ಪಾಣೆಮಂಗಳೂರು: ಬೈಕ್ ಮತ್ತು ರಿಕ್ಷಾ ಅಪಘಾತ; ರಿಕ್ಷಾದಲ್ಲಿದ್ದ ಪ್ರಯಾಣಿಕ ಸಾವು
ಬಂಟ್ವಾಳ: ರಿಕ್ಷಾ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ರಿಕ್ಷಾ ಪಲ್ಟಿಯಾಗಿ ಪ್ರಯಾಣಿಕನೋರ್ವ ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಇಂದು ಸಂಜೆ ಪಾಣೆಮಂಗಳೂರು ಎಂಬಲ್ಲಿ ನಡೆದಿದೆ.
ಸಜೀಪ ನಿವಾಸಿ ಅಲ್ತಾಫ್ (18) ಮೃತಪಟ್ಟ ಯುವಕ. ಬಿಸಿರೋಡಿನಿಂದ ಬರುತ್ತಿದ್ದ ರಿಕ್ಷಾ ಹಾಗೂ ಪಾಣೆಮಂಗಳೂರು ಪೇಟೆಯಿಂದ ಬೈಕ್ ನಡುವೆ ಅಪಘಾತ ಸಂಭವಿಸಿದ್ದು, ಅಪಘಾತಕ್ಕೆ ರಿಕ್ಷಾ ಚಾಲಕನ ನಿಯಂತ್ರಣ ತಪ್ಪಿ ರಿಕ್ಷಾ ಪಲ್ಟಿಯಾಗಿದೆ.
ಪಲ್ಟಿಯಾಗುವ ಸಂದರ್ಭದಲ್ಲಿ ರಿಕ್ಷಾದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯುವ ದೃಶ್ಯ ಸಿ.ಸಿ.ಕ್ಯಾಮರಾದಲ್ಲಿ ಸೆರೆಯಾಗಿದೆ. ರಸ್ತೆಗೆ ಎಸೆದ ರಭಸಕ್ಕೆ ಯುವಕನ ತಲೆಗೆ ಗಂಭೀರವಾದ ಗಾಯವಾಗಿತ್ತು.
ಈತನನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಬಗ್ಗೆ ಪೋಲೀಸರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ಮೆಲ್ಕಾರ್ ಟ್ರಾಫಿಕ್ ಪೋಲೀಸರು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಢಿದ್ದಾರೆ.
ಕಾರ್ಕಳ: ಟಿಪ್ಪರ್ – ಬೈಕ್ ನಡುವೆ ಢಿಕ್ಕಿ; ಸವಾರ ಸ್ಥಳದಲ್ಲೇ ಸಾವು, ಇಬ್ಬರು ಗಂಭೀರ
ಕಾರ್ಕಳ: ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಢಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾರ್ಕಳ ಪಳ್ಳಿ ಗರಡಿ ಸಮೀಪ ಸೋಮವಾರ ಬೆಳಗ್ಗೆ ನಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯ ಗುರುತು ಇನ್ನಷ್ಟೇ ಪತ್ತೆಯಾಗಬೇಕಿದ್ದು, ಗಾಯಾಳುಗಳನ್ನು ನೇಪಾಳ ಮೂಲದ ಪ್ರಸನ್ನ (26) ಹಾಗೂ ಬಚ್ಚನ್ ಡಿಸೋಜ(26) ಎಂದು ಗುರುತಿಸಲಾಗಿದೆ.
ಟಿಪ್ಪರ್ ನಲ್ಲಿ ಕ್ರಶರ್ ತುಂಬಿಕೊಂಡು ಬರಲಾಗುತ್ತಿದ್ದು, ಟಿಪ್ಪರ್ ಚಾಲಕನ ಅತೀವೇಗವೇ ಈ ದುರ್ಘಟನೆಗೆ ಕಾರಣ ಎನ್ನಲಾಗಿದೆ. ಇನ್ನು ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯ ದೇಹವನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಕಾರ್ಕಳ ನಗರ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು ಘಟನೆಯ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.