ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪುಂಜಾಲಕಟ್ಟೆ: ಮಲಗಿದ್ದಲ್ಲೇ 22 ವರ್ಷದ ಯುವತಿ ನಿಧನ!

Twitter
Facebook
LinkedIn
WhatsApp
ಪುಂಜಾಲಕಟ್ಟೆ: ಮಲಗಿದ್ದಲ್ಲೇ 22 ವರ್ಷದ ಯುವತಿ ನಿಧನ!

ಬಂಟ್ವಾಳ : ಯುವತಿಯೋರ್ವಳು ಮಲಗಿದ್ದಲ್ಲೇ ಮೃತಪಟ್ಟ ಘಟನೆ ವಗ್ಗ ಸಮೀಪದ ಮದ್ವ ಎಂಬಲ್ಲಿ ನಡೆದಿದೆ. ಕಾವಳಮೂಡುರು ಗ್ರಾಮದ ಪುಳಿಮಜಲು ನಿವಾಸಿ ರಾಜ ಅವರ ಪುತ್ರಿ. ಮಿತ್ರ ಶೆಟ್ಟಿ (22) ಮೃತಪಟ್ಟ  ಯುವತಿ.

ಊಟ ಮಾಡಿ ಮಲಗಿದ ಯುವತಿ ಬೆಳಿಗ್ಗೆ ನೋಡುವಾಗ ಮೃತಪಟ್ಟ ಬಗ್ಗೆ ವರದಿಯಾಗಿದೆ. ಸಾವಿಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ತಂದೆ ಮತ್ತು ಅಣ್ಣ ಇಬ್ಬರು ಬೆಂಗಳೂರಿನಲ್ಲಿ ಕೆಲಸದಲ್ಲಿರುವ ಕಾರಣ ತಾಯಿ ಮತ್ತು ಮಗಳು ಪ್ರಸ್ತುತ ಕಾವಳಪಡೂರು ಗ್ರಾಮದ ಮದ್ವ ಕಂಬಲಡ್ಡ ದೊಡ್ಡಮ್ಮನ ಮನೆಯಲ್ಲಿ ವಾಸವಾಗಿದ್ದರು. ರಾತ್ರಿ ಊಟ ಮಾಡಿ ಒಟ್ಟಿಗೆ ಮಲಗಿದ್ದವಳು ಬೆಳಿಗ್ಗೆ ಎದ್ದು ನೋಡುವಾಗ ಎದ್ದೇಳುವುದಿಲ್ಲ ಮಾತನಾಡುವುದಿಲ್ಲ ಎಂದು ಆಸ್ಪತ್ರೆಗೆ ಹೋಗಿ ಪರೀಕ್ಷೆ ಮಾಡಿದಾಗ ಮೃತಪಟ್ಟ ಬಗ್ಗೆ ವೈದ್ಯರು ತಿಳಿಸಿದ್ದಾರೆ.

ಬಳಿಕ ಮೃತದೇಹವನ್ನು ದೇರಳಕಟ್ಟೆ ಕೆ‌ಎಸ್.ಹೆಗ್ಡೆ ಯಲ್ಲಿ ಮರಣೋತ್ತರ ಪರೀಕ್ಷೆ ಗಾಗಿ ಕೊಂಡೋಯ್ಯಲಾಗಿದೆ. ಆರಂಭದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರಬಹುದು ಹೇಳಲಾಗುತ್ತಿತ್ತು. ಆದರೆ ಬ್ರೈನ್ ಎಮರೇಜ್ ನಿಂದಲೂ ಸಾವು ಆಗಿರಬಹುದು ಎಂಬ ಸಂಶಯವಿದ್ದು, ವೈದ್ಯರು ಮರಣೋತ್ತರ ಪರೀಕ್ಷೆಯ ವರದಿಯನ್ನು ನೀಡಿದ ಬಳಿಕ ಸಾವಿನ ಸ್ಪಷ್ಟವಾದ ಕಾರಣ ಸಿಗಬಹುದು.

ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಸಹಜ ಸಾವು ಎಂದು ಪ್ರಕರಣ ದಾಖಲಾಗಿದೆ. ಕ್ರಿಯಾಶೀಲೆ ಯುವತಿ ಓಂಕಾರ ಫ್ರೆಂಡ್ಸ್ (ರಿ) ಮದ್ವ ಇದರ ಮಹಿಳಾ ಘಟಕದ ಸದಸ್ಯೆಯಾಗಿರುವ ಮಿತ್ರ ಶೆಟ್ಟಿ ಬಿಸಿರೋಡಿನ ವಕೀಲರ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದಳು. ಅತ್ಯಂತ ಕ್ರಿಯಾಶೀಲ ಯುವತಿಯಾಗಿದ್ದು ಸಾಮಾಜಿಕವಾಗಿ ಗುರುತಿಸಿಕೊಂಡಿದ್ದಳು

ಮೃತರು ತಂದೆ, ತಾಯಿ, ಸಹೋದರನನ್ನು ಅಗಲಿದ್ದಾರೆ.ಮಿತ್ರಾ ಅವರು ಪದವೀಧರೆಯಾಗಿದ್ದು, ಸ್ಥಳೀಯವಾಗಿ ಸಂಘ, ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದರು. ಅವರ ನಿಧನಕ್ಕೆ ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪ್ಪಾಡಿಗುತ್ತು ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ