ಭಾನುವಾರ, ಏಪ್ರಿಲ್ 28, 2024
ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!-ಮಂಡ್ಯದಲ್ಲಿ ಸುಮಲತಾ ಸಹಾಯ ಮಾಡಿಲ್ಲ; ಹಾಸನದಲ್ಲಿ ಬಿಜೆಪಿಯ ಕೆಲವರ ಸಹಾಯವಿಲ್ಲ :ದೇವೇಗೌಡ-HSRP ನಂಬರ್ ಪ್ಲೇಟ್ ಅಳವಡಿಸಲು ಮೇ 31ರ ವರೆಗೆ ಗಡುವು; ಎಷ್ಟು ಬೀಳಲಿದೆ ದಂಡ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಲ್ಲಿ ಏಪ್ರಿಲ್ 24ರಂದು ಉಚಿತ ಸಾಮೂಹಿಕ ವಿವಾಹ

Twitter
Facebook
LinkedIn
WhatsApp
ಪುಂಜಾಲಕಟ್ಟೆ  ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ನಲ್ಲಿ ಏಪ್ರಿಲ್ 24ರಂದು ಉಚಿತ ಸಾಮೂಹಿಕ ವಿವಾಹ

ಬಂಟ್ವಾಳ: ವಿವಿಧ ಸಾಮಾಜಿಕ, ಆರೋಗ್ಯ, ಸಾಂಸ್ಕೃತಿಕ, ಕ್ರೀಡಾ ಕ್ಷೇತ್ರಗಳಲ್ಲಿ ವಿವಿಧ ಕಾರ್ಯಕ್ರಮಗಳ ಮೂಲಕ ಸಮಾಜ ಸೇವೆಗೈಯುತ್ತಿರುವ ಪುಂಜಾಲಕಟ್ಟೆಯ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನ 38ನೇ ಸಂಭ್ರಮಾಚರಣೆಯ ಪ್ರಯುಕ್ತ 14ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ಎ.24ರಂದು ಇಲ್ಲಿನ ಬಂಗ್ಲೆ ಮೈದಾನದಲ್ಲಿ ಜರಗಲಿದೆ ಎಂದು ಕ್ಲಬ್‌ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ ಅವರು ತಿಳಿಸಿದ್ದಾರೆ.

ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್‌ನಲ್ಲಿ ಶುಕ್ರವಾರ ಕರೆದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ ವಿವರ ನೀಡಿದರು.
ಎ.23 ರಂದು ಸಂಜೆ ಸಾರ್ವಜನಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಲಿದೆ. ಎ.24ರಂದು ಬೆಳಗ್ಗೆ ಶ್ರೀಗೋಪಾಲಕೃಷ್ಣ ದೇವಸ್ಥಾನದಿಂದ ಮದುವೆ ಮಂಟಪದವರೆಗೆ ವಧು-ವರರ ದಿಬ್ಬಣ ಮೆರವಣಿಗೆ ವಿವಿಧ ಸ್ತಬ್ಧ ಚಿತ್ರ ಹಾಗೂ ಜಿಲ್ಲೆಯ ಪ್ರಸಿದ್ಧ ಕಲಾತಂಡಗಳೊಂದಿಗೆ ಕೇರಳ ಚೆಂಡೆಗಳ ಆಕರ್ಷಣೆಯೊಂದಿಗೆ ವೈಭವಪೂರ್ವಕವಾಗಿ ಸಾಗಿ ಬರಲಿದೆ.
ಗುರುವಾಯನಕೆರೆ ಕೃಷ್ಣಭಟ್ ಅವರ ಪೌರೋಹಿತ್ಯದಲ್ಲಿ , ಮಧ್ಯಾಹ್ನ 11ರ ಶುಭ ಮುಹೂರ್ತದಲ್ಲಿ 20 ಜೋಡಿ ವಧು-ವರರಿಗೆ ಸಾಮೂಹಿಕ ವಿವಾಹ ನಡೆಯಲಿದೆ. ಬಳಿಕ ನಡೆಯುವ ಸಭಾ ಕಾರ್ಯಕ್ರಮದಲ್ಲಿ ವಿವಿಧ ಸಾಧಕರಿಗೆ ಸ್ವಸ್ತಿ ಸಿರಿ ರಾಜ್ಯ ಪ್ರಶಸ್ತಿ ಪ್ರದಾನ ಮತ್ತು ಸ್ವಸ್ತಿಕ್ ಸಂಭ್ರಮ ಪುರಸ್ಕಾರ ಮಾಡಲಾಗುವುದು ಏಂದು ಅವರು ತಿಳಿಸಿದರು.
ಶ್ರೀ ಧಾಮ ಮಾಣಿಲದ ಶ್ರೀ ಮೋಹನದಾಸ ಪರಮಹಂಸ ಸ್ವಾಮೀಜಿ ಅವರು ಆಶೀರ್ವಚನ ನೀಡಲಿರುವರು. ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸಭಾ ಕಾರ್ಯಕ್ರಮ ಉದ್ಘಾಟಿಸಲಿರುವರು. ಬಂಟ್ವಾಳ ಶಾಸಕ ರಾಜೇಶ್ ನಾಯಕ್ ಉಳಿಪಾಡಿಗುತ್ತು ಅವರು ಅಧ್ಯಕ್ಷತೆ ವಹಿಸಲಿರುವರು. ಸಂಸದ ನಳಿನ್ ಕುಮಾರ್ ಕಟೀಲು ಅವರು ರಾಜ್ಯ ಪ್ರಶಸ್ತಿ ಪ್ರದಾನ ಮಾಡಲಿರುವರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಸ್ವಸ್ತಿಕ್ ಸಂಭ್ರಮ ಪ್ರಶಸ್ತಿ ಪ್ರದಾನ ಮಾಡುವರು. ಉದ್ಯಮಿ ರವಿಶಂಕರ ಶೆಟ್ಟಿ ಬಡಾಜೆ ಅವರು ಮಂಗಳ ಸೂತ್ರ ವಿತರಿಸಲಿರುವರು.
ವಿಧಾನಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಸಹಿತ ವಿವಿಧ ಕ್ಷೇತ್ರಗಳ ಗಣ್ಯ ವ್ಯಕ್ತಿಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಮಧ್ಯಾಹ್ನ ಸಾರ್ವಜನಿಕರಿಗೆ ವಿವಾಹ ಭೋಜನ ಏರ್ಪಡಿಸಲಾಗಿದೆ. ಸಂಜೆ ಮಂತ್ರ ದೇವತೆ ಕ್ರಿಯೇಶನ್ಸ್ ಅವರ ನಿರ್ಮಾಣದ ಚಂದ್ರನ್ ಕಿರು ಚಿತ್ರ ಬಿಡುಗಡೆ, ಕ್ಲಬ್ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮದ ಪ್ರಯುಕ್ತ ಕುದ್ರೋಳಿ ಗಣೇಶ್ ಅವರಿಂದ ಮಸ್ತ್ ಮ್ಯಾಜಿಕ್ ನಡೆಯಲಿದೆ. ಬಳಿಕ ಕಂಡನಿ ಬುಡೆದಿ ತುಳುನಾಟಕ ನಡೆಯಲಿದೆ ಎಂದರು.
ಕ್ಲಬ್‌ನ ಅಧ್ಯಕ್ಷ ಪ್ರಶಾಂತ್ ಪುಂಜಾಲಕಟ್ಟೆ,ಪದಾಧಿಕಾರಿಗಳಾದ ರಾಜೇಶ್ ಪಿ. ಬಂಗೇರ, ರಫೀಕ್, ಪ್ರಭಾಕರ ಪಿ.ಎಂ., ರತ್ನದೇವ್ ಪುಂಜಾಲಕಟ್ಟೆ, ಕುಶಾಲಪ್ಪ,ಜಯರಾಜ್ ಉಪಸ್ಥಿತರಿದ್ದರು.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.!

ಮಲ್ಪೆ: ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿದ ಮೂವರು ; ಓರ್ವ ಸಾವು.! Twitter Facebook LinkedIn WhatsApp ಉಡುಪಿ: ಈ ಋತುಮಾನದಲ್ಲಿ ಮೊದಲ ಬಾರಿ ಕಡಲು ಅಬ್ಬರಿಸಿದ್ದು, ಮೊದಲ ಕಡಲಿನ ಅಬ್ಬರವೇ ಓರ್ವನನ್ನು ಬಲಿಪಡಿದಿದೆ.

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್

ಮಂಗಳೂರು: ಎಳನೀರು ಕುಡಿದು ವಾಂತಿ ಭೇದಿ ಪ್ರಕರಣ ; ಕಾಲಾರ ವದಂತಿಗಳಿಗೆ ಕಿವಿಗೊಡಬೇಡಿ: ದಿನೇಶ್ ಗುಂಡುರಾವ್ Twitter Facebook LinkedIn WhatsApp ಮಂಗಳೂರು: ಮಂಗಳೂರು ನಗರದ ಸುತ್ತಮುತ್ತಲ ಪ್ರದೇಶಗಳಲ್ಲಿ ಕಾಲರಾ ಭೀತಿ ಎಂದು ತಪ್ಪು

ಅಂಕಣ