ಮಂಗಳವಾರ, ಮಾರ್ಚ್ 11, 2025
ಸೋಡಿಯಂ ಬಳಸಿ ಸ್ಫೋಟ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್; ಡ್ರೋಣ್ ಪ್ರತಾಪ್ ಅರೆಸ್ಟ್!-ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ!-S M Krishna : ಒಕ್ಕಲಿಗ ಸಂಪ್ರದಾಯದಂತೆ ಸೋಮನಹಳ್ಳಿಯಲ್ಲಿಂದು ಅಂತ್ಯಸಂಸ್ಕಾರ; ಮದ್ದೂರು ಪಟ್ಟಣ ಸ್ವಯಂ ಪ್ರೇರಿತ ಬಂದ್‌ಗೆ ಕರೆ-Kurla: ನಿಯಂತ್ರಣ ತಪ್ಪಿ 22 ವಾಹನಗಳಿಗೆ ಡಿಕ್ಕಿ ಹೊಡೆದ ಬಸ್ – 7 ಮಂದಿ ಸಾವು, 49 ಮಂದಿಗೆ ಗಾಯ-ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ; ಸರ್ಕಾರದ ವಿರುದ್ಧ ಸಿಡಿದೆದ್ದ ಮೃತ್ಯುಂಜಯ ಸ್ವಾಮೀಜಿ-S M Krishna : ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್‌ಎಂ ಕೃಷ್ಣ ವಿಧಿವಶ – ನಾಳೆ ಅಂತ್ಯಕ್ರಿಯೆ-ಡ್ರಗ್ಸ್‌ ಕೊಟ್ಟು ನರ್ಸ್ ಮೇಲೆ ಅತ್ಯಾಚಾರ, ವಿಡಿಯೊ ಚಿತ್ರೀಕರಿಸಿ ಬೆದರಿಕೆ; ಪ್ರಕರಣ ದಾಖಲು-ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರ ಕುಟುಂಬಗಳಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ ಪರಿಹಾರ ಘೋಷಣೆ-ರಾಜೇಂದರ್ ಮೇಘವಾರ್, ಪಾಕಿಸ್ತಾನದ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ-Ind vs Aus: ಭಾರತಕ್ಕೆ 10 ವಿಕೆಟ್‌ ಹೀನಾಯ ಸೋಲು, 1031 ಎಸೆತಗಳಲ್ಲಿ ಪಂದ್ಯ ಮುಗಿಸಿದ ಆಸ್ಟ್ರೇಲಿಯಾ!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪಿಜಿ ಯುವತಿ ಮರ್ಡರ್ ಕೇಸ್‌ಗೆ ಟ್ವಿಸ್ಟ್‌; ಸ್ನೇಹಿತೆಯನ್ನ ಕಾಪಾಡಿ ಜೀವ ಕಳೆದುಕೊಂಡ ಕೃತಿ

Twitter
Facebook
LinkedIn
WhatsApp
ಪಿಜಿ ಯುವತಿ ಮರ್ಡರ್ ಕೇಸ್‌ಗೆ ಟ್ವಿಸ್ಟ್‌; ಸ್ನೇಹಿತೆಯನ್ನ ಕಾಪಾಡಿ ಜೀವ ಕಳೆದುಕೊಂಡ ಕೃತಿ

ಬೆಂಗಳೂರು: ಕೋರಮಂಗಲದ ವಿಆರ್ ಲೇಔಟ್​​​ನ ಪಿಜಿಯೊಂದರಲ್ಲಿ ಯುವತಿಯ (ಪಿಜಿ ಯುವತಿ) ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ಯೆ ಮಾಡಿದ ಆರೋಪಿ ಅಭಿಷೇಕ್​​ನ ವಿಕೃತಿಗಳು ಬಯಲಾಗಿವೆ. ಹಾಗೆ ಆರೋಪಿ ಅಭಿಷೇಕ್​ ಕೊಲೆ ಮಾಡಲು ಕಾರಣವೇನು ಎಂಬುವುದು ಪೊಲೀಸರ ತನಿಖೆಯಲ್ಲಿ ತಿಳಿದುಬಂದಿದೆ. ಕೊಲೆ ಮಾಡಿದ ಆರೋಪಿ ಅಭಿಷೇಕ್​ ಭೋಪಾಲ್ ಮೂಲದವ.

ಅಭಿಷೇಕ್ ಹಾಗೂ ಕೊಲೆಯಾದ ಕೃತಿ ಕುಮಾರಿ‌ಯ ಸ್ನೇಹಿತೆ ಪರಸ್ಪರ ಪ್ರೀತಿಸುತ್ತಿದ್ದರು. ಕೃತಿ ಕುಮಾರಿ ಹಾಗೂ ಅಭಿಷೇಕ್ ಪ್ರಿಯತಮೆ ಇಬ್ಬರು ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ಕೃತಿ ಕುಮಾರಿ ಹಾಗೂ ಅಭಿಷೇಕ್ ಪ್ರಿಯತಮೆ ಜೊತೆಗೆ ಒಂದೇ ಪಿಜಿಯಲ್ಲಿ ವಾಸವಾಗಿದ್ದರು. ಈ ಪಿಜಿಗೆ ಅಭಿಷೇಕ್ ಆಗಾಗ ಬಂದು ಹೋಗುತ್ತಿದ್ದನು.

ಅಭಿಷೇಕ್ ಭೋಪಾಲ್​ನಲ್ಲಿ ಯಾವುದೇ ಕೆಲಸ ಕೆಲಸ ಮಾಡುತ್ತಿರಲಿಲ್ಲ. ಆಗಾಗ ಭೋಪಾಲ್​ನಿಂದ ಬೆಂಗಳೂರಿಗೆ ಬಂದು ಪ್ರೇಯಸಿ ಜೊತೆ ಸುತ್ತಾಡಿಕೊಂಡು ಹೋಗುತ್ತಿದ್ದನು. ಕೆಲಸಕ್ಕೆ ಸೇರು ಅಂತ ಅಭಿಷೇಕ್​ಗೆ ಪ್ರೇಯಸಿ ಹೇಳುತ್ತಿದ್ದಳು. 

ಬಲವಂತಕ್ಕೆ ಕೆಲಸಕ್ಕೆ ಸೇರಿದ್ದಾಗಿ ಅಭಿಷೇಕ್​​ ಪ್ರೇಯಸಿಗೆ ಹೇಳಿದ್ದನಂತೆ. ಆದರೆ ಇದು ಸಹ ಸುಳ್ಳು ಎಂದು ಅಭಿಷೇಕ್​ನ ಪ್ರೇಯಸಿಗೆ ಗೊತ್ತಾಗಿತ್ತು. ಹೀಗಾಗಿ ಅಭಿಷೇಕ್​ನನ್ನು ಅವಾಯ್ಡ್ ಮಾಡಲು ಆರಂಭಿಸಿದ್ದಳು. ಇದರಿಂದ ಕೋಪಗೊಂಡ ಅಭಿಷೇಕ್​ ಆಗಾಗ ಬಂದು ಪಿಜಿ ಬಳಿ ಗಲಾಟೆ ಮಾಡುತ್ತಿದ್ದನು.

ಕೊಲೆ ಮಾಡುವುದಕ್ಕಿಂತ ಮೂರು ದಿನದ ಮುಂಚೆ ಬೆಂಗಳೂರಿನಲ್ಲಿ ಅಭಿಷೇಕ್​ ಬಾಡಿಗೆ ಮನೆ ಮಾಡಿದ್ದನು. ಈ ಬಾಡಿಗೆ ಮನೆಯಲ್ಲಿ ಪ್ರೇಯಸಿಯನ್ನು ಇರಿಸಿದ್ದನು. ಆದರೆ ಇದು ಆಕೆಗೆ ಇಷ್ಟವಿರಲಿಲ್ಲ. ಆದರೆ ಈ ಮನೆಯಲ್ಲಿ ಇರಲು ಆಗದೆ ಅಭಿಷೇಕ್​ ಪ್ರಯೇಸಿಗೆ ಇರಲು ಆಗದೆ ಒದ್ದಾಡಿದ್ದಳು. ನನ್ನನ್ನು ಇಲ್ಲಿಂದ ಕರೆದುಕೊಂಡು ಹೋಗುವೆ ಗೆಳತಿ ಕೃತಿ ಕುಮಾರಿಗೆ ಅಭಿಷೇಕ್​ ಪ್ರೇಯಸಿಗೆ ಹೇಳಿದ್ದಾಳೆ.

ಬಳಿಕ ಕೃತಿ ಕುಮಾರಿ ತನ್ನ ಸ್ನೇಹಿತರೊಂದಿಗೆ ತೆರಳಿ ಗೆಳತಿಯನ್ನು ತನ್ನ ಪಿಜಿಗೆ ಕರೆತಂದಿದ್ದಳು. ಈ ವಿಚಾರ ಗೊತ್ತಾಗುತ್ತಿದ್ದಂತೆ ಕೋಪಗೊಂಡ ಅಭಿಷೇಕ್​, ಮಂಗಳವಾರ ರಾತ್ರಿ‌ 11.30ರ ಸುಮಾರಿಗೆ ಪಿಜಿಗೆ ಹೋಗಿದ್ದಾನೆ. ಒಳ ಹೋಗಿ ಕೃತಿ ಕುಮಾರಿ ಇದ್ದ ಕೋಣೆ ಬಾಗಿಲು ತಟ್ಟಿದ್ದಾನೆ. ಕೃತಿ ಕುಮಾರಿ ಬಾಗಿಲು ತೆಗೆಯುತ್ತಿದ್ದಂತೆ, ಚಾಕು ಇರಿದು ಕೊಲೆ ಮಾಡಿದ್ದಾನೆ.

ಸದ್ಯ ಆರೋಪಿ ಅಭಿಷೇಕ್ ಹೊರ ರಾಜ್ಯಕ್ಕೆ ಪರಾರಿಯಾಗಿರುವ ಶಂಕೆ ವ್ಯಕ್ತವಾಗಿದೆ. ಆರೋಪಿಗಾಗಿ ಕೋರಮಂಗಲ ಪೊಲೀಸರು ಬಲೆ ಬೀಸಿದ್ದಾರೆ.

ಹುಬ್ಬಳ್ಳಿ: ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನ; ಆರೋಪಿ ಕಾಲಿಗೆ ಗುಂಡೇಟು

ಹುಬ್ಬಳ್ಳಿ: ಕಳವು ಪ್ರಕರಣವೊಂದಕ್ಕೆ ಸಂಬಂಧಿಸಿ ಆರೋಪಿಗಳ ಬಂಧನಕ್ಕೆ ತೆರಳಿದ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗಲು ಯತ್ನಿಸಿದ ಆರೋಪಿಯೋರ್ವನ ಕಾಲಿಗೆ ಗುಂಡಿಕ್ಕಿ ಬಂಧಿಸಿದ ಘಟನೆ ಗಾಮನಗಟ್ಟಿ ರಸ್ತೆ ತಾರಿಹಾಳ ಕ್ರಾಸ್ ಬಳಿ ಶುಕ್ರವಾರ ನಡೆದಿದೆ.

ಮುಂಬೈ ಮೂಲದ ಫರ್ಹಾನ್ ಶೇಖ್ ಬಂಧಿತ ಆರೋಪಿ. ಕೇಶ್ವಾಪುರದ ರಮೇಶ ಭವನದ ಬಳಿಯಿರುವ ಭುವನೇಶ್ವರಿ ಜ್ಯುವೆಲ್ಲರಿ ಶಾಪ್ ನಲ್ಲಿ ಇತ್ತೀಚೆಗೆ ನಡೆದ ಚಿನ್ನಾಭರಣ ಕಳವು ಪ್ರಕರಣಕ್ಕೆ ಸಂಬಂಧಿಸಿ ಈತನನ್ನು ಕೇಶ್ವಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿದ್ದರು.

ಇನ್ನುಳಿದ ಆರೋಪಿಗಳನ್ನು ವಶಕ್ಕೆ ಪಡೆಯುವ ಸಲುವಾಗಿ ಆರೋಪಿ ಜೊತೆಗೆ ಪೊಲೀಸರು ಇಂದು ಬೆಳಗ್ಗೆ ಗಾಮನಗಟ್ಟಿ ರಸ್ತೆ ತಾರಿಹಾಳ ಕ್ರಾಸ್ ಬಳಿ ತಂದು ಕಾರ್ಯಾಚರಣೆ ನಡೆಸಲು ಮುಂದಾಗಿದ್ದರು. ಈ ವೇಳೆ ಫರ್ಹಾನ್ ಶೇಖ್ ಕಾನ್ಸ್ಟೇಬಲ್ ಸುಜಾತ ಹಾಗೂ ಮಹೇಶ್ ಎಂಬುವರ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ ಎನ್ನಲಾಗಿದೆ.

ಆಗ ಗೋಕುಲ ಠಾಣೆಯ ಪಿಎಸ್ಸೈ ಕವಿತಾ ಗಾಳಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ, ನಂತರ ಆರೋಪಿ ಕಾಲಿಗೆ ಗುಂಡು ಹಾರಿಸಿದ್ದಾರೆ. ಗಾಯಗೊಂಡ ಫರ್ಹಾನ್ ನನ್ನು ಬಂಧಿಸಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಆರೋಪಿ ವಿರುದ್ಧ ಹೈದರಾಬಾದ್, ಕಲಬುರಗಿ, ಅಹ್ಮದನಗರ, ಸೂರತ್ ಮತ್ತು ಮುಂಬೈನಲ್ಲಿ ಕೊಲೆ, ಡಕಾಯಿತಿ, ದರೋಡೆ ಪ್ರಕರಣ ದಾಖಲಾಗಿದೆ. ಘಟನೆಯಲ್ಲಿ ಕೆಲವರು ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನೆ ವೇಳೆ ಪಿಎಸ್ಸೈ ಕವಿತಾ ಮಾಡಗ್ಯಾಳ, ಮಹಿಳಾ ಪೊಲೀಸ್ ಕಾನಸ್ಟೇಬಲ್ ಸುಜಾತಾ ಮತ್ತು ಕಾನಸ್ಟೇಬಲ್ ಮಹೇಶ ಗಾಯಗೊಂಡಿದ್ದು, ಅವರು ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು

ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist