ಗುರುವಾರ, ಮೇ 16, 2024
ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!-ಇಂದು ಬೆಂಗಳೂರಿಗೆ ಬರಬೇಕಿದ್ದ ಪ್ರಜ್ವಲ್ ರೇವಣ್ಣ ಪ್ಲೈಟ್ ಹತ್ತದೆ ಮತ್ತೆ ವಿದೇಶದಲ್ಲಿ; ಎಸ್ಐಟಿ ಮುಂದಿನ ನಡೆ ಏನು.?-ನಟಿ ವೈಷ್ಣವಿ ಗೌಡಗೆ ಟ್ರಾಫಿಕ್ ಪೊಲೀಸರಿಂದ ದಂಡ; ಮಂಗಳೂರಿನ ಜಯಪ್ರಕಾಶ್‌ ಎಕ್ಕೂರುರವರಿಂದ ದೂರು.!-8 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಖಾಸಗಿ ಶಾಲೆಯ ಮಾಲೀಕನ ಬಂಧನ!-Breaking NEWS: ಲಾರಿಗೆ ಡಿಕ್ಕಿ ಹೊಡೆದು ಬಸ್‌ಗೆ ಬೆಂಕಿ; 6 ಮಂದಿ ಸಾವು-Rakhi Sawant: ಹೃದಯಾ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾದ ರಾಖಿ ಸಾವಂತ್; ಫೋಟೋ ವೈರಲ್!-Gold Rate: ನಿಮ್ಮ ನಗರದಲ್ಲಿ ಆಭರಣದ ಬೆಲೆ ಹೇಗಿದೆ.!-ಕುರ್ಕುರೆ ತರಲಿಲ್ಲ ಎಂದು ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ..!-ಹೆಚ್ ಡಿ ರೇವಣ್ಣಗೆ ಜಾಮೀನು ಸಿಕ್ಕಿದಕ್ಕೆ ನಾನಂತೂ ಖುಷಿ ಪಡಲ್ಲ, ಸಂಭ್ರಮಿಸುವ ಸಮಯವೂ ಇದಲ್ಲ; ಹೆಚ್ ಡಿ ಕುಮಾರಸ್ವಾಮಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!

Twitter
Facebook
LinkedIn
WhatsApp
ಪುತ್ತೂರು: ತಾಳಿ ಕಟ್ಟುವ ವೇಳೆ ಮದುವೆ ನಿರಾಕರಿಸಿದ ವಧು.!

ಪು್ತ್ತೂರು : ವಿವಾಹ ಸಮಾರಂಭದಲ್ಲಿ ಕೊನೇ ಕ್ಷಣದಲ್ಲಿ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿ ಮದುವೆ ಮುರಿದು ಬಿದ್ದ ಘಟನೆ ದಕ್ಷಿಣ ಕನ್ನಡದ ಕಡಬ ತಾಲೂಕಿನ ಕೊಣಾಲು ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

ಕೊಣಾಲು ಗ್ರಾಮದ ಉಮೇಶ ಅವರ ವಿವಾಹ ಬಂಟ್ವಾಳ ತಾಲೂಕು ಕುಳದ ಸರಸ್ವತಿ ಅವರೊಂದಿಗೆ ನಿಗದಿಯಾಗಿತ್ತು. ಬೆಳಗ್ಗೆ 11.35ರ ಮುಹೂರ್ತದಲ್ಲಿ ಕಾಂಚನ ಪೆರ್ಲದ ಶ್ರೀ ಷಣ್ಮುಖ ದೇವಸ್ಥಾನದಲ್ಲಿ ವಿವಾಹ ನಿಗದಿಯಾಗಿದ್ದು. ವರ ಹಾಗೂ ವಧುವಿನ ಕಡೆಯವರು ದೇವಸ್ಥಾನಕ್ಕೆ ಮದುವೆ ದಿಬ್ಬಣದಲ್ಲಿ ಬಂದಿದ್ದರು. ಮದುವೆ ವಿಧಿಗಳು ನಡೆದು ವಧು – ವರ ಉಮೇಶ ಹೂಮಾಲೆ ಹಾಕಿಸಿಕೊಂಡಿದ್ದರು. ಇನ್ನು ವರ ಉಮೇಶ ತಾಳಿ ಕಟ್ಟಲು ಮುಂದಾಗುತ್ತಿದ್ದಂತೆ ವಧು ಸರಸ್ವತಿ ಈ ಮದುವೆ ನನಗೆ ಇಷ್ಟ ಇಲ್ಲ ಎಂದು ಹೇಳಿ ತಾಳಿ ಕಟ್ಟಲು ಅವಕಾಶ ನೀಡಲಿಲ್ಲ. ಇದರಿಂದ ಎರಡೂ ಕಡೆಯವರೂ ವಿಚಲಿತಗೊಂಡು ಈ ವೇಳೆ ಹಿರಿಯರು ವಧುವಿನ ಮನವೊಲಿಕೆಗೆ ಮುಂದಾದರೂ ವಧು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿರುವುದರಿಂದ ಬಳಿಕ ಎರಡೂ ಕಡೆಯವರೂ ಉಪ್ಪಿನಂಗಡಿ ಪೊಲೀಸ್‌ ಠಾಣೆಗೆ ತೆರಳಿದರು.

ಪೊಲೀಸ್‌ ಠಾಣೆಯಲ್ಲಿ ನಡೆದ ಮಾತುಕತೆ ವೇಳೆ ವಧು ಸರಸ್ವತಿ ಆಗಿರುವ ಅಚಾತುರ್ಯಕ್ಕೆ ಪಶ್ಚಾತ್ತಾಪ ಪಟ್ಟು ಉಮೇಶ ಅವರನ್ನು ಮದುವೆಯಾಗಲು ಒಪ್ಪಿಗೆ ಸೂಚಿಸಿದರು. ಆದರೆ ಆಗ ವರ ಉಮೇಶ್‌ ಅವರು ಮದುವೆಯಾಗಲು ನಿರಾಕರಿಸಿದರು. ಇದರಿಂದಾಗಿ ಎರಡೂ ಕಡೆಯವರು ಠಾಣೆಯಲ್ಲಿ ಮುಚ್ಚಳಿಕೆ ಬರೆಯಿಸಿಕೊಂಡು ತಮ್ಮ ತಮ್ಮ ಮನೆಗಳಿಗೆ ತೆರಳಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ