ಶುಕ್ರವಾರ, ಮೇ 17, 2024
ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಶ್ಚಿಮ ಶಿಕ್ಷಕರ ಕ್ಷೇತ್ರ-ಬಸವರಾಜ ಹೊರಟ್ಟಿ : ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಕಾಶ್ ಹುಕ್ಕೇರಿ ಗೆಲುವು.

Twitter
Facebook
LinkedIn
WhatsApp
ಪಶ್ಚಿಮ ಶಿಕ್ಷಕರ ಕ್ಷೇತ್ರ-ಬಸವರಾಜ ಹೊರಟ್ಟಿ : ವಾಯವ್ಯ ಶಿಕ್ಷಕರ ಕ್ಷೇತ್ರದಲ್ಲಿ ಪ್ರಕಾಶ್ ಹುಕ್ಕೇರಿ ಗೆಲುವು.

ಬೆಳಗಾವಿ:-ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರ ಮತ್ತು ಕರ್ನಾಟಕ ಪಶ್ಚಿಮ ಮತಕ್ಷೇತ್ರಗಳ ಚುನಾವಣೆಯ ಫಲಿತಾಶ ಪ್ರಕಟಗೊಂಡಿದ್ದು, ಈ ಎರಡು ಕ್ಷೇತ್ರಗಳ ಪೈಕಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷ ತಲಾ ಒಂದು ಸ್ಥಾನ ಗಳಿಸಿವೆ. ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಗೆಲುವು ಸಾಧಿಸಿದ್ದಾರೆ. ಅದೇ ರೀತಿ ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಪ್ರಕಾಶ್ ಹುಕ್ಕೇರಿ ಅವರು ಗೆಲುವು ಸಾಧಿಸಿದ್ದಾರೆ.

ಕರ್ನಾಟಕ ವಾಯವ್ಯ ಶಿಕ್ಷಕರ ಮತಕ್ಷೇತ್ರದ ವಿವರ:
ಕರ್ನಾಟಕ ವಾಯುವ್ಯ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಪ್ರಕಾಶ ಹುಕ್ಕೇರಿ ಅವರು 11,460 ಪ್ರಥಮ ಪ್ರಾಶಸ್ತ್ಯ ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ‌ ಅಭ್ಯರ್ಥಿ ಅರುಣ ಶಹಾಪೂರ ಅವರು 6,405 ಮತಗಳನ್ನು ಪಡೆದುಕೊಂಡಿದ್ದಾರೆ. ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ಒಟ್ಟು 21,402 ಮತಗಳು ಚಲಾವಣೆಯಾಗಿದ್ದು, ಅದರಲ್ಲಿ 1,270 ಮತಗಳು ಅಸಿಂಧುವಾಗಿವೆ ಮತ್ತು 20,132 ಸಿಂಧು ಮತಗಳಿದ್ದವು. ಅಭ್ಯರ್ಥಿ ಗೆಲುವಿಗೆ 10,067 ಮತಗಳ ಕೋಟಾ ನಿಗದಿಪಡಿಸಲಾಗಿತ್ತು.


ಅಭ್ಯರ್ಥಿಗಳು ಪಡೆದ ಮತಗಳ ವಿವರ:
ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿರುವ ಪ್ರಕಾಶ ಹುಕ್ಕೇರಿ, 11460 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಅರುಣ ಶಹಾಪೂರ ಅವರು 6405 ಮತಗಳನ್ನು ಪಡೆದಿದ್ದಾರೆ.
ಜೆಡಿಎಸ್ ಪಕ್ಷದ ಅಭ್ಯರ್ಥಿ ಚಂದ್ರಶೇಖರ ಲೋಣಿ 544 ಮತಗಳು ಹಾಗೂ ಪಕ್ಷೇತರ ಅಭ್ಯರ್ಥಿಗಳಾದ ಅಪ್ಪಾಸಾಹೇಬ ಕುರಣೆ- 9, ಚಂದ್ರಶೇಖರ ಗುಡಸೆ- 101, ದೇಸಾಯಿ ಜಯಪಾಲ ರಾಜಾರಾಮ- 10, ಬನ್ನೂರು ಎನ್. ಬಿ -1009, ಬಸಪ್ಪ ಮಣಿಗಾರ -39, ಶ್ರೀಕಾಂತ ಪಾಟೀಲ- 19, ಶ್ರೀನಿವಾಸಗೌಡ ಗೌಡರ- 524, ಶ್ರೇನಿಕ್ ಅಣ್ಣಾಸಾಹೇಬ್ ಜಂಗಟೆ -8 ಹಾಗೂ ಚಿಕ್ಕನಾರಗುಂದ ಸಂಗಮೇಶ- 4 ಮತಗಳನ್ನು ಪಡೆದಿದ್ದಾರೆ.

ಕರ್ನಾಟಕ ಪಶ್ಚಿಮ‌ ಶಿಕ್ಷಕರ ಮತಕ್ಷೇತ್ರದ ವಿವರ:
ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ಚುನಾವಣೆಯಲ್ಲಿ ಬಸವರಾಜ ಹೊರಟ್ಟಿ ಅವರು 9266 ಮತಗಳನ್ನು ಪಡೆದು ಗೆಲುವು ಸಾಧಿಸಿದ್ದಾರೆ. ಬಸವರಾಜ ಗುರಿಕಾರ ಅವರು 4597 ಮತಗಳನ್ನು ಪಡೆದುಕೊಂಡರು.
ಒಟ್ಟು 15,583 ಮತಗಳು‌ ಚಲಾವಣೆಗೊಂಡಿದ್ದು, ಅದರಲ್ಲಿ 1,223 ಮತಗಳು ಅಸಿಂಧುವಾಗಿವೆ ಮತ್ತು 14,360 ಸಿಂಧು ಮತಗಳಿದ್ದವು. ಗೆಲುವಿನ ಕೋಟಾ 7,181 ನಿಗದಿಪಡಿಸಲಾಗಿತ್ತು.

ಅಭ್ಯರ್ಥಿಗಳು ಪಡೆದ ಮತಗಳ ವಿವರ:
ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಬಸವರಾಜ ಹೊರಟ್ಟಿ 9,266; ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಬಸವರಾಜ ಗುರಿಕಾರ 4,597; ಶ್ರೀಶೈಲ ಗಡದನ್ನಿ-273; ಎಂ. ಪಿ ಕರಬಸಪ್ಪ -60; ಕೃಷ್ಣವಾಣಿ- 58; ಪ್ರೊ.ಎಫ್.ವಿ ಕಲ್ಲನ ಗೌಡರ- 27 ಹಾಗೂ ವೆಂಕನಗೌಡ ರಂಗನಗೌಡ ಗೋವಿಂದಗೌಡರ ಅವರು 79 ಮತಗಳನ್ನು ಪಡೆದಿದ್ದಾರೆ.
ಮೂರೂ ಮತಕ್ಷೇತ್ರಗಳ ಚುನಾವಣಾಧಿಕಾರಿಯೂ ಆಗಿರುವ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರ ನೇತೃತ್ವದಲ್ಲಿ ಬೆಳಗಾವಿ ವಿಭಾಗದ ಏಳೂ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಅಪರ ಜಿಲ್ಲಾಧಿಕಾರಿಗಳು ಸೇರಿದಂತೆ ನೂರಾರು ಅಧಿಕಾರಿಗಳು ಮತ್ತು ಸಿಬ್ಬಂದಿ ಮತ ಎಣಿಕೆ ಪ್ರಕ್ರಿಯಲ್ಲಿ ಭಾಗವಹಿಸಿದ್ದರು.
ಪೊಲೀಸ್ ಆಯುಕ್ತರಾದ ಡಾ.ಎಂ.ಬಿ.ಬೋರಲಿಂಗಯ್ಯ ಪೊಲೀಸ್ ಬಂದೋಬಸ್ತ್ ನೇತೃತ್ವ ವಹಿಸಿದ್ದರು.
ಕರ್ನಾಟಕ ಪಶ್ಚಿಮ ಶಿಕ್ಷಕರ ಮತಕ್ಷೇತ್ರದ ವಿಜೇತ ಅಭ್ಯರ್ಥಿಯಾಗಿರುವ ಬಿಜೆಪಿಯ ಬಸವರಾಜ ಹೊರಟ್ಟಿ ಅವರಿಗೆ ಚುನಾವಣಾಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್ ಅವರು ಪ್ರಮಾಣಪತ್ರವನ್ನು ವಿತರಿಸಿದರು.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ