ಸೋಮವಾರ, ಮೇ 6, 2024
ಮೂಡಬಿದರೆ: ಖಾಸಗಿ ಕಾಲೇಜಿನ ಹಾಸ್ಟೆಲ್‌ನಲ್ಲಿ ಪದವಿ ಪೂರ್ವ ವಿದ್ಯಾರ್ಥಿನಿ ಆತ್ಮಹತ್ಯೆ..!-ಸೇಡಂ ಮಾಜಿ ಶಾಸಕ ಹಾಗೂ ಕಾಂಗ್ರೆಸ್ ಮುಖಂಡ ಡಾ ನಾಗರೆಡ್ಡಿ ಪಾಟೀಲ್ ನಿಧನ..!-Rain Alert : ನಾಳೆಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮೇ 12ರವರೆಗೆ ಮಳೆ ನಿರೀಕ್ಷೆ..!-ಅಮೇಥಿಯಲ್ಲಿರುವ ಕಾಂಗ್ರೆಸ್​ ಕಚೇರಿ ಮೇಲೆ ದುಷ್ಕರ್ಮಿಗಳಿಂದ ದಾಳಿ; ಕಾರುಗಳು ಧ್ವಂಸ..!-ಬಂಟ್ವಾಳ: ನೇತ್ರಾವತಿ ನದಿ ನೀರಿನಲ್ಲಿ ಆಟವಾಡಲು ಇಳಿದ ಇಬ್ಬರು ಬಾಲಕಿಯರು ನೀರುಪಾಲು..!-6 ವರ್ಷದ ಮಗುವನ್ನು ಮೊಸಳೆಗಳಿದ್ದ ನಾಲೆಗೆ ಎಸೆದ ತಾಯಿ!-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ಬೆಳ್ತಂಗಡಿ: ಅರ್ಚಕ ಆತ್ಮಹತ್ಯೆಗೆ ಶರಣು-ತೇಜಸ್ವಿ ಸೂರ್ಯ ಮೀನು ತಿನ್ನುತ್ತಾ ಎಲ್ಲರ ಮೇಲೆ ಗೂಂಡಾಗಿರಿ ಮಾಡುತ್ತಿದ್ದಾರೆ ; ಕಂಗನಾ ರಣಾವತ್ ಹೇಳಿಕೆ ವಿಡಿಯೋ ವೈರಲ್-ದಿಂಗಾಲೇಶ್ವರ ಶ್ರೀ ವಿರುದ್ದ ಎಫ್ ಐಆರ್ ದಾಖಲು!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪಿಎಫ್‍ಐ ಬ್ಯಾನ್ ವಿರೋಧಿಸಿದರೆ ಜನ ಒದೆಯುತ್ತಾರೆ – ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

Twitter
Facebook
LinkedIn
WhatsApp
ಪಿಎಫ್‍ಐ ಬ್ಯಾನ್ ವಿರೋಧಿಸಿದರೆ ಜನ ಒದೆಯುತ್ತಾರೆ – ಸಿದ್ದರಾಮಯ್ಯ ವಿರುದ್ಧ ಪ್ರಹ್ಲಾದ್ ಜೋಶಿ ವಾಗ್ದಾಳಿ

ನವದೆಹಲಿ: ಪಿಎಫ್‍ಐ ಮೇಲೆ ಸಿದ್ದರಾಮಯ್ಯ (Siddaramaiah) ಸೇರಿದಂತೆ ಕಾಂಗ್ರೆಸ್‍ಗೆ ಈಗಲೂ ಒಳಗೊಳಗೆ ಪ್ರೀತಿ ಇದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ( Prahlad Joshi) ವಾಗ್ದಾಳಿ ನಡೆಸಿದ್ದಾರೆ.

 

ಪಿಎಫ್‍ಐ ಬ್ಯಾನ್ (PFI Ban) ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಷ್ಟ್ರೀಯ ಸುರಕ್ಷತೆ ವಿಚಾರದಲ್ಲಿ ಬಿಜೆಪಿ ಯಾವತ್ತು ಮತಬ್ಯಾಂಕ್ ರಾಜಕಾರಣ ಮಾಡಿಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಇದನ್ನೂ ಓದಿ: ರಾಯಚೂರಿನಲ್ಲಿ ತಯಾರಾಗೋ ವಿಶೇಷ ಕೌದಿ – ಸುಧಾಮೂರ್ತಿಯಿಂದ ರಾಷ್ಟ್ರಪತಿಗೆ ಉಡುಗೊರೆ

ಕೇಂದ್ರ ಬಿಜೆಪಿ ಸರ್ಕಾರ (BJP) ಪಿಎಫ್‍ಐ ಬ್ಯಾನ್ ಮಾಡಿರುವುದನ್ನು ಕಂಡು ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಒಳಗೊಳಗೆ ಕುದಿಯುತ್ತಿದೆ. ಪಿಎಫ್‍ಐ ಭಯೋತ್ಪಾದಕ ಚಟುವಟಿಕೆಗಳು, ದೇಶದ್ರೋಹ ಕೃತ್ಯಗಳ ಬಗ್ಗೆ ಜನರಿಗೆ ಮಾಹಿತಿ ಇದೆ. ಇಂಥಹ ಸಂದರ್ಭದಲ್ಲಿ ಪಿಎಫ್‍ಐ ಬ್ಯಾನ್ ಮಾಡಿರುವುದನ್ನು ವಿರೋಧಿಸಿದರೆ ಜನ ಒದೆಯುತ್ತಾರೆ ಅಷ್ಟೇ. ಪಿಎಫ್‍ಐ ಪರ ಮಾತನಾಡಿದರೆ  ಎಲ್ಲಿ ದೇಶದ ಜನರ ಕಂಗೆಣ್ಣಿಗೆ ಗುರಿಯಾಗಬೇಕಾಗುತ್ತದೆ ಎಂಬುದು ಕಾಂಗ್ರೆಸ್‍ಗೆ ಚಿಂತೆಯಾಗಿದೆ ಎಂದು ಹೇಳಿದರು.

ಪಿಎಫ್‍ಐ ಬ್ಯಾನ್ ಮಾಡಿರುವ ಬಿಜೆಪಿ ಸರ್ಕಾರದ ನಿಲುವನ್ನು ವಿರೋಧಿಸಲು ಕಾಂಗ್ರೆಸ್‍ಗೆ ಸಾಧ್ಯವಾಗುತ್ತಿಲ್ಲ. ಏಕೆಂದರೆ ಪಿಎಫ್‍ಐ ವಿರುದ್ಧ ದೇಶದ್ರೋಹದ ಕೃತ್ಯಗಳ ಸಾಕಷ್ಟು ಸಾಕ್ಷಿಗಳು ನಮ್ಮ ಬಳಿ ಇವೆ. ಹೀಗಾಗಿ ಏನಾದರು ಮಾಡಿ ಮುಸ್ಲಿಂ ಓಲೈಕೆ ಮಾಡಬೇಕು ಎಂಬ ಕಾರಣಕ್ಕೆ ಆರ್‌ಎಸ್‍ಎಸ್ ಬಗ್ಗೆ ಕಾಂಗ್ರೆಸ್ ಮಾತನಾಡುತ್ತಿದೆ.

ಆರ್‌ಎಸ್‌ಎಸ್ (RSS) ಎಂದರೆ ನಾವೇ. ಈ ದೇಶದ ಪ್ರಧಾನಿ ನರೇಂದ್ರ ಮೋದಿ ಅವರೇ ಆರ್‌ಎಸ್‍ಎಸ್‍ನಿಂದ ಬಂದವರು. ಆರ್‌ಎಸ್‍ಎಸ್ ಅನ್ನು ಯಾವ ಆಧಾರದ ಮೇಲೆ ಹೇಗೆ ಬ್ಯಾನ್ ಮಾಡುತ್ತೀರಾ? ಈ ಹಿಂದೆ ಕಾಂಗ್ರೆಸ್ ಸರ್ಕಾರ ಮೂರು ಬಾರಿ ಆರ್‌ಎಸ್‍ಎಸ್ ಬ್ಯಾನ್ ಮಾಡಿತ್ತು. ಬ್ಯಾನ್ ಮಾಡಿ ಕಾಂಗ್ರೆಸ್ ಏನು ಸಾಧಿಸಿದೆ. ಆರ್‌ಎಸ್‍ಎಸ್ ವಿರುದ್ಧ ಒಂದೇ ಒಂದು ಸಾಕ್ಷಿಯನ್ನು ಪ್ರಸ್ತುತಪಡಿಸಲು ಕಾಂಗ್ರೆಸ್‍ಗೆ ಸಾಧ್ಯವಾಗಿಲ್ಲ ಎಂದು ಕಿಡಿಕಾರಿದರು.

ಆರ್‌ಎಸ್‍ಎಸ್ ಒಂದು ರಾಷ್ಟ್ರೀಯವಾದಿ ಸಂಘಟನೆ. ದೇಶದ ಪರ ಕೆಲಸ ಮಾಡುತ್ತಿರುವ ಸಂಘಟನೆ. ಆದರೆ ಪಿಎಫ್‍ಐ ಸಂಘಟನೆ ಭಯೋತ್ಪಾದನಾ ಚಟುವಟಿಕೆಗಳನ್ನು ಪ್ರೇರೇಪಿಸುತ್ತಿರುವ ಕುರಿತು ಹಲವು ಸಾಕ್ಷ್ಯಗಳು ದೊರೆತಿವೆ. ದೇಶದಾದ್ಯಂತ ಹಲವು ಹತ್ಯೆಗಳಲ್ಲಿ ಈ ಸಂಘಟನೆ ಕೈವಾಡವಿರುವುದು ಸ್ಪಷ್ಟವಾಗಿದೆ. ಎಲ್ಲ ಸಾಕ್ಷಿಗಳನ್ನು ಕಲೆಹಾಕಿಯೇ ಕೇಂದ್ರ ಬಿಜೆಪಿ ಸರ್ಕಾರ ಪಿಎಫ್‍ಐ ಬ್ಯಾನ್ ಮಾಡಿದೆ. ಇದು ರಾಷ್ಟ್ರೀಯ ಸುರಕ್ಷತೆಯ ವಿಚಾರ. ಇಂಥಹ ಸೂಕ್ಷ್ಮ ವಿಚಾರದಲ್ಲಿ ಬಿಜೆಪಿ ಯಾವತ್ತು ಮತಬ್ಯಾಂಕ್ ರಾಜಕಾರಣ ಮಾಡಿಲ್ಲ. ಎಸ್‍ಡಿಪಿಐ ಒಂದು ಪೊಲಿಟಿಕಲ್ ಪಾರ್ಟಿ. ಚುನಾವಣಾ ಆಯೋಗ ಈ ನಿಟ್ಟಿನಲ್ಲಿ ತನ್ನ ತೀರ್ಮಾನ ತೆಗೆದುಕೊಳ್ಳಲಿದೆ ಎಂದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!

ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.! Twitter Facebook LinkedIn WhatsApp ಉಪ್ಪಿನಂಗಡಿ: ಇಲ್ಲಿನ ನಿನ್ನಿಕಲ್ಲು ನಿವಾಸಿ ದಿ| ಗೋಪಾಲ ಗೌಡ ಅವರ ಪುತ್ರ ಜನಾರ್ದನ ನಿನ್ನಿಕಲ್ಲು (27) ಅವರು ಹೃದಯಾಘಾತದಿಂದ ಶುಕ್ರವಾರ ನಿಧನರಾಗಿದ್ದಾರೆ. ಮೇಸ್ತ್ರಿ

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!

ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..! Twitter Facebook LinkedIn WhatsApp ಸುಬ್ರಮಣ್ಯ: 10 ದಿನಗಳ ಹಿಂದೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಸಿಡಿಲು ಬಡಿದು ಸಾವನ್ನಪ್ಪಿರುವ

ಅಂಕಣ