ಮಂಡ್ಯ: ಪಿಲ್ಲರ್ಗೆ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ (tipper) ಹೊತ್ತಿ ಉರಿದಿದ್ದು, ಚಾಲಕ ಸಜೀವ ದಹನವಾದಂತಹ ಘಟನೆ ನಡೆದಿದೆ. ಮದ್ದೂರಿನ ಬೆಂ-ಮೈ ಹೆದ್ದಾರಿಯ ಎಲ್.ಐ.ಸಿ ಕಛೇರಿ ಮುಂಭಾಗ ಘಟನೆ ಸಂಭವವಿಸಿದೆ. ಬಿಡದಿಯಿಂದ ಮೈಸೂರಿಗೆ ಜೆಲ್ಲಿ ತುಂಬಿಕೊಂಡು ಟಿಪ್ಪರ್ ತೆರಳುತ್ತಿದ್ದು, ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಪ್ಲೈ ಓವರ್ ಪಿಲ್ಲರ್ಗೆ ಟಿಪ್ಪರ್ ಡಿಕ್ಕಿಯೊಡೆದಿದೆ. ಡಿಕ್ಕಿ ರಭಸಕ್ಕೆ ಟಿಪ್ಪರ್ ನಜ್ಜುಗುಜ್ಜಾದ ಹಿನ್ನಲೆ ವಾಹನದೊಳಗೆ ಚಾಲಕ ಸಿಲುಕಿಕೊಂಡಿದ್ದಾನೆ. ವಾಹನದಿಂದ ಹೊರಬರಲಾಗದೇ ಚಾಲಕ ಸಜೀವ ದಹನವಾಗಿದ್ದಾನೆ. ಚಾಲಕನನ್ನು ಹಾಸನ ಮೂಲದ ದಿನೇಶ್ ಎಂದು ಗುರುತಿಸಲಾಗಿದೆ. ಅಗ್ನಿಶಾಮಕ ಮತ್ತು ಪೋಲೀಸ್ ಸಿಬ್ಬಂದಿಗಳು ಬೆಂಕಿ ನಂದಿಸಿ ಚಾಲಕನ ಶವ ಹೊರ ತೆಗೆದಿದ್ದಾರೆ. ಘಟನೆ ಹಿನ್ನೆಲೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಮ್ ಉಂಟಾಗಿದ್ದು, ಟಿಪ್ಪರ್ ಪಕ್ಕಕ್ಕೆ ಸರಿಸಿ ಸಂಚಾರಕ್ಕೆ ಪೊಲೀಸರು ಅನುವು ಮಾಡಿಕೊಟ್ಟಿದ್ದಾರೆ. ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist