ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪತ್ನಿ ಆಥಿಯಾ ಜೊತೆ ಮಹಾಕಾಳೇಶ್ವರ ದೇವಸ್ಥಾನಕ್ಕೆ ಕೆಎಲ್‌ ರಾಹುಲ್‌ ಭೇಟಿ!

Twitter
Facebook
LinkedIn
WhatsApp
ಪತ್ನಿ ಆಥಿಯಾ ಜೊತೆ ಮಹಾಕಾಳೇಶ್ವರ ದೇವಸ್ಥಾನಕ್ಕೆ ಕೆಎಲ್‌ ರಾಹುಲ್‌ ಭೇಟಿ!

ಭೋಪಾಲ್: ಸದ್ಯ ಆಸ್ಟ್ರೇಲಿಯಾ ಟೆಸ್ಟ್ ಸರಣಿಯಲ್ಲಿ (Australia Test Cricket) ಫಾರ್ಮ್ ಕಳೆದುಕೊಂಡಿರುವ ಟೀಂ ಇಂಡಿಯಾ ಆಟಗಾರ ಕೆ.ಎಲ್.ರಾಹುಲ್ (KL Rahul) 3ನೇ ಟೆಸ್ಟ್ ಅಭ್ಯಾಸಕ್ಕೂ ಮುನ್ನವೇ ಪತ್ನಿ ಅಥಿಯಾ ಶೆಟ್ಟಿ (Athiya Shetty) ಜೊತೆ ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಆಸ್ಟ್ರೇಲಿಯಾ (Australia) ವಿರುದ್ಧದ ಬಾರ್ಡರ್ ಗಾವಾಸ್ಕರ್ ಟ್ರೋಫಿಯ 3ನೇ ಟೆಸ್ಟ್ಗಾಗಿ ಭಾರತ ತಂಡ ಇಂದೋರ್ ತಲುಪಿದ್ದು, ಭಾನುವಾರ ಮುಂಜಾನೆ 4 ಗಂಟೆ ವೇಳೆಗೆ ರಾಹುಲ್ ಮೊದಲ ಬಾರಿಗೆ ಪತ್ನಿಯೊಂದಿಗೆ ಮಹಾಕಾಳೇಶ್ವರ ದೇವಸ್ಥಾನಕ್ಕೆ (Mahakaleshwar Temple) ಭೇಟಿ ನೀಡಿದ್ದರು. ಪ್ರಮುಖ ಭಸ್ಮ ಆರತಿಯಲ್ಲೂ ದಂಪತಿ ಭಾಗವಹಿಸಿದರು.

ದೇವಸ್ಥಾನದ ನವಗ್ರಹಕ್ಕೆ ತೆರಳಿದ್ದ ನವದಂಪತಿ ಪೂಜಾ ಕೈಂಕರ್ಯಗಳನ್ನು ವಿಧಿ ವಿಧಾನಗಳ ಅನ್ವಯ ನೆರವೇರಿಸಿದರು. ನಂದಿ ಸಭಾಂಗಣದಲ್ಲಿ ಕೆಲಹೊತ್ತು ಧ್ಯಾನ ಮಾಡಿದರು.

ಆಸ್ಟ್ರೇಲಿಯ ವಿರುದ್ಧದ ಬಾರ್ಡರ್ ಗವಾಸ್ಕರ್ ಟ್ರೋಫಿಯ ಉಳಿದ ಎರಡು ಟೆಸ್ಟ್‌ಗಳಲ್ಲಿ ಕೆಎಲ್ ರಾಹುಲ್ ಬದಲಿಗೆ ಶುಭ್‌ಮನ್ ಗಿಲ್ ಅವರನ್ನು ಆಯ್ಕೆ ಮಾಡಬೇಕು ಎಂದು ಭಾರತದ ಮಾಜಿ ಕೋಚ್ ರವಿಶಾಸ್ತ್ರಿ ಸುಳಿವು ನೀಡಿದ್ದಾರೆ. ಭಾರತದ ಉಪನಾಯಕ ರಾಹುಲ್ ಅವರ ಕೆಟ್ಟ ಫಾರ್ಮ್‌ ಬಗ್ಗೆ ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿವೆ.

ಎಲ್ಲಾ ಮಾದರಿಯ ಕ್ರಿಕೆಟ್‌ನಲ್ಲಿ ಉತ್ತಮ ನಿರ್ವಹಣೆಯ ಹೊರತಾಗಿಯೂ, ಗಿಲ್‌ ಟೀಂ ಇಂಡಿಯಾದಲ್ಲಿ ತಮ್ಮ ಸ್ಥಾನಕ್ಕಾಗಿ ಕಾಯುತ್ತಿದ್ದಾರೆ. ರಾಹುಲ್‌ ಮೇಲೆ ಇದರಿಂದಾಗಿ ಒತ್ತಡ ಹೆಚ್ಚಾಗುತ್ತಿದೆ. “ತಂಡದ ಮ್ಯಾನೇಜ್‌ಮೆಂಟ್‌ಗೆ ಅವರ (ರಾಹುಲ್) ಫಾರ್ಮ್ ತಿಳಿದಿದೆ, ಅವರಿಗೆ ಅವರ ಮಾನಸಿಕ ಸ್ಥಿತಿ ತಿಳಿದಿದೆ. ಅವರು ಗಿಲ್‌ನಂತಹವರನ್ನು ಹೇಗೆ ನೋಡಬೇಕು ಎಂದು ಅವರಿಗೆ ತಿಳಿದಿದೆ” ಎಂದು ಐಸಿಸಿ ರಿವ್ಯೂ ಪಾಡ್‌ಕಾಸ್ಟ್‌ನಲ್ಲಿ ಶಾಸ್ತ್ರಿ ಹೇಳಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ