ಪುತ್ತೂರು ಬಸ್ ನಿಲ್ದಾಣಕ್ಕೆ ಮಾ.26 ರಂದು ಕೋಟಿ-ಚೆನ್ನಯ್ಯ ನಾಮಕರಣ
ಮಂಗಳೂರು, ಮಾ 25 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ಬಸ್ ನಿಲ್ದಾಣಕ್ಕೆ ಕೋಟಿ- ಚೆನ್ನಯ್ಯ ಎಂಬ ನಾಮಕರಣ ಸಮಾರಂಭವು ಮಾ.26ರ ಭಾನುವಾರ ಬೆಳಗ್ಗೆ 10 ಗಂಟೆಗೆ ಪುತ್ತೂರಿನ ಬಸ್ ನಿಲ್ದಾಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಸಾರಿಗೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ಬಿ ಶ್ರೀರಾಮುಲು ನಾಮಫಲಕ ಉದ್ಘಾಟಿಸುವರು.ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ವಿ. ಸುನಿಲ್ ಕುಮಾರ್ ಜ್ಯೋತಿ ಬೆಳಗಿಸುವರು.
ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆ ಸಚಿವರಾದ ಎಸ್. ಅಂಗಾರ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ್ ಪೂಜಾರಿ ಹಾಗೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನಿಗಮದ ಅಧ್ಯಕ್ಷ ಎಂ. ಚಂದ್ರಪ್ಪ ಗೌರವ ಉಪಸ್ಥಿತಿ ವಹಿಸುವರು.
ಶಾಸಕರಾದ ಸಂಜೀವ ಮಠಂದೂರು ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯಸಭೆ ಸದಸ್ಯರಾದ ಡಿ. ವೀರೇಂದ್ರ ಹೆಗ್ಗಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ತಿಮ್ಮಪ್ಪ ಶೆಟ್ಟಿ, ಶಾಸಕರಾದ ಯು.ಟಿ. ಖಾದರ್ ಡಾ.ಭರತ್ ಶೆಟ್ಟಿ ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್ ಯು, ಡಿ. ವೇದವ್ಯಾಸ ಕಾಮತ್, ಉಮಾನಾಥ ಎ. ಕೋಟ್ಯಾನ್, ಪರಿಷತ್ ಶಾಸಕರಾದ ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ, ಎಸ್.ಎಲ್. ಭೋಜೇಗೌಡ, ಕೆ. ಪ್ರತಾಪ್ ಸಿಂಹ ನಾಯಕ್, ಮಂಜುನಾಥ ಭಂಡಾರಿ, ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಹರಿಕೃಷ್ಣ ಬಂಟ್ವಾಳ, ಮೀನುಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎ.ವಿ. ತೀರ್ಥರಾಮ, ಪುತ್ತೂರು ನಗರ ಸಭೆ ಅಧ್ಯಕ್ಷರಾದ ಜೀವಂಧರ್ ಜೈನ್, ಪುತ್ತೂರು ನಗರಾಭಿವೃದ್ಧಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ಭಾಮಿ ಅಶೋಕ್ ಶೆಣೈ ಭಾಗವಹಿಸುವರು.