ಸದ್ಯ ಘಟನಾ ಸ್ಥಳದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ ಎಂದು ಖೈಬರ್ ಪುಂಖ್ಯಾ ಪ್ರಾಂತ್ಯದ ಪೊಲೀಸ್ ಮಹಾನಿರೀಕ್ಷಕ ಅಖ್ತರ್ ಹಯಾತ್ ಖಾನ್ ಹೇಳಿದ್ದಾರೆ.
ಪಾಕ್‌ನಲ್ಲಿ ಭೀಕರ ಸ್ಫೋಟ – 12 ಮಂದಿ ಪೊಲೀಸರ ದಾರುಣ ಸಾವು, 40ಕ್ಕೂ ಹೆಚ್ಚು ಮಂದಿಗೆ ಗಾಯ
Twitter
Facebook
LinkedIn
WhatsApp
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಸ್ವಾತ್‌ನ ಭಯೋತ್ಪಾದನಾ ನಿಗ್ರಹ ಕಚೇರಿಯಲ್ಲಿ (Counter Terrorism Department) ನಡೆದ ಭೀಕರ ಸ್ಫೋಟದಲ್ಲಿ ಕನಿಷ್ಠ 12 ಮಂದಿ ಪೊಲೀಸರು ಮೃತಪಟ್ಟಿದ್ದು. 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಘಟನೆ ಕುರಿತು ಮಾತನಾಡಿರುವ ಭಯೋತ್ಪಾದನಾ ನಿಗ್ರಹ ಇಲಾಖೆ (CTD) ಡಿಐಜಿ ಖಾಲಿದ್ ಸೊಹೈಲ್, ಪೊಲೀಸ್ ಠಾಣೆಯ ಮೇಲೆ ಯಾವುದೇ ಬಾಂಬ್ ದಾಳಿ ಅಥವಾ ಗುಂಡಿನ ದಾಳಿ ನಡೆದಿಲ್ಲ. ಇದು ಆತ್ಮಹತ್ಯಾ ದಾಳಿಯೂ ಅಲ್ಲ. ಮದ್ದುಗುಂಡುಗಳು ಮತ್ತು ಶೆಲ್‌ಗಳನ್ನು ಸಂಗ್ರಹಿಸಿದ್ದ ಸ್ಥಳದಲ್ಲಿ ಸ್ಫೋಟ ಸಂಭವಿಸಿದೆ. ಹೊರತಾಗಿ ಪೊಲೀಸ್ ಠಾಣೆಯ ಮೇಲೆ ಯಾವುದೇ ದಾಳಿ ನಡೆದಿಲ್ಲ ಎಂದು ತಿಳಿಸಿದ್ದಾರೆ.
ಸ್ಫೋಟಕ್ಕೆ ನಿಖರ ಕಾರಣ ಏನೆಂಬುದರ ಕುರಿತು ತನಿಖೆ ನಡೆಯುತ್ತಿದೆ. ಬಾಂಬ್ ನಿಷ್ಕ್ರಿಯ ದಳಗಳು ಸ್ಥಳಕ್ಕೆ ಧಾವಿಸಿ ತಪಾಸಣೆ ನಡೆಸುತ್ತಿವೆ. ಕುಸಿದ ಕಟ್ಟಡ ಅತ್ಯಂತ ಹಳೆಯದಾಗಿತ್ತು. ಹಾಗಾಗಿ ಸಿಬ್ಬಂದಿಯನ್ನ ಹೊಸ ಕಟ್ಟಡಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸಿಟಿಡಿ ಡಿಐಜಿ ತಿಳಿಸಿದ್ದಾರೆ.
ಜಿಲ್ಲಾ ಪೊಲೀಸ್ ಅಧಿಕಾರಿ ಶಫಿ ಉಲ್ಲಾ ಗಂಡಾಪುರ (DPO) ಈ ಸ್ಫೋಟವನ್ನು ‘ಆತ್ಮಹತ್ಯಾ ದಾಳಿ’ ಎಂದು ಹೇಳಿದ್ದರು.