
ಬಂಟ್ವಾಳ: ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿರುವ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 38ನೇ ಸಂಭ್ರಮಾಚರಣೆಯ ಪ್ರಯುಕ್ತ 14ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಎ.24ರಂದು ಇಲ್ಲಿನ ಬಂಗ್ಲೆ ಮೈದಾನದಲ್ಲಿ ಜರಗಲಿದೆ ಎಂದು ಕ್ಲಬ್‌ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ತಿಳಿಸಿದ್ದಾರೆ.
ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ವಿವರ ನೀಡಿದರು.
ಎ.23 ರಂದು ಸಂಜೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಎ.24ರಂದು ಬೆಳಗ್ಗೆ ಶ್ರೀಗೋಪಾಲಕೃಷ್ಣ ದೇವಸ್ಥಾನದಿಂದ ಮದುವೆ ಮಂಟಪದವರೆಗೆ ವಧು-ವರರ ದಿಬ್ಬಣ ಮೆರವಣಿಗೆ ವಿವಿಧ ಸ್ತಬ್ಧ ಚಿತ್ರ ಹಾಗೂ ಜಿಲ್ಲೆಯ ಪ್ರಸಿದ್ಧ ಕಲಾತಂಡಗಳೊಂದಿಗೆ ಕೇರಳ ಚೆಂಡೆಗಳ ಆಕರ್ಷಣೆಯೊಂದಿಗೆ ವೈಭವಪೂರ್ವಕವಾಗಿ ಸಾಗಿ ಬರಲಿದೆ.
ಗುರುವಾಯನಕೆರೆ ಕೃಷ್ಣಭಟ್ ಅವರ ಪೌರೋಹಿತ್ಯದಲ್ಲಿ , ಮಧ್ಯಾಹ್ನ 11ರ ಶುಭ ಮುಹೂರ್ತದಲ್ಲಿ 20 ಜೋಡಿ ವಧು-ವರರಿಗೆ ಸಾಮೂಹಿಕ ವಿವಾಹ ನಡೆಯಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿವಿಧ ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಮಾಡಲಾಗುವುದು ಏಂದು ಅವರು ತಿಳಿಸಿದರು.
ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಆಶೀರ್ವಚನ ನೀಡಲಿರುವರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿರುವರು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರು ಅಧ್ಯಕ್ಷತೆ ವಹಿಸಲಿರುವರು. ಸಂಸದ ನಳಿನ್ ಕುಮಾರ್ ಕಟೀಲು ಅವರು ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಿರುವರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ ಮಾಡುವರು. ಉದ್ಯಮಿ ರವಿಶಂಕರ ಶೆಟ್ಟಿ ಬಡಾಜೆ ಅವರು ಮಂಗಳ ಸೂತ್ರ ವಿತರಿಸಲಿರುವರು.
ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಹಿತ ವಿವಿಧ ಕ್ಷೇತ್ರಗಳ ಗಣ್ಯ ವ್ಯಕ್ತಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮಧ್ಯಾಹ್ನ ಸಾರ್ವಜನಿಕರಿಗೆ ವಿವಾಹ ಭೋಜನ ಏರ್ಪಡಿಸಲಾಗಿದೆ. ಸಂಜೆ ಮಂತ್ರ ದೇವತೆ ಕ್ರಿಯೇಶನ್ಸ್ ಅವರ ನಿರ್ಮಾಣದ ಚಂದ್ರನ್ ಕಿರು ಚಿತ್ರ ಬಿಡುಗಡೆ, ಕ್ಲಬ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಕುದ್ರೋಳಿ ಗಣೇಶ್ ಅವರಿಂದ ಮಸ್ತ್ ಮ್ಯಾಜಿಕ್ ನಡೆಯಲಿದೆ. ಬಳಿಕ ಕಂಡನಿ ಬುಡೆದಿ ತುಳುನಾಟಕ ನಡೆಯಲಿದೆ ಎಂದರು.
ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ,ಪದಾಧಿಕಾರಿಗಳಾದ ರಾಜೇಶ್ ಪಿ. ಬಂಗೇರ, ರಫೀಕ್, ಪ್ರಭಾಕರ ಪಿ.ಎಂ., ರತ್ನದೇವ್ ಪುಂಜಾಲಕಟ್ಟೆ, ಕುಶಾಲಪ್ಪ,ಜಯರಾಜ್ ಉಪಸ್ಥಿತರಿದ್ದರು.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist