ಪುತ್ತೂರು: ಸೈಬರ್ ವಂಚಕರ ಬಲೆಗೆ ಬಿದ್ದ ವೈದ್ಯ; ಬರೋಬ್ಬರಿ 16 ಲಕ್ಷಕ್ಕೂ ಅಧಿಕ ಹಣ ಯಾಮಾರಿಸಿದ ಖದೀಮರು..!
ಇಲ್ಲಿನ 69 ವರ್ಷದ ಖ್ಯಾತ ವೈದ್ಯರೊಬ್ಬರು ಸೈಬರ್ ವಂಚಕರ ಬಲೆಗೆ ಬಿದ್ದಿದ್ದು, ಬರೋಬ್ಬರಿ 16 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡಿದ್ದಾರೆ. ಪುತ್ತೂರಿನ ಬೊಳ್ವಾರು ನಿವಾಸಿ ಡಾ.ಚಿದಂಬರ ಅಡಿಗ ವಂಚನೆಗೊಳದವರು.ಅವರು ನೀಡಿದ ದೂರಿನಂತೆ ಪುತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಡಾ ಅಡಿಗ ರವರಿಗೆ ದೂರವಾಣಿ ಮೂಲಕ ಮಾ.28 ರಂದು ಬೆಳಿಗ್ಗೆ, ಅಪರಿಚಿತ ವ್ಯಕ್ತಿಯಿಂದ ಫೋನ್ ಕರೆ ಬಂದಿದ್ದು, ಕರೆ ಸ್ವೀಕರಿಸಿ ಮಾತನಾಡಿದಾಗ, ಕರೆ ಮಾಡಿದ ವ್ಯಕ್ತಿಯು ನಾನು ದೆಹಲಿಯಿಂದ ಪೊಲೀಸ್ ಮಾತನಾಡುತ್ತಿರುವುದಾಗಿ ತಿಳಿಸಿ, ನಿಮ್ಮ ಮೇಲೆ ದೆಹಲಿಯಲ್ಲಿ ಮಾದಕ ವಸ್ತುವಿಗೆ ಸಂಬಂದಿಸಿದಂತೆ ಹಾಗೂ ಅಕ್ರಮ ಹಣ ಹೊಂದಿರುವ ಬಗ್ಗೆ ಮತ್ತು ಮಾನವ ಕಳ್ಳ ಸಾಗಾಣಿಕೆ ಪ್ರಕರಣ ದಾಖಲಾಗಿದೆ. ನಿಮ್ಮನ್ನು ಅರೆಸ್ಟ್ ಮಾಡಲು ಕೋರ್ಟ್ ನಿಂದ ವಾರಂಟ್ ಬಂದಿದೆ ಎಂದು ಹೇಳಿ ನೀವು ದೆಹಲಿಯ ಸಿಬಿಐ ಕೋರ್ಟ್ ಗೆ ಹಾಜರಾಗಬೇಕು. ನಿಮಗೆ ಇಲ್ಲಿಗೆ ಬರಲು ಆಗದಿದ್ದರೆ ಈಗ ಆನ್ಲೈನ್ ಮೂಲಕ ಕೋರ್ಟ್ ನ ಕೇಸ್ ನಡೆಸುತ್ತೇವೆ. ನೀವು ನಿಮ್ಮ ಬ್ಯಾಂಕ್ ಅಕೌಂಟ್ ನಲ್ಲಿದ್ದ ಹಣವನ್ನು ನಾನು ಹೇಳುವ ಅಕೌಂಟ್ ನಂಬ್ರಕ್ಕೆ ವರ್ಗಾವಣೆ ಮಾಡಬೇಕು ನಿಮ್ಮ ಕೋರ್ಟ್ ಕೇಸ್ ಮುಗಿದ ಮೇಲೆ ನಿಮಗೆ ನಿಮ್ಮ ಹಣ ವಾಪಾಸು ಸಿಗುತ್ತದೆ ಇಲ್ಲದಿದ್ದರೆ ನಿಮ್ಮ ಮನೆಗೆ ಬಂದು ನಿಮ್ಮನ್ನು ಅರೆಸ್ಟ್ ಮಾಡುತ್ತೇವೆ ಎಂಬುದಾಗಿ ತಿಳಿಸಿದ್ದಾರೆ.
ದೂರುದಾರರ ವಿರುದ್ದ ದೆಹಲಿಯಲ್ಲಿ ಪ್ರಕರಣ ದಾಖಲಾಗಿರುವಂತೆ ಬಿಂಬಿಸುವ ಕೆಲವೊಂದು ದಾಖಲೆಗಳನ್ನು ಅಡಿಗ ರವರ ಮೊಬೈಲ್ ಫೋನ್ ನ ವಾಟ್ಸ್ ಆಪ್ ಗೆ ಕಳುಹಿಸಿರುವುದಾಗಿ ತಿಳಿಸಿದ್ದಾರೆ. ಅಪರಿಚಿತನ ಮಾತನ್ನು ನಂಬಿ, ಗಾಬರಿಗೊಂಡು,ಅಡಿಗರವರು ಬ್ಯಾಂಕ್ ಖಾತೆಯಿಂದ, RTGS ಮೂಲಕ ಸದರಿ ಅಪರಿಚಿತ ತಿಳಿಸಿದ ಬ್ಯಾಂಕ್ ಖಾತೆಗೆ ರೂ 16,50,000/- ಹಣವನ್ನು ವರ್ಗಾವಣೆ ಮಾಡಿರುತ್ತಾರೆ . ಸ್ವಲ್ಪ ಹೊತ್ತಿನ ಬಳಿಕ ಸದ್ರಿ ಅದೇ ವ್ಯಕ್ತಿಯು ಪಿರ್ಯಾದಿದಾರರಿಗೆ ಕರೆಮಾಡಿ ಹೆಚ್ಚಿನ ಹಣಕ್ಕೆ ಬೇಡಿಕೆ ಇಟ್ಟಾಗ, ಪಿರ್ಯಾದಿದಾರವರಿಗೆ ಅನುಮಾನ ಬಂದು ದೂರವಾಣಿ ಕರೆ ಕಡಿತಗೊಳಿಸಿದ್ದು, ತನ್ನ ಗೆಳೆಯರೊಂದಿಗೆ ಈ ಬಗ್ಗೆ ತಿಳಿಸಿದಾಗ ಸದರಿ ಆನ್ ಲೈನ್ ಮೋಸದ ಕೃತ್ಯದ ಬಗ್ಗೆ ತಿಳಿದುಬಂದಿರುತ್ತದೆ.
ಈ ಬಗ್ಗೆ ದೂರುದಾರರು ನೀಡಿದ ದೂರಿನ ಮೇರೆಗೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ, ಅ ಕ್ರ ನಂ :32-2024 ಕಲಂ:406,419, 420 ಐ ಪಿ ಸಿ ಮತ್ತು 66 ( C) ,66 ( D ) I T ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ಫೋಟೋಗ್ರಾಫರ್ ಸ್ಥಳದಲ್ಲೇ ಸಾವು.!
ಚಿತ್ರದುರ್ಗ: ಮದುವೆ ಸಮಾರಂಭಕ್ಕೆ ಫೋಟೋಗ್ರಫಿ (Photography) ಮಾಡಲು ತೆರಳಿದ್ದ ಫೋಟೋಗ್ರಾಫರ್‌ರೊಬ್ಬರು ಮರಳಿ ಬರುವಾಗ ನಡೆದ ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಚಿಕ್ಕಮ್ಮನಹಳ್ಳಿ ಸಮೀಪ ರಾಷ್ಟ್ರೀಯ ಹೆದ್ದಾರಿ 150 ಎ ರ ಬಳಿ (Road Accident) ನಡೆದಿದೆ.
ಚಳ್ಳಕೆರೆ ನಗರದ ಚಿತ್ರಯ್ಯನಹಟ್ಟಿಯ ಫೋಟೋಗ್ರಾಫರ್ ಅಭಿಷೇಕ್ (30) ಮೃತಪಟ್ಟ ಯುವಕ. ಈತ ಮೊಳಕಾಲ್ಮೂರು ತಾಲೂಕಿನ ರಾಯದುರ್ಗದಲ್ಲಿ ನಡೆದ ವಿವಾಹ ಕಾರ್ಯಕ್ರಮವೊಂದಕ್ಕೆ ಫೋಟೋ ತೆಗೆಯಲು ಹೋಗಿ ಮರಳಿ ನಗರಕ್ಕೆ ಕಾರಿನಲ್ಲಿ ವಾಪಸ್ ಬರುವಾಗ ಗುರುವಾರ ತಡರಾತ್ರಿ 12 ಗಂಟೆ ಸುಮಾರಿಗೆ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲಿಯೇ ಸಾವನಪ್ಪಿದ್ದಾನೆ ಎಂದು ತಿಳಿದುಬಂದಿದೆ. ತಳಕು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.