ಭಾನುವಾರ, ಜೂನ್ 16, 2024
ಕುವೈತ್ ಅಗ್ನಿ ದುರಂತ; 45 ಭಾರತೀಯರ ಪಾರ್ಥಿವ ಶರೀರ ಇಂದು ಬೆಳಗ್ಗೆ ಕೊಚ್ಚಿಗೆ ಆಗಮನ..!-ಜುಲೈ 22 ರಿಂದ ಆಗಸ್ಟ್ 9ರವರೆಗೆ ಮುಂಗಾರು ಸಂಸತ್ ಅಧಿವೇಶನ..!-ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮ ಆರೋಪ; ಕೇಂದ್ರ, ಎನ್‌ಟಿಎಗೆ ಸುಪ್ರೀಂ ನೋಟಿಸ್..!-ಪೋಕ್ಸೊ ಪ್ರಕರಣ ರದ್ದು ಕೋರಿ ಸಲ್ಲಿಸಿದ್ದ ಅರ್ಜಿ ಇಂದು ವಿಚಾರಣೆ; ಜಾಮೀನು ಸಿಗದಿದ್ದರೆ ಯಡಿಯೂರಪ್ಪ ಬಂಧನ.!-ಏರಿಕೆಯಾಗುತ್ತಿರುವ ಡೆಂಗ್ಯೂ ಪ್ರಕರಣ. ಇಂದು ಸಾಗರದಲ್ಲಿ ಒಬ್ಬ ವ್ಯಕ್ತಿ ಬಲಿ!-ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!-HSRP ನಂಬರ್ ಪ್ಲೇಟ್ ಅಳವಡಿಸುವ ಬಗ್ಗೆ ಮಹತ್ವದ ಅಪ್ಡೇಟ್; ಇಲ್ಲಿದೆ ಮಾಹಿತಿ-ಇಂದು ಯುಎಸ್ಎ ಮತ್ತು ಭಾರತ ತಂಡ ಮುಖಾಮುಖಿ; ಯಾರಿಗೆ ಗೆಲುವು..!-ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಶಿಕ್ಷಕ ರಕ್ಷಕ ಸಂಘದ ವಾರ್ಷಿಕ ಮಹಾಸಭೆ.!-ಉಳ್ಳಾಲ ಬೀಚ್‍ಗೆ ಪ್ರವಾಸಕ್ಕೆ ಬಂದಿದ್ದ ಮಹಿಳೆ ಸಮುದ್ರ ಪಾಲು; ಮೂವರ ರಕ್ಷಣೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೆನ್ ಡ್ರೈವ್ ಪ್ರಕರಣದ ಕುರಿತು ಹೆಚ್ ಡಿ ರೇವಣ್ಣ ಮೊದಲ ಪ್ರತಿಕ್ರಿಯೆ ಏನು?

Twitter
Facebook
LinkedIn
WhatsApp
ಪೆನ್ ಡ್ರೈವ್ ಪ್ರಕರಣದ ಕುರಿತು ಹೆಚ್ ಡಿ ರೇವಣ್ಣ ಮೊದಲ ಪ್ರತಿಕ್ರಿಯೆ ಏನು?

ಮಾಜಿ ಸಚಿವ ಹೆಚ್​ಡಿ ರೇವಣ್ಣ (HD Revanna) ಪುತ್ರ, ಸಂಸದ ಪ್ರಜ್ವಲ್​ ರೇವಣ್ಣ  ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳ ಪೆನ್​ಡ್ರೈವ್​ (Pen Drive) ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿ ಮಾಡಿದೆ. ತಮ್ಮ ಮಗನ ವಿರುದ್ಧ ಕೇಳಿಬಂದಿರುವ ಆರೋಪಗಳ ಬಗ್ಗೆ ತಂದೆ, ಜೆಡಿಎಸ್​ ಶಾಸಕ ಹೆಚ್​ಡಿ ರೇವಣ್ಣ ಮೊದಲ ಬಾರಿಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ್ದಾರೆ. ಪ್ರಜ್ವಲ್‌ ರೇವಣ್ಣ ಅವರ ವಿಚಾರ ಏನು ಗೊತ್ತಿಲ್ಲ. ನಾನು ಯಾರ ಬಗ್ಗೆ ಮಾತನಾಡಲ್ಲ ನನಗೇನೂ ಗೊತ್ತಿಲ್ಲ. ನಾನು ಯಾವುದೇ ಪ್ರತಿಕ್ರಿಯೆ ಕೊಡಲ್ಲ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣ ವಿದೇಶದಿಂದ ಬರುವ ವಿಚಾರವಾಗಿ ಹೊಳೆನರಸೀಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ ಅವರು, ನಾನು ಯಾರ ಬಗ್ಗೆಯೂ ಮಾತನಾಡಲ್ಲ. ಅದರ ಬಗ್ಗೆ ನನಗೇನು ಗೊತ್ತಿಲ್ಲ. ಪ್ರಜ್ವಲ್‌ ರೇವಣ್ಣ ವಿಚಾರ ಏನು ಗೊತ್ತಿಲ್ಲ ಎಂದರು.

ಹಾಸನ ಜಿಲ್ಲೆಯ ನಮಗೆ ಶಕ್ತಿ ಕೊಟ್ಟಿದ್ದಾರೆ. 25 ವರ್ಷ ನಾನು ಶಾಸಕನಾಗಿ ಇಲ್ಲಿ ಕೆಲಸ ಮಾಡಿದ್ದೇನೆ. ಯಾರೂ ಧೃತಿಗೆಡುವುದು ಬೇಡ. ಇಂದು (ಮೇ 22) ಜಿಲ್ಲೆಯ ನಾಲ್ಕು ಶಾಸಕರ ಜೊತೆ ಜೊತೆ ಚರ್ಚಿಸುತ್ತೇನೆ. ಪ್ರಕರಣ ಕೋರ್ಟ್​​ನಲ್ಲಿರುವುದರಿಂದ ಏನೂ ಹೇಳಲ್ಲ. ನನಗೆ ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನಾನು ಅದರ ಬಗ್ಗೆ ಏನೂ ಮಾತನಾಡಲ್ಲ ಎಂದು ಹೇಳಿದರು. ಈ ವೇಳೆ ಬೆಂಬಲಿಗರು ಜೈಕಾರ ಹಾಕುತ್ತಿದ್ದಂತೆ ಹೆಚ್​​ಡಿ ರೇವಣ್ಣ ಅವರು ಭಾವುಕರಾದರು.

ಮಾಜಿ ಸಚಿವ ಹೆಚ್​ಡಿ ರೇವಣ್ಣ ಅವರು ಅಪಹರಣ ಪ್ರಕರಣದಲ್ಲಿ ಷರತ್ತು ಬದ್ಧ ಜಾಮೀನು ಪಡೆದು ಜೈಲಿನಿಂದ ಬಿಡುಗಡೆಯಾದ ದಿನದಿಂದ ಇಂದಿನವರೆಗೂ ಹಾಸನ, ಬೆಂಗಳೂರು ಮತ್ತು ಮೈಸೂರು ಜಿಲ್ಲೆಗಳ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುತ್ತಿದ್ದಾರೆ. ಇಂದು (ಮೇ 22) ಸಹ ಹೊಳೆನರಸೀಪುರದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದರು. ಶ್ರೀ ಆಂಜನೇಯಸ್ವಾಮಿ ದೇವಾಲಯದಲ್ಲಿ ಕುಟುಂಬಸ್ಥರ ಹೆಸರಿನಲ್ಲಿ ಅರ್ಚನೆ ಮಾಡಿಸಿದರು. ಬಳಿಕ ಹೆಚ್​ಡಿ ರೇವಣ್ಣ ಹೊಳೆನರಸೀಪುರದ ಲಕ್ಷ್ಮೀನರಸಿಂಹ ದೇಗುಲಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ