ಭಾನುವಾರ, ಮೇ 5, 2024
ಪ್ರಜ್ವಲ್‌ ರೇವಣ್ಣರ ಅಶ್ಲೀಲ ವಿಡಿಯೋವನ್ನು ನಾನು ನೋಡುವ ಧೈರ್ಯ ಮಾಡಿಲ್ಲ :ನಿಖಿಲ್‌ ಕುಮಾರಸ್ವಾಮಿ-Onion price : ಈರುಳ್ಳಿ ದರ ಮತ್ತೆ ಏರಿಕೆಯಾಗುವ ಸಾಧ್ಯತೆ; ಕಾರಣವೇನು?-ಅಶ್ಲೀಲ ವಿಡಿಯೋ ಪ್ರಕರಣ; ದೇವೇಗೌಡರ ನಿವಾಸಿದಿಂದಲೇ ಹೆಚ್​ಡಿ ರೇವಣ್ಣ ಎಸ್ಐಟಿ ವಶಕ್ಕೆ..!-ಮಂಗಳೂರಿನ ಚುನಾವಣೆಯ ಡಲ್ ಪ್ರಚಾರದ ಮೂಲಕ ಹೆಣೆ ದ ಬಿಜೆಪಿ ತಂತ್ರಗಾರಿಕೆಯು ರಾಷ್ಟ್ರೀಯ ಕಾಂಗ್ರೆಸ್ ನ ದಾರಿ ತಪ್ಪಿಸಿತೇ?-ಚುನಾವಣಾ ಪ್ರಚಾರಕ್ಕೆ ಹಣವಿಲ್ಲವೆಂದು ಚುನಾವಣೆಗೆ ಸ್ಪರ್ಧಿಸಲು ನಿರಾಕರಿಸಿ ಕಾಂಗ್ರೆಸ್​​ ಅಭ್ಯರ್ಥಿ..!-ಕೋವಿಶೀಲ್ಡ್​ ಪಡೆದವರು ಕೋಲ್ಡ್, ಐಸ್​ ಕ್ರೀಮ್ ಸೇವಿಸಬಾರದು ಎನ್ನುವುದು ಸುಳ್ಳು ಸುದ್ದಿ ಎಂದ ಆರೋಗ್ಯ ಇಲಾಖೆ.!-17 ಭಾರತೀಯರು ಸೇರಿದಂತೆ ಒಟ್ಟು 25 ಮಂದಿ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಬಿಡುಗಡೆ ಮಾಡಿದ ಇರಾನ್!-ಕಾರ್ಕಳ : ನಾಲ್ಕು ತಿಂಗಳೊಳಗೆ ಪರುಶುರಾಮ ಥೀಂ ಪಾರ್ಕ್ ಕಾಮಗಾರಿ ಮುಗಿಸುವಂತೆ ಹೈಕೋರ್ಟ್ ಆದೇಶ..!-ಉಪ್ಪಿನಂಗಡಿ: ಹೃದಯಾಘಾತದಿಂದ ಯುವಕ ಸಾವು.!-ಸುಬ್ರಮಣ್ಯ: ಹತ್ತು ದಿನದ ಹಿಂದೆ ಅಷ್ಟೇ ಮದ್ವೆ ಆಗಿದ್ದ ನವ ವಿವಾಹಿತ ಸಿಡಿಲಿಗೆ ಬಲಿ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುಟ್ಟ ಹುಡುಗಿಯ ಬ್ಯಾಟಿಂಗ್ ಕೌಶಲ್ಯ; ಸಚಿನ್ ತೆಂಡೂಲ್ಕರ್, ಜಯ್ ಶಾ ಫಿದಾ! ವಿಡಿಯೋ ವೈರಲ್

Twitter
Facebook
LinkedIn
WhatsApp
ಪುಟ್ಟ ಹುಡುಗಿಯ ಬ್ಯಾಟಿಂಗ್ ಕೌಶಲ್ಯ; ಸಚಿನ್ ತೆಂಡೂಲ್ಕರ್, ಜಯ್ ಶಾ ಫಿದಾ!

ಜೈಪುರ: ರಾಜಸ್ಥಾನದ ರೈತರೊಬ್ಬರ ಮಗಳು ಅದ್ಭುತವಾಗಿ ಬ್ಯಾಟಿಂಗ್ ಮಾಡುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡೂಲ್ಕರ್ ಅವರ ಗಮನ ಸೆಳೆದಿದ್ದು, ಬಾಲಕಿ ಭರ್ಜರಿ ಬ್ಯಾಟಿಂಗ್ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಮಹಿಳಾ ಪ್ರೀಮಿಯರ್ ಲೀಗ್ ಹರಾಜು ನಡೆದ ದಿನದಂದೇ ರಾಜಸ್ಥಾನದ ಬಾರ್ಮರ್ ಜಿಲ್ಲೆಯ ಕನಾಸರ್ ಗ್ರಾಮದ ಬಡ ರೈತನ ಮಗಳು, 14 ವರ್ಷದ ಮುಮಲ್ ಮೆಹರ್ ಅವರು ಹುಡುಗರೊಂದಿಗೆ ಕ್ರಿಕೆಟ್ ಆಡುತ್ತಿರುವ ವೇಳೆ ಬೌಂಡರಿ ಮತ್ತು ಸಿಕ್ಸರ್‌ಗಳನ್ನು ಬಾರಿಸುತ್ತಿರುವ ವಿಡಿಯೋ ವೈರಲ್ ಆಗಿದೆ.

ಈ ವೀಡಿಯೋ ಸಚಿನ್ ತೆಂಡೂಲ್ಕರ್ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಅವರ ಗಮನ ಸೆಳೆದಿದ್ದು, ಅವರು ವೀಡಿಯೋವನ್ನು ಟ್ವಿಟರ್ ಮತ್ತು ಇನ್ಸ್ಟಾಗ್ರಾಮ್ನಲ್ಲಿ ಪೋಸ್ಟ್ ಮಾಡಿದ್ದಾರೆ.  “”ಹರಾಜು ನಿನ್ನೆಯಷ್ಟೇ ನಡೆಯಿತು ಮತ್ತು ಇಂದು ಪಂದ್ಯವೂ ಪ್ರಾರಂಭವಾಗಿದೆ? ಏನು ವಿಷಯ, ನಿಜವಾಗಿಯೂ ನಿಮ್ಮ ಬ್ಯಾಟಿಂಗ್ ಅನ್ನು ಆನಂದಿಸಿದೆ” ಎಂದು ಸಚಿನ್ ತೆಂಡೂಲ್ಕರ್ ಬರೆದಿದ್ದಾರೆ.

ಇನ್ನು “ಚಿಕ್ಕ ಹುಡುಗಿಯ ಕ್ರಿಕೆಟ್ ಕೌಶಲ್ಯ ಮತ್ತು ಆಟದ ಮೇಲಿನ ಉತ್ಸಾಹ ನೋಡುಗರನ್ನು ಆಶ್ಚರ್ಯ ಮೂಡಿಸಿದೆ. ಮಹಿಳಾ ಕ್ರಿಕೆಟ್‌ನ ಭವಿಷ್ಯ ಉತ್ತಮ ಕೈಯಲ್ಲಿದೆ ಎಂದು ನೋಡಲು ನನಗೆ ಸಂತೋಷವಾಗಿದೆ. ನಮ್ಮ ಯುವ ಅಥ್ಲೀಟ್‌ಗಳನ್ನು ಸಬಲೀಕರಣಗೊಳಿಸಲು ನಾವು ಒಟ್ಟಾಗಿ ಕೆಲಸ ಮಾಡೋಣ, ಇದರಿಂದ ಅವರ ಭವಿಷ್ಯದ ಬದಲಾಯಿಸಬಹುದು” ಎಂದು ಜಯ್ ಶಾ ಟ್ವೀಟ್ ಮಾಡಿದ್ದಾರೆ.

ರಾಜಸ್ಥಾನ ಬಿಜೆಪಿ ಅಧ್ಯಕ್ಷ ಪಿಎಲ್ ಪೂನಿಯಾ ಅವರು ಸಹ ಬಾಲಕಿಯ ಬ್ಯಾಟಿಂಗ್ ಅನ್ನು ಶ್ಲಾಘಿಸಿದ್ದು, ಬಾಲಕಿ ಸಂಪೂರ್ಣ ಕ್ರಿಕೆಟ್ ನಲ್ಲಿ ತೊಡಗಿಕೊಳ್ಳಲು ಕ್ರಿಕೆಟ್ ಕಿಟ್ ಕಾಣಿಕೆಯಾಗಿ ನೀಡಿದ್ದಾರೆ. ಮರುಭೂಮಿ ಜಿಲ್ಲೆಯ ಮರಳಿನ ದಿಬ್ಬಗಳಲ್ಲಿ ಬೂಟುಗಳಿಲ್ಲದೆ ಕ್ರಿಕೆಟ್ ಆಡುತ್ತಿದ್ದ ಬಾಲಕಿಗೆ ಇದು ಗಮನಾರ್ಹ ತಿರುವು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ