ಶನಿವಾರ, ಏಪ್ರಿಲ್ 27, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಯುವಕ ಬಲಿ!

Twitter
Facebook
LinkedIn
WhatsApp
WhatsApp Image 2023 04 03 at 5.51.52 PM

ಪುಂಜಾಲಕಟ್ಟೆ,: ಶಂಕಿತ ರೇಬಿಸ್‌ಗೆ ಯುವಕನೋರ್ವ ಬಲಿಯಾದ ಘಟನೆ ಸೋಮವಾರ ಸಂಭವಿಸಿದೆ.ಬಂಟ್ವಾಳ ತಾಲೂಕಿನ ಪಿಲಾತಬೆಟ್ಟು ಗ್ರಾಮದ ಪುಂಜಾಲಕಟ್ಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ನಿವಾಸಿ ನಿವಾಸಿ ಅಶೋಕ ಹೆಗ್ಡೆ ಅವರ ಪುತ್ರ ಪ್ರಶಾಂತ ಹೆಗ್ಡೆ ಅವರು ಮೃತ ಪಟ್ಟ ದುರ್ದೈವಿಯಾಗಿದ್ದಾರೆ.

ಕಳೆದ ಮೂರು ತಿಂಗಳ ಹಿಂದೆ ಪ್ರಶಾಂತ್ ಅವರಿಗೆ ಅವರ ಮನೆಯ ನಾಯಿ ಕಡಿದಿದ್ದು, ಬಳಿಕ ನಾಯಿ ಮೃತ ಪಟ್ಟಿತ್ತು. ಆದರೆ ಪ್ರಶಾಂತ್ ಅವರು ನಾಯಿ ಕಡಿದಿರುವುಕ್ಕೆ ಸೂಕ್ತ ಚಿಕಿತ್ಸೆ ಪಡೆದಿರಲಿಲ್ಲ ಎನ್ನಲಾಗಿದೆ. ಕಳೆದೆರಡು ದಿನಗಳಿಂದಅವರು ತೀವ್ರ ಸಂಕಟ, ಜ್ವರದಿಂದ ಒದ್ದಾಡಿದ್ದು, ಪುಂಜಾಲಕಟ್ಟೆ ಪ್ರಾ.ಆ.ಕೇಂದ್ರದಲ್ಲಿ ಚಿಕಿತ್ಸೆಗಾಗಿ ತೆರಳಿದ್ದಾರೆ. ಜ್ವರ ತಪಾಸಣೆ ನಡೆಸಿದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಸರಕಾರಿ ಆಸ್ಪತ್ರೆಗೆ ಕಳುಹಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪ್ರಶಾಂತ್ ಮೃತಪಟ್ಟಿದ್ದಾರೆ. ನಾಯಿ ಕಡಿದ ಬಳಿಕ ಶೀಘ್ರ ಚಿಕಿತ್ಸೆ ಪಡೆದಿದ್ದರೆ ಅವರು ಬದುಕುಳಿಯುತ್ತಿದ್ದರು. ಆದರೆ, ಅದಾಗಲೇ ರೇಬಿಸ್ ಲಕ್ಷಣಗಳು ಉಲ್ಬಣಗೊಂಡಿತ್ತು ಎಂದು ತಿಳಿದು ಬಂದಿದೆ.

ಪ್ರಶಾಂತ್ ಅವರ ಕ್ಲನಿಕಲ್ ಪರೀಕ್ಷೆ ವರದಿಗಳು ರೇಬಿಸ್ ಲಕ್ಷಣ ಹೊಂದಿದ್ದವು. ಆದರೆ ಅವರು ಯಾವ ಕಾರಣದಿಂದ ಮೃತರಾಗಿದ್ದಾರೆಂದು ನಿಖರವಾಗಿ ತಿಳಿದು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಕಿಶೋರ್ ಅವರು ತಿಳಿಸಿದ್ದಾರೆ. ಇಂಥ ಸಂದರ್ಭದಲ್ಲಿ ಹೆಚ್ಚಿನ ನಿಗಾ ವಹಿಸುವುದು, ತಕ್ಷಣ ಚಿಕಿತ್ಸೆ ಕೊಡಿಸುವುದು ಅಗತ್ಯ ಎಂದು ಅವರು ತಿಳಿಸಿದ್ದಾರೆ.ಇದೀಗ ಅವರ ಸಾವಿಗೆ ರೇಬಿಸ್ ಕಾರಣವೆಂದಾದರೆ ಪ್ರಶಾಂತ್ ಅವರ ಸಂಪರ್ಕದಲ್ಲಿದ್ದವರು ಆಂಟಿ ರೇಬಿಸ್ ಇಂಜೆಕ್ಷನ್ ಪಡಕೊಳ್ಳಬೇಕಾಗಿದೆ ಎಂಬ ಆತಂಕ ಎದುರಾಗಿದೆ.ಪ್ರಶಾಂತ್ ಅವರು ಇಬ್ಬರು ಪುತ್ರರಲ್ಲಿ ಹಿರಿಯವರಾಗಿದ್ದು, ಅವಿವಾಹಿತರಾಗಿದ್ದರು. ಜಿಯೋ ಸಂಸ್ಥೆಯಲ್ಲಿ ಒಪ್ಪಂದದ ಮೇರೆಗೆ ಉದ್ಯೋಗಿಯಾಗಿದ್ದು, ಮನೆಗೆ ಆಧಾರವಾಗಿದ್ದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ