ಗುರುವಾರ, ಏಪ್ರಿಲ್ 25, 2024
ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!-Gold Rate: ಬಹಳ ದಿನಗಳ ಬಳಿಕ ಕೊಂಚ ಇಳಿಕೆ ಕಂಡ ಚಿನ್ನದ ದರ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ತಗುಲಿದ ಹೈಟೆನ್ಷನ್ ವಿದ್ಯುತ್ ತಂತಿ: ಬಾಲಕರ ಸ್ಥಿತಿ ಗಂಭೀರ

Twitter
Facebook
LinkedIn
WhatsApp
ಪಾರಿವಾಳ ಹಿಡಿಯಲು ಹೋದ ಮಕ್ಕಳಿಗೆ ತಗುಲಿದ ಹೈಟೆನ್ಷನ್ ವಿದ್ಯುತ್ ತಂತಿ: ಬಾಲಕರ ಸ್ಥಿತಿ ಗಂಭೀರ

ಬೆಂಗಳೂರು: ಪಾರಿವಾಳ ಹಿಡಿಯುವ ವೇಳೆ ಹೈಟೆನ್ಷನ್ ವಿದ್ಯುತ್​​ ತಂತಿ ತಗುಲಿ (electric Shock) ಇಬ್ಬರು ಬಾಲಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಡಿಸೆಂಬರ್ 01 ಸಂಜೆ ಬೆಂಗಳೂರಿನ ನಂದಿನಿ ಲೇಔಟ್​ನ ವಿಜಯಾನಂದನಗರದಲ್ಲಿ ನಡೆದಿದೆ. ತೀವ್ರವಾಗಿ ಗಾಯಗೊಂಡಿರುವ ಚಂದ್ರು(10), ಸುಪ್ರೀತ್(12) ಎನ್ನುವ ಬಾಲಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಚಂದ್ರು ಹಾಗೂ ಸುಪ್ರೀತ್ ಎನ್ನುವ ಬಾಲಕರು ಕಬ್ಬಿಣದ ರಾಡ್​ನಿಂದ ಹೈಟೆನ್ಷನ್​ ವೈರ್​ ಮೇಲೆ ಕುಳಿತಿದ್ದ ಪಾರಿವಾಳ ಹಿಡಿಯಲು ಯತ್ನಿಸಿದ್ದಾರೆ. ಈ ವೇಳೆ ವಿದ್ಯುತ್ ಪ್ರವಹಿಸಿದ್ದು, ಬಾಲಕರ ಸ್ಥಿತಿ ಗಂಭೀರವಾಗಿದೆ.

ವಿದ್ಯುತ್​​ ಹೈಟೆನ್ಶನ್ ವೈರ್ ತಾಗಿದ್ದರಿಂದ ಸುಪ್ರೀತ್ ಹಾಗೂ ಚಂದನ್​ ಮೈಮೇಲೆ ಸುಟ್ಟ ಗಾಯಗಳಾಗಿವೆ. ಸದ್ಯ ಮಕ್ಕಳಿಬ್ಬರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಜೀವನ್ಮರಣದ ಹೋರಾಟ ನಡೆಸುತ್ತಿದ್ದಾರೆ.

ವಿಷಯ ತಿಳಿದು ಘಟನಾ ಸ್ಥಳಕ್ಕೆ ಸಚಿವ ಗೋಪಾಲಯ್ಯ ಭೇಟಿ ನೀಡಿದ್ದು, ಸ್ಥಳೀಯರಿಂದ ಮಾಹಿತಿ ಪಡೆದುಕೊಂಡರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಅಂಕಣ