ಶನಿವಾರ, ಏಪ್ರಿಲ್ 20, 2024
ಅರವಿಂದ್ ಕೇಜ್ರಿವಾಲ್ ರನ್ನು ಜೈಲಿನಲ್ಲೇ ಹತ್ಯೆಗೆ ಸಂಚು ಮಾಡಲಾಗುತ್ತಿದೆ; ಎಎಪಿ ನಾಯಕಿ ಅತಿಶಿ ಆರೋಪ.!-ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ಕೆ. ತ್ರಿಪಾಠಿ ನೇಮಕ-ಇಂದು ಮೊದಲ ಹಂತದ ಲೋಕಸಭಾ ಚುನಾವಣೆ ಆರಂಭ ; ಯಾವೆಲ್ಲಾ ರಾಜ್ಯಗಳಲ್ಲಿ.!-ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!-ಹಾಡಹಗಲೇ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯನ್ನು ಚಾಕುವಿನಿಂದ ಇರಿದು ಬರ್ಬರ ಕೊಲೆ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ ; ಇಲ್ಲಿದೆ ಚಿನ್ನದ ದರದ ವಿವರ-ಅಕ್ಕಾ ಸ್ವಲ್ಪ ಎಕ್ಟ್ರಾ ಪೆಗ್ ಹೊಡೆದು ಮಳ್ಕೊಳಿ; ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಬಿಜೆಪಿ ಶಾಸಕನ ಹೇಳಿಕೆಗೆ ಕಾರ್ಯಕರ್ತೆಯರಿಂದ ಪ್ರತಿಭಟನೆ.!-ನಾನು ಮುಖ್ಯಮಂತ್ರಿ ಆದರೆ ಪ್ರತಿ ಕುಟುಂಬಕ್ಕೆ ಐದು ಸಾವಿರ ಕೊಡುತ್ತೇನೆ; ಶಾಸಕ ಬಸನಗೌಡ ಯತ್ನಾಳ್-ನಟ ಸಲ್ಮಾನ್ ಖಾನ್ ಮನೆ ಮುಂದೆ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ..!-ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಪ್ರಣಾಳಿಕೆ ಬಿಡುಗಡೆ; ಗ್ಯಾರಂಟಿಯಲ್ಲಿ ಏನಿದೆ?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾದಚಾರಿಗಳ ಮೇಲೆ ಹರಿದ ಥಾರ್ ಜೀಪ್, ಇಬ್ಬರು ಸಾವು, 8 ಮಂದಿಗೆ ಗಾಯ

Twitter
Facebook
LinkedIn
WhatsApp
Yogi CM 2

ಹೋಳಿಯ ದಿನದಂದು ದೆಹಲಿಯಲ್ಲಿ ರಕ್ತದೋಕುಳಿ ಹರಿದಿದೆ, ವೇಗವಾಗಿ ಬಂದ ಥಾರ್ ಜೀಪ್ ಪಾದಚಾರಿಗಳ ಮೇಲೆ ಹರಿದಿದ್ದು ಸ್ಥಳದಲ್ಲಿ ಇಬ್ಬರು ಮೃತಪಟ್ಟಿದ್ದು, ಐದಕ್ಕಿಂತ ಹೆಚ್ಚು ಮಂದಿ ಮೃತಟ್ಟಿರುವ ಕುರಿತು ವರದಿಯಾಗಿದೆ. ಗಾಯಾಳುಗಳಿಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ, ಇದೇ ವೇಳೆ 2 ವಾಹನಗಳಿಗೆ ಡಿಕ್ಕಿ ಹೊಡೆದಿದೆ, ಚಾಲಕನ ಅತಿವೇಗವೇ ಅಪಘಾತಕ್ಕೆ ಕಾರಣ ಎಂದಿರುವ ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ದೆಹಲಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದ್ದಾರೆ.

ಘಟನೆಯಲ್ಲಿ ಗಾಯಗೊಂಡವರಿಗೆ ಏಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರ ಪ್ರಕಾರ, ಗಾಯಗೊಂಡವರೆಲ್ಲರೂ ಶಿವ ಕ್ಯಾಂಪ್, ವಸಂತ ವಿಹಾರ್ ಮತ್ತು ಏಕತಾ ವಿಹಾರ್, ಆರ್ಕೆ ಪುರಂ ನಿವಾಸಿಗಳು. ಗಾಯಾಳುಗಳಿಗೆ ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್‌ನ (ಎಐಐಎಂಎಸ್) ಟ್ರಾಮಾ ಸೆಂಟರ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಅಪಘಾತದಲ್ಲಿ ಒಂದು ಥಾರ್, ಎರಡು ನಾಲ್ಕು ಚಕ್ರದ ವಾಹನಗಳು ಮತ್ತು ಮೂರು ಮಾರಾಟಗಾರರ ಸ್ಟಾಲ್‌ಗಳಿಗೆ ಹಾನಿಯಾಗಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಬುಧವಾರ ಸಂಜೆ 7:30ಕ್ಕೆ ದೆಹಲಿಯ ವಸಂತ್ ವಿಹಾರ್ ಪೊಲೀಸ್ ಠಾಣೆಗೆ ಘಟನೆಗೆ ಸಂಬಂಧಿಸಿದಂತೆ ಪಿಸಿಆರ್ ಕರೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

 

ಈ ಸಂಬಂಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 304ಎ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ