾಡಿನ ಇತರೆ ಸ್ವಾಮೀಜಿಗಳು ಪ್ರಸ್ತುತ ಪಠ್ಯ ಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಕೆಲವು ಆಕ್ಷೇಪಣೆಗಳನ್ನು ಮಾಡಿರುತ್ತಾರೆ. ಬಸವಣ್ಣನವರ ಇದೇ ವಿಷಯಾಂಶಕ್ಕೆ ಸಂಬಂಧಿಸಿದಂತೆ ಈ ಹಿಂದೆ ಜಾರಿಯಲ್ಲಿದ್ದ ಪ್ರೊ.ಬರಗೂರು ರಾಮಚಂದ್ರಪ್ಪ ಇವರ ಸಮಿತಿಯಿಂದ ರಚಿತವಾದ ಪಠ್ಯಪುಸ್ತಕ ಹಾಗೂ ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಸಾಮಾನ್ಯವಾದ ಅಂಶಗಳಿವೆ. ಪ್ರಸ್ತುತ ಪಠ್ಯಪುಸ್ತಕದಲ್ಲಿರುವ ಬಸವಣ್ಣನವರ ವಿಷಯಾಂಶವನ್ನು ಯಾರ ಭಾವನೆಗೂ ಧಕ್ಕೆ ಆಗದಂತೆ ಪರಿಷ್ಕರಿಸಲಾಗುವುದು.

ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದ ಸ್ವಾಮೀಜಿಗಳು ಹಾಗೂ ಇತರರ ಆಶಯದಂತೆ ರಾಷ್ಟ್ರಕವಿ ಕುವೆಂಪುರವರು ವಿರಚಿತ ನಾಡಗೀತೆಯನ್ನು ವಿಕೃತಗೊಳಿಸುವ ರೀತಿಯಲ್ಲಿ ನಾಡಗೀತೆಯ ದಾಟಿಯಲ್ಲಿ ಮೂಲ ಕವನವನ್ನು ಬರೆದ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲು ಸೈಬರ್‌ ಕ್ರೈಮ್‌ ಬೆಂಗಳೂರು ಇವರಿಗೆ ತನಿಖೆಯನ್ನು ನಡೆಸಲು ಸೂಚಿಸಲಾಗಿದೆ.

ಪಠ್ಯಪುಸ್ತಕ ಪರಿಷ್ಕರಣೆ ಸಂಬಂಧಿಸಿದಂತೆ ಬಂದಿರುವ ಆರೋಪ / ಆಕ್ಷೇಪಣೆಗಳಿಗೆ ಸ್ಪಷ್ಟೀಕರಣಗಳನ್ನು ಒಳಗೊಂಡ ಟಿಪ್ಪಣಿ ಲಗತ್ತಿಸಿದೆ. ಹಲವಾರು ಅಂಶಗಳಿಗೆ ವಾಸ್ತವ ಅಂಶಗಳಿಂದ ಸ್ಪಷ್ಟೀಕರಣವನ್ನು ಕೊಡಲಾಗಿದೆ. ಪ್ರಸ್ತುತ ಆಕ್ಷೇಪ ಮಾಡಿರುವಂತೆ ಮಹಾನ್‌ ವ್ಯಕ್ತಿಗಳ ಯಾವುದೇ ಪಾಠವನ್ನು ಕೈಬಿಡಲಾಗಿಲ್ಲ.

ಸರ್ಕಾರ ತೆಗೆದುಕೊಂಡ ನಿರ್ಧಾರಗಳು

  • ಪ್ರಸ್ತುತ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯ ಕಾರ್ಯ ಮುಗಿದಿರುವುದರಿಂದ ಸದರಿ ಪಠ್ಯಪುಸ್ತಕ ಪರಿಷ್ಕರಣಾ ಸಮಿತಿಯನ್ನು ವಿಸರ್ಜಿಸಿದೆ.
  • ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ಯಾವಾದಾದರೂ ಆಕ್ಷೇಪಾರ್ಹ ವಿಷಯಗಳಿದ್ದಲ್ಲಿ ಅವುಗಳನ್ನು ಮತ್ತೊಮ್ಮೆ ಪರಿಷ್ಕರಿಸುವ ಮುಕ್ತ ಮನಸ್ಸನ್ನು ಸರ್ಕಾರವು ಹೊಂದಿದೆ. ಈ ಹಿನ್ನೆಲೆಯಲ್ಲಿ ಮೇಲೆ ತಿಳಿಸಿದಂತೆ ಬಸವಣ್ಣನವರ ವಿಷಯಾಂಶಕ್ಕೆ ಸಂಬಂಧಿಸಿದಂತೆ ಸೂಕ್ತವಾಗಿ ಪರಿಷ್ಕರಿಸಲು ನಿರ್ಧಾರ ಮಾಡಲಾಗಿದೆ.
  • ರಾಷ್ಟ್ರಕವಿ ಕುವೆಂಪುರವರ ನಾಡಗೀತೆಯನ್ನು ಆಕ್ಷೇಪಾರ್ಹವಾಗಿ ವಿಕೃತಿಗೊಳಿಸಿದ ಅಂಶವು ಪಠ್ಯಪುಸ್ತಕಗಳಲ್ಲಿ ಉಲ್ಲೇಖಗೊಳ್ಳದಿದ್ದರೂ, ಇದರ ಮೂಲಕವನ ಬರೆದ ವ್ಯಕ್ತಿಗಳ ಬಗ್ಗೆ ಕಾನೂನಾತ್ಮಕ ತನಿಖೆಯ ಕ್ರಮವನ್ನು ಸರ್ಕಾರವು ತೆಗೆದುಕೊಂಡಿದೆ.
  • ಪ್ರೊ.ಬರಗೂರು ರಾಮಚಂದ್ರಪ್ಪರವರ ಅಧ್ಯಕ್ಷತೆಯ ಸಮಿತಿಯು ರಚಿಸಿದ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ ರಾಷ್ಟ್ರಕವಿ ಕುವೆಂಪುರವರ ಕುರಿತಾದ 7 (ಏಳು) ಗದ್ಯ/ಪದ್ಯಗಳಿಗೆ ಸೀಮಿತವಾಗಿದ್ದನ್ನು, ಪ್ರಸ್ತುತ ಪರಿಷ್ಕರಣಾ ಸಮಿತಿ ರಚಿಸಿರುವ ಕನ್ನಡ ಭಾಷಾ ಪಠ್ಯಪುಸ್ತಕಗಳಲ್ಲಿ 10 (ಹತ್ತು) ಕ್ಕೇರಿಸಿದೆ.
  • ಪ್ರಸ್ತುತ ಪರಿಷ್ಕರಿಸಿರುವ ಪಠ್ಯಪುಸ್ತಕದಲ್ಲಿ ನಾಡಪ್ರಭು ಕೆಂಪೇಗೌಡರ ಕುರಿತಾದ ಪಾಠವನ್ನು ಹೊಸದಾಗಿ ಸೇರ್ಪಡೆ ಮಾಡಿದೆ.
  • ಈ ಹಿಂದಿನ ಪಠ್ಯಪುಸ್ತಕಗಳಲ್ಲಿ ಪರಿಚಯಿಸಲಾಗಿದ್ದ ಇಸ್ಲಾಂ ಮತ್ತು ಕ್ರೈಸ್ತ ಧರ್ಮದ ಜೊತೆ ಹಿಂದೂ ಧರ್ಮದ ವಿಷಯವನ್ನೂ ಸೇರ್ಪಡೆ ಮಾಡಿ ಪರಿಚಯಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೊರಡಿಸಿರುವ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ