ಭಾನುವಾರ, ಮೇ 19, 2024
Rain Alert: ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಮುನ್ಸೂಚನೆ.!-ಪ್ರಜ್ವಲ್‌ ರೇವಣ್ಣ ಬಂಧನಕ್ಕೆ ವಾರೆಂಟ್‌ ಹೊರಡಿಸಿದ ಬೆಂಗಳೂರು ನ್ಯಾಯಾಲಯ..!-ಇದು ಆರ್ಸಿಬಿಯ ಹೊಸ ಅಧ್ಯಾಯ; ರೋಚಕ ಪಂದ್ಯದಲ್ಲಿ ಸಿಎಸ್​​ಕೆ ಮಣಿಸಿ ಪ್ಲೇಆಫ್‌ಗೇರಿದ ಆರ್​ಸಿಬಿ..!-ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಧಾನಿ ಮೋದಿ ರೋಡ್ ಶೋ ವೇಳೆ ವೇದಿಕೆ ಕುಸಿದು 7 ಮಂದಿಗೆ ಗಾಯ.!

Twitter
Facebook
LinkedIn
WhatsApp
ಪ್ರಧಾನಿ ಮೋದಿ ರೋಡ್ ಶೋ ವೇಳೆ ವೇದಿಕೆ ಕುಸಿದು 7 ಮಂದಿಗೆ ಗಾಯ.!

ಪ್ರಧಾನಿ ನರೇಂದ್ರ ಮೋದಿ ಭಾನುವಾರ ಜಬಲ್ಪುರದಲ್ಲಿ ರೋಡ್ ಶೋ ನಡೆಸುವ ಮೂಲಕ ಮಧ್ಯಪ್ರದೇಶದಲ್ಲಿ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಿದ್ದಾರೆ. ಪ್ರಧಾನಮಂತ್ರಿಯವರ ರೋಡ್ ಶೋ ನೋಡಲು ಸಾವಿರಾರು ಜನ ಸೇರಿದ್ದರು. ಮೋದಿ ರೋಡ್ ಶೋ ಸಂದರ್ಭದಲ್ಲಿ ಜಬಲ್ಪುರದಲ್ಲಿ ವೇದಿಕೆ ಕುಸಿದ ಪರಿಣಾಮ ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ.

ನಗರ ಪೊಲೀಸ್ ವರಿಷ್ಠಾಧಿಕಾರಿ ಎಚ್.ಆರ್.ಪಾಂಡೆ ಘಟನೆಯ ಬಗ್ಗೆ ಮಾಹಿತಿ ನೀಡಿ, ‘ಪ್ರಧಾನಿ ನರೇಂದ್ರ ಮೋದಿ ಅವರ ರೋಡ್ ಶೋ ವೇಳೆ ರಾಂಪುರ-ಗೋರಖ್‌ಪುರ ರಸ್ತೆಯ ರಸ್ತೆ ಬದಿಯಲ್ಲಿ ಸ್ವಾಗತ ವೇದಿಕೆ ನಿರ್ಮಿಸಲಾಗಿತ್ತು. ಪ್ರಧಾನ ಮಂತ್ರಿಯವರ ವಾಹನವು ವೇದಿಕೆಯ ಮುಂದೆ ಹಾದುಹೋದ ತಕ್ಷಣ, ಜನರು ಅವರನ್ನು ನೋಡಲು ವೇದಿಕೆಯ ಮೇಲೆ ಹತ್ತಿದರು, ಇದರಿಂದಾಗಿ ವೇದಿಕೆ ಕುಸಿದಿದೆ.’ ಎಂದು ಹೇಳಿದ್ದಾರೆ.

“ಪ್ರಧಾನಿ ಬೆಂಗಾವಲು ಪಡೆ ಮುಂದೆ ಸಾಗಿದ ಕೂಡಲೇ ವೇದಿಕೆ ಕುಸಿದುಬಿತ್ತು. ಈ ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳ ಪೈಕಿ ಓರ್ವ ಬಾಲಕಿ ಹಾಗೂ ಓರ್ವ ಪೊಲೀಸ್ ಸಿಬ್ಬಂದಿ ಸೇರಿದಂತೆ ನಾಲ್ವರಿಗೆ ಮೂಳೆ ಮುರಿತವಾಗಿದೆ. ಮೂವರು ಮಹಿಳೆಯರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಈ ಘಟನೆಯಿಂದಾಗಿ ರೋಡ್ ಶೋ ವೇಳೆ ಕೆಲಕಾಲ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ಭದ್ರತಾ ಸಿಬ್ಬಂದಿ ತಕ್ಷಣ ಪರಿಸ್ಥಿತಿಯನ್ನು ಹತೋಟಿಗೆ ತಂದರು” ಎಂದು ಸಿಎಸ್‌ಪಿ ಪಾಂಡೆ ತಿಳಿಸಿದ್ದಾರೆ.

ಮೋದಿಗೆ ಅದ್ದೂರಿ ಸ್ವಾಗತ

ಲೋಕಸಭಾ ಚುನಾವಣೆ ಪ್ರಚಾರ ಆರಂಭಿಸಲು ಮಧ್ಯಪ್ರದೇಶಕ್ಕೆ ಬಂದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ. ರೋಡ್ ಶೋ ವೇಳೆ ಜೈ ಶ್ರೀ ರಾಮ್ ಘೋಷಣೆ ಕೂಗುವ ಮೂಲಕ ಮೋದಿ ಅವರಿಗೆ ಬೆಂಬಲ ನೀಡಿದರು.

ಪ್ರಧಾನಿ ಮೋದಿಯವರ ರೋಡ್ ಶೋ ಭಗತ್ ಸಿಂಗ್ ಚೌಕದಿಂದ ಸಂಜೆ 6.40ಕ್ಕೆ ಪ್ರಾರಂಭವಾಯಿತು. ರೋಡ್‌ಶೋ ಸಮಯದಲ್ಲಿ, ಪ್ರಧಾನಿ ವಾಹನದಲ್ಲಿ ಮುಖ್ಯಮಂತ್ರಿ ಮೋಹನ್ ಯಾದವ್, ರಾಜ್ಯ ಸರ್ಕಾರದ ಸಚಿವರು ಮತ್ತು ಸ್ಥಳೀಯ ಶಾಸಕ ರಾಕೇಶ್ ಸಿಂಗ್ ಮತ್ತು ಲೋಕಸಭಾ ಅಭ್ಯರ್ಥಿ ಆಶಿಶ್ ದುಬೆ ಕೂಡ ಇದ್ದರು.

ರೋಡ್‌ಶೋ ವೇಳೆ ರಸ್ತೆಬದಿಯ ಮನೆಗಳ ಬಾಲ್ಕನಿ ಹಾಗೂ ಮೇಲ್ಛಾವಣಿಯಲ್ಲಿ ಹೆಚ್ಚಿನ ಜನರು ಸೇರಿದ್ದರು. ರೋಡ್ ಶೋದ ಹಲವು ಸ್ಥಳಗಳಲ್ಲಿ, ಮಹಿಳೆಯರು ಸಾಂಪ್ರದಾಯಿಕ ನೃತ್ಯ ಮತ್ತು ಪ್ರಧಾನಿ ಮೋದಿಯವರಿಗೆ ಆರತಿ ಬೆಳಗಿದರು.

ಮಧ್ಯಪ್ರದೇಶದಲ್ಲಿ ಲೋಕಸಭೆ ಚುನಾವಣೆಯ ಮೊದಲ ಹಂತದಲ್ಲಿ, ಮಹಾಕೋಶ ಪ್ರದೇಶದ ನಾಲ್ಕು ಲೋಕಸಭಾ ಸ್ಥಾನಗಳು ಸೇರಿದಂತೆ 6 ಸ್ಥಾನಗಳಿಗೆ ಏಪ್ರಿಲ್ 19 ರಂದು ಮತದಾನ ನಡೆಯಲಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ