ಭಾನುವಾರ, ಏಪ್ರಿಲ್ 28, 2024
ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!-ಬಂಟ್ವಾಳ: ಅನಾರೋಗ್ಯದ ನಡುವೆಯೂ ಮತದಾನ ಮುಗಿಸಿ ಇಹಲೋಕ ತ್ಯಜಿಸಿದ ಮಾಜಿ ಸೈನಿಕ..!-Gold Rate: 10 ಗ್ರಾಂ ಆಭರಣದ ಬೆಲೆ ಇಂದು ಹೇಗಿದೆ-ಚುನಾವಣೆ ಭಾಷಣ ಮಾಡುವಾಗ ವೇದಿಕೆಯಲ್ಲೇ ಕುಸಿದು ಬಿದ್ದ ಕೇಂದ್ರ ಸಚಿವ ನಿತಿನ್ ಗಡ್ಕರಿ.!-EVM: ಇವಿಎಂ ಕುರಿತು ಚುನಾವಣಾ ಆಯೋಗದಿಂದ ಸ್ಪಷ್ಟನೆ ಕೇಳಿದ ಸುಪ್ರೀಂ ಕೋರ್ಟ್.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರಿಗೆ ಶಾ ಭೇಟಿ - ಪರ್ಯಾಯ ಮಾರ್ಗ ವ್ಯವಸ್ಥೆ

Twitter
Facebook
LinkedIn
WhatsApp
ಪುತ್ತೂರಿಗೆ ಶಾ ಭೇಟಿ - ಪರ್ಯಾಯ ಮಾರ್ಗ ವ್ಯವಸ್ಥೆ

ಪುತ್ತೂರು, ಫೆ 10 : ನಾಳೆ ಪುತ್ತೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ ಹಿನ್ನೆಲೆ ವಾಹನ ಸವಾರರಿಗಾಗಿ ಸಂಚಾರ ಮಾರ್ಗವನ್ನು ಬದಲಾವಣೆ ಮಾಡಲಾಗಿದೆ.

ಪುತ್ತೂರು ನಗರಕ್ಕೆ ಆಗಮಿಸುವ ವಾಹನಗಳಿಗಾಗಿ ಪುತ್ತೂರು ಡಿವೈಎಸ್ಪಿಯವರ ಕೋರಿಕೆ ಮೇರೆಗೆ ಸಹಾಯಕ ಆಯುಕ್ತರು ಪರ್ಯಾಯ ಮಾರ್ಗವನ್ನು ಒದಗಿಸಿದ್ದಾರೆ. ಈಗಾಗಲೇ ನಗರದೆಲ್ಲೆಡೆ ಪೊಲೀಸರಿಂದ ಕಣ್ಗಾವಲು ಹೆಚ್ಚಿಸಿದ್ದು ಬಿಗಿ ಪೊಲೀಸ್‌ ಬಂದೋಬಸ್ತ್‌ ಹೆಚ್ಚಿಸಲಾಗಿದೆ. ಹೀಗಾಗಿ ವಾಹನ ಸಂಚಾರ ಮಾರ್ಗದಲ್ಲಿ ವ್ಯತ್ಯಯವಾಗಿದ್ದು, ಪರ್ಯಾಯ ಮಾರ್ಗವನ್ನು ಬಳಸಬೇಕಾಗಿದೆ.

ಪರ್ಯಾಯ ಮಾರ್ಗಗಳು :

ಪುತ್ತೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ಲಿನೆಟ್‌ ಜಂಕ್ಷನ್‌ನಿಂದ – ಮುಕ್ರಂಪಾಡಿಯವರೆಗೂ ಸದ್ರಿ ರಸ್ತೆಯಲ್ಲಿ ಫೆ. 11 ಮಧ್ಯಾಹ್ನ 2.00 ಗಂಟೆಯಿಂದ ಸಂಜೆ 5.30 ಗಂಟೆಯವರೆಗೂ ಯಾವುದೇ ವಾಹನ ಸಂಚಾರಕ್ಕೆ ಅವಕಾಶವಿಲ್ಲ, ಸುಗಮ ಸಂಚಾರದ ದೃಷ್ಟಿಯಿಂದ ಆ ಸಮಯದಲ್ಲಿ ಮಂಗಳೂರು ಕಡೆಯಿಂದ – ಸುಳ್ಯ ಮತ್ತು ಮಡಿಕೇರಿ ಕಡೆ ಹೋಗುವ ವಾಹನಗಳು ಲಿನೆಟ್ ಜಂಕ್ಷನ್ – ಬೊಳುವಾರು ಜಂಕ್ಷನ್ – ದರ್ಬೆ – ಪುರುಷರಕಟ್ಟೆ – ಪಂಜಳ ಪರ್ಪುಂಜ ಮಾರ್ಗವನ್ನು ಬಳಸುವುದು.

ಮಡಿಕೇರಿ – ಸುಳ್ಯ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ವಾಹನಗಳು ಪರ್ಪುಂಜ – ಪಂಜಳ – ಪುರುಷರಕಟ್ಟೆ – ದರ್ಬೆ – ಬೊಳುವಾರು ಜಂಕ್ಷನ್ – ಲಿನೆಟ್ ಜಂಕ್ಷನ್ ಮಾರ್ಗವನ್ನು ಬಳಸುವುದು .ಒಟ್ಟಾರೆಯಾಗಿ ಮುಂದಿನ ಚುನಾವಣೆಗಾಗಿ ಬಿಜೆಪಿ ಪುತ್ತೂರು ಜಿಲ್ಲೆಯಾದ್ಯಂತ ಅಮಿತ್‌ ಶಾ ರಣತಂತ್ರ ರೂಪಿಸಲು ಭರ್ಜರಿ ಸಿದ್ದತೆ ನಡೆಸಲಾಗುತ್ತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ