ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಿಎಫ್‌ಐ ಬೆಳೆಯಲು ಸಿದ್ದರಾಮಯ್ಯ ಕಾರಣ: ಸಚಿವ ಅರಗ ಜ್ಞಾನೇಂದ್ರ

Twitter
Facebook
LinkedIn
WhatsApp
ಪಿಎಫ್‌ಐ ಬೆಳೆಯಲು ಸಿದ್ದರಾಮಯ್ಯ ಕಾರಣ: ಸಚಿವ ಅರಗ ಜ್ಞಾನೇಂದ್ರ

ಶಿವಮೊಗ್ಗ:  ಕೇಂದ್ರ ಸರ್ಕಾರ ಯುಎಪಿಎ ಕಾಯ್ದೆಯಡಿ ಪಾಪ್ಯುಲರ್‌ ಫ್ರಂಟ್‌ ಆಫ್‌ ಇಂಡಿಯಾ (ಪಿಎಫ್‌ಐ)ವನ್ನು ನಿಷೇಧ ಮಾಡಿದ್ದು, ಇಡೀ ದೇಶದ ಜನರ ಬಹಳ ದಿನದ ಅಪೇಕ್ಷೆ ಈಡೇರಿಸಂತಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹ ಅಪಾಯಕಾರಿ ಮತಾಂಧ ಶಕ್ತಿಯನ್ನು ಬ್ಯಾನ್‌ ಮಾಡಬೇಕು ಎಂಬುದಾಗಿತ್ತು.

ಕೇಂದ್ರ ಸರ್ಕಾರ ಕ್ರಮ ಕೈಗೊಂಡಿದ್ದು ಅಭಿನಂದಿಸುತ್ತೇನೆ. ಪಿಎಫ್‌ಐ ಸಂಘಟನೆ ಯುವಕರಿಗೆ ಪ್ರಚೋದನೆ ಮಾಡುತ್ತಿದ್ದ ದೇಶದ್ರೋಹಿ ಕೃತ್ಯ ಎಸಗುತಿತ್ತು. ಪೊಲೀಸರು ಅಲರ್ಚ್‌ ಆಗಿದ್ದಾರೆ. ಅವರ ಚಲನವಲನದ ಮೇಲೆ ಕಣ್ಣಿಟ್ಟಿದ್ದಾರೆ. ದೇಶದ್ರೋಹದ ಬಗ್ಗೆ ಸರಿಯಾದ ಸಾಕ್ಷ ಲಭಿಸಿದ ಹಿನ್ನೆಲೆ ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎಂದರು.

ರಾಜ್ಯದಲ್ಲಿ ವಶಕ್ಕೆ ಪಡೆದವರ ಪಿಎಫ್‌ಐ ಕಾರ್ಯಕರ್ತರ ವಿಳಾಸ, ಆದಾಯದ ಮೂಲ ಪತ್ತೆ ಹಚ್ಚಿದ್ದಾರೆ. ದೇಶದ್ರೋಹ ಚಟುವಟಿಕೆಯನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಕೃತ್ಯದಲ್ಲಿ ಭಾಗಿಯಾದರೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ರಾತ್ರೋರಾತ್ರಿ ರಾಜ್ಯ ಪೊಲೀಸರ ಮೆಗಾ ಆಪರೇಷನ್ ಹಲವು ಪಿಎಫ್ಐ ಕಾರ್ಯಕರ್ತರು ವಶಕ್ಕೆ!

ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಪಿಎಫ್‌ಐ ಸಂಘಟನೆ ಮೇಲಿದ್ದ ಕೇಸ್‌ ವಾಪಸ್‌ ತಗೊಂಡಿದ್ದರು. ಇಂತಹ ಸಂಘಟನೆ ಬೆಳೆಯಲು ಅವರೇ ಕಾರಣ. ಪಿಎಫ್‌ಐ ಸಂಘಟನೆ ನಿಷೇಧ ಅವರಿಗೆ ಸಹಿಸಲು ಆಗುತ್ತಿಲ್ಲ. ಹೀಗಾಗಿ, ಈ ರೀತಿ ಅವರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಇದು ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ಗೃಹ ಸಚಿವರು, ಶಿವಮೊಗ್ಗದ ಪೊಲೀಸರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇದರಿಂದಾಗಿ ಹಲವು ಲಿಂಕ್‌ ಸಿಕ್ಕಿತು. ಎಷ್ಟೋ ಕೊಲೆ ನಡೆಯುವುದನ್ನು ತಪ್ಪಿಸಿದ್ದಾರೆ ಎಂದರು.

ಧರ್ಮದ ಆಧಾರದ ಮೇಲೆ ಎಫ್‌ಐ ಬ್ಯಾನ್‌ ಮಾಡಿಲ್ಲ. ಅವರ ದೇಶ ವಿರೋಧಿ ಕೃತ್ಯ ಮತ್ತು ಚಟುವಟಿಕೆಗಳನ್ನು ಗಮನಿಸಿ ಬ್ಯಾನ್‌ ಮಾಡಿದೆ. ಅವರ ಮಾನಸಿಕತೆ ಬದಲಾಗಬೇಕಿದೆ. ಬ್ಯಾನ್‌ ಮಾಡಿದ ನಂತರವೂ ಅವರು ಬೇರೆ ರೂಪದಲ್ಲಿ ಬರುವ ಸಾಧ್ಯತೆ ಇರುವುದರಿಂದ ಪೊಲೀಸರು ಅವರ ಮೇಲೆ ಗಮನ ಇಡಲಿದ್ದಾರೆ. ಹಾಗೆ ಬಂದರೆ ಕಾನೂನು ಕ್ರಮ ಆಗಲಿದೆ ಎಂದು ಎಚ್ಚರಿಕೆ ನೀಡಿದರು.

ಶಿವಮೊಗ್ಗದಲ್ಲಿ ಮೊನ್ನೆ ನಡೆದ ದಾಳಿಯಲ್ಲಿ ಅನೇಕರ ವಿಳಾಸ, ಆಸ್ತಿ ಗೊತ್ತಾಗಿದೆ, ಪೋನ್‌ ನಂಬರ್‌ ಪತ್ತೆಯಾಗಿದೆ. ಅವರ ಮೇಲೆ ನಿಗಾ ಇಡಲಾಗಿದೆ. ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನದಿಂದ ಅನೇಕ ಲಿಂಕ್‌ ಸಿಕ್ತು. ಬರೀ ಎಫ್‌ಐಆರ್‌ ಹಾಕಿದ್ದರೆ ಏನೂ ಆಗುತ್ತಿರಲಿಲ್ಲ. ಗಂಭೀರವಾಗಿ ತನಿಖೆ ಆದ ಕಾರಣ ಅನೇಕ ದಾಳಿ, ಬಾಂಬ್‌ ತಯಾರಿ, ಕೊಲೆ ಮತ್ತಿತರ ದುರ್ಘಟನೆ ತಪ್ಪಿದ್ದು, ಪೊಲೀಸರನ್ನು ಅಭಿನಂದಿಸುತ್ತೇನೆ. ಪಿಎಫ್‌ಐ ಬ್ಯಾನ್‌ ನಂತರ ಎದುರಾಗಬಹುದಾದ ಪರಿಸ್ಥಿತಿ ಎದುರಿಸಲು ಇಲಾಖೆ ಸಿದ್ಧವಾಗಿದೆ. ಇದು ದೇಶದ ಸುರಕ್ಷತೆ ಪ್ರಶ್ನೆ. ಯಾರೇ ದುಷ್ಕ್ರತ್ಯಕ್ಕೆ ಇಳಿದರೂ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ