ಶುಕ್ರವಾರ, ಮೇ 10, 2024
ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು-ಬಂಗೇರ ಅಸ್ತಂಗತ. ಕೊನೆಗೂ ದಕ್ಷಿಣ ಕನ್ನಡದ ಪ್ರಬಲ ರಾಜಕಾರಣಿ ಮಂತ್ರಿಯಾಗಲಿಲ್ಲ! 2013 ರಲ್ಲಿ ಮಂತ್ರಿ ಸ್ಥಾನ ತಪ್ಪಿದ್ದು ಹೇಗೆ ಎಂಬುದು ಇಂದಿಗೂ ರಹಸ್ಯ!!-ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾನ್ ಮಸಾಲ ಕಂಪನಿಗೆ ನೋಟಿಸ್​ ನೀಡಿದ ಅಮಿತಾಬ್ ಬಚ್ಚನ್

Twitter
Facebook
LinkedIn
WhatsApp
ಫರಂಗಿಪೇಟೆ ಸಮೀಪ ಅಪಘಾತ. ವಿಟ್ಲದ ಯುವಕ ಪ್ರಜ್ವಲ್ ಮೃತ್ಯು.

ಬಾಲಿವುಡ್ ಬಿಗ್​ಬಿ ಅಮಿತಾಬ್ ಬಚ್ಚನ್ ಅವರು ಪಾನ್ ಮಸಾಲ ಕಂಪನಿಯೊಂದಕ್ಕೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ಒಪ್ಪಂದ ಮುಕ್ತಾಯದ ಹೊರತಾಗಿಯೂ ‘ಕಮಲಾ ಪಸಂದ್’ ಕಂಪನಿಯು ಅಮಿತಾಬ್ ಅವರನ್ನೊಳಗೊಂಡ ಜಾಹೀರಾತುಗಳನ್ನು ಟಿವಿಯಲ್ಲಿ ಪ್ರಸಾರ ಮಾಡುತ್ತಿತ್ತು. ಇದನ್ನು ಪ್ರಶ್ನಿಸಿ ಬಿಗ್ ಬಿ​ ಪಾನ್ ಮಸಾಲ ಬ್ರ್ಯಾಂಡ್‌ಗೆ ನೋಟಿಸ್ ಕಳುಹಿಸಿದ್ದಾರೆ.
ಅಮಿತಾಬ್ ಬಚ್ಚನ್ ಅವರು ಈ ಹಿಂದೆ ತಂಬಾಕು ಕಂಪನಿ ‘ಕಮಲಾ ಪಸಂದ್’ ಜಾಹೀರಾತಿನಲ್ಲಿ ಕಾಣಿಸಿಕೊಂಡಿದ್ದರು. ಇದಕ್ಕೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಯುವಕರು ತಂಬಾಕಿಗೆ ವ್ಯಸನಿಯಾಗುವುದನ್ನು ತಡೆಯಲು ಪಾನ್ ಮಸಾಲ ಬ್ರಾಂಡ್ ಗೆ ಪ್ರಚಾರ ನೀಡುವುದನ್ನು ನಿಲ್ಲಿಸುವಂತೆ ರಾಷ್ಟ್ರೀಯ ತಂಬಾಕು ವಿರೋಧಿ ಸಂಘಟನೆಯೊಂದು ವಿನಂತಿಸಿದ ಬಳಿಕ ಅವರು ಅಕ್ಟೋಬರ್‌ನಲ್ಲಿ ಈ ಜಾಹೀರಾತಿನಿಂದ ಹಿಂದೆ ಸರಿಯುವುದಾಗಿ ಘೋಷಿಸಿದ್ದರು.

ಪಾನ್ ಮಸಾಲ ಬ್ರ್ಯಾಂಡ್ ನ ಉತ್ಪನ್ನದ ಪ್ರಚಾರ ಮಾಡಿದಕ್ಕಾಗಿ ಬಚ್ಚನ್ ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್‌ಗೆ ಒಳಗಾಗಿದ್ದರು. ಆದರೆ ಒಪ್ಪಂದ ಮುಗಿದರೂ ಕಮಲಾ ಪಸಂದ್ ಕಂಪನಿಯು ಅಮಿತಾಬ್ ಅವರ ಜಾಹೀರಾತುಗಳನ್ನು ಟಿವಿಯಲ್ಲಿ ಪ್ರಸಾರ ಮಾಡುವುದನ್ನು ಮುಂದುವರೆಸಿತ್ತು. ಈ ಕಾರಣಕ್ಕೆ ಬಿಗ್ ಬಿ​ ಪಾನ್ ಮಸಾಲ ಬ್ರ್ಯಾಂಡ್‌ಗೆ ಲೀಗಲ್ ನೋಟಿಸ್ ಕಳುಹಿಸಿದ್ದಾರೆ. ‘ಕಮಲಾ ಪಸಂದ್ ಕಂಪನಿಗೆ ಅಮಿತಾಬ್​ ಬಚ್ಚನ್​ ನೋಟಿಸ್ ಕಳುಹಿಸಿದ್ದಾರೆ. ಬಚ್ಚನ್ ಅವರು ಇರುವ ಟಿವಿ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ತಕ್ಷಣವೇ ನಿಲ್ಲಿಸುವಂತೆ ಸೂಚಿಸಲಾಗಿದೆ.

‘ಪಾನ್ ಮಸಾಲ ಸೇವನೆಯಿಂದ ಬಾಯಿಯ ಕ್ಯಾನ್ಸರ್​ಗೆ ಕಾರಣವಾಗಬಹುದು ಎಂದು ಇತ್ತೀಚಿನ ಹಲವು ಸಂಶೋಧನೆಗಳು ತಿಳಿಸಿವೆ. ಇದನ್ನು ಇಂಟರ್​​​ನ್ಯಾಷನಲ್ ಏಜೆನ್ಸಿ ಫಾರ್ ರಿಸರ್ಚ್ ಆನ್ ಕ್ಯಾನ್ಸರ್ ಮತ್ತು ವಿಶ್ವ ಆರೋಗ್ಯ ಸಂಸ್ಥೆ ವರದಿಗಳು ಸಹ ಒಪ್ಪಿವೆ. ಆದ್ದರಿಂದ ಅಮಿತಾಬ್ ತಮ್ಮ ನಿರ್ಧಾರದ ಕುರಿತು ಆಲೋಚಿಸಬೇಕು. ಬಾಲಿವುಡ್ ನಟರಾದ ಶಾರುಖ್ ಖಾನ್​, ಅಜಯ್ ದೇವಗನ್, ರಣವೀರ್ ಸಿಂಗ್, ಹೃತಿಕ್ ರೋಷನ್ ಮೊದಲಾದವರು ಪಾನ್ ಮಸಾಲ ಜಾಹಿರಾತಿನಲ್ಲಿ ಕಾಣಿಸಿಕೊಂಡಿರುವುದು ವಿದ್ಯಾರ್ಥಿಗಳಲ್ಲಿ ತಂಬಾಕು ಬಳಕೆ ಹೆಚ್ಚಲು ಕಾರಣವಾಗಿದೆ. ಇದು ಆತಂಕಕಾರಿ ವಿಷಯ. ನಟರಾಗಿ ಸಮಾಜಕ್ಕೆ ಉತ್ತಮ ಸಂದೇಶ ನೀಡಬೇಕೇ ಹೊರತು ಈ ರೀತಿ ತಪ್ಪು ಸಂದೇಶವನ್ನಲ್ಲ. ಈ ಕುರಿತು ನನಗೆ ಬೇಸರವಿದೆ’ ಎಂದು ರಾಷ್ಟ್ರೀಯ ತಂಬಾಕು ವಿರೋಧಿ ಸಂಘಟನೆ ಅಧ್ಯಕ್ಷ ಡಾ.ಶೇಖರ್ ಸಲ್ಕರ್ ಅಮಿತಾಬ್ ರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

100 ಶೇಕಡ ಫಲಿತಾಂಶ - ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು

ಸತತವಾಗಿ 100 ಶೇಕಡ ಫಲಿತಾಂಶದ ವಿಶೇಷ ಸಾಧನೆ ಮಾಡಿದ ಸರಕಾರಿ ಪ್ರೌಢಶಾಲೆ ನಯನಾಡು Twitter Facebook LinkedIn WhatsApp ಬಂಟ್ವಾಳ: ಪಿಲಾತ್ತಬೆಟ್ಟು ಗ್ರಾಮದ ಅತ್ಯಂತ ಗ್ರಾಮೀಣ ಭಾಗದ ಆದರೆ ಪಕೃತಿ ರಮಣೀಯ ಪರಿಸರದಲ್ಲಿರುವ ಸರಕಾರಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು