ಬುಧವಾರ, ಮೇ 22, 2024
ಮನೆಯೊಂದರಲ್ಲಿ ಪೊಲೀಸ್ ಕಾನ್ಸ್ಟೇಬಲ್ ಮಹಿಳೆಯೊಂದಿಗೆ ನೇಣು ಬಿಗಿದು ಆತ್ಮಹತ್ಯೆ.!-Rain Alert: ಕರಾವಳಿಯಲ್ಲಿ ಭಾರಿ ಮಳೆ ಮುನ್ಸೂಚನೆ; ಸಮುದ್ರ ತೀರದಲ್ಲಿ ಹೈ-ಅಲರ್ಟ್.!-Rave Party :ಇಂದು ಮತ್ತೊಂದು ವಿಡಿಯೋ ಹರಿಬಿಟ್ಟ ನಟಿ ಹೇಮಾ; ರೇವ್ ಪಾರ್ಟಿಯಲ್ಲಿ ಇದ್ದಿದ್ದು ನಿಜಾನಾ.?-ಬ್ರಹ್ಮ ಅಡ್ಡಬಂದರೂ ರಘುಪತಿ ಭಟ್ ನೈಋತ್ಯ ಪಧವೀಧರ ಕ್ಷೇತ್ರದಿಂದ ಗೆಲುವು ಸಾಧಿಸುತ್ತಾರೆ; ಕೆ.ಎಸ್ ಈಶ್ವರಪ್ಪ-2023 ಚುನಾವಣೆಯಲ್ಲಿ ಬಂಗೇರ ರವರನ್ನು ಸ್ಪರ್ಧಿಸುವಂತೆ ನಾನು ಹೇಳಿದರೂ, ಅವರ ಸ್ಪರ್ಧಿಸಲಿಲ್ಲ. ಸ್ಪರ್ಧಿಸುತ್ತಿದ್ದರೆ ಮಂತ್ರಿಯಾಗುತ್ತಿದ್ದರು-ಬಂಗೇರ ನುಡಿ ನಮನ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಮಾತು-ತಮ್ಮ ತಮ್ಮ ಕ್ಷೇತ್ರಗಳಲ್ಲಿ ಲೀಡ್ ಕೊಡಿಸಿ. ಇಲ್ಲಾದ್ರೆ ಜಾಗ ಖಾಲಿ ಮಾಡಿ, ಹೊಸ ಮುಖಗಳನ್ನು ಬೆಳೆಸುತ್ತೇವೆ-ನಾಯಕರುಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ-ದ್ವೇಷ ರಾಜಕಾರಣಕ್ಕೆ ಬೆಳ್ತಂಗಡಿಯಲ್ಲಿ ಅಖಾಡ ಸಿದ್ಧವಾಗಿದೆಯೇ? ಹರೀಶ್ ಪೂಂಜ V/S ರಕ್ಷಿತ್ ಶಿವರಾಂ..!-ಭಜರಂಗಿ ಸಿನೆಮಾದಲ್ಲಿ ನಟಿಸಿದ್ದ ನಟಿ ಪತಿಯಿಂದಲೇ ಭೀಕರ ಹತ್ಯೆ..!-ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!-ಶಿರಾಡಿ ಘಾಟಿಯಲ್ಲಿ ಭೀಕರ ಅಪಘಾತ; ತಾಯಿ -ಮಗ ಮೃತ್ಯು.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!

Twitter
Facebook
LinkedIn
WhatsApp
ಪೆನ್ ಡ್ರೈವ್ ಪ್ರಕರಣ: ಅಪ್ಪ- ಮಗನಿಗೆ ನೋಟಿಸ್!
 

ಬೆಂಗಳೂರು: ದೇಶಾದ್ಯಂತ ಹಲ್‍ಚಲ್ ಎಬ್ಬಿಸಿರುವ ಸಂಸದ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಪ್ರಕರಣವು ಇದೀಗ ಎಸ್‍ಐಟಿ  ಅಂಗಳದಲ್ಲಿದೆ.

 

ಸದ್ಯ ಪ್ರಕರಣದ ತನಿಖೆಗೆ ಇಳಿದಿರುವ ವಿಶೇಷ ತನಿಖಾ ತಂಡದ  (SIT) ಅಧಿಕಾರಿಗಳು ಪ್ರಜ್ವಲ್ ರೇವಣ್ಣ, ರೇವಣ್ಣಗೆ ಶಾಕ್ ಕೊಟ್ಟಿದ್ದಾರೆ. ಅಪ್ಪ- ಮಗನಿಗೆ ನೋಟಿಸ್ ಕೊಟ್ಟಿರುವ ಅಧಿಕಾರಿಗಳು ಕಾನೂನು ಕ್ರಮದ ಎಚ್ಚರಿಕೆಯನ್ನು ನೀಡಿದ್ದಾರೆ.

ನೋಟಿಸ್ ಸಿಕ್ಕ ತಕ್ಷಣ ಹಾಜರಾಗಿ ವಿಚಾರಣೆಗೆ ಸಹಕರಿಸಬೇಕು. ಇಲ್ಲದೇ ಹೋದರೆ ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ ಎಂದು ನೋಟಿಸ್‍ನಲ್ಲಿಯೇ ಕಾನೂನು ಕ್ರಮದ ಎಚ್ಚರಿಕೆ ಉಲ್ಲೇಖ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ರೇವಣ್ಣ ಹಾಗೂ ಪ್ರಜ್ವಲ್ ಇಂದು ವಿಚಾರಣೆಗೆ ಹಾಜರಾಗ್ತಾರಾ ಎಂಬ ಕುತೂಹಲ ಹುಟ್ಟಿದೆ. ಯಾಕೆಂದರೆ ಪ್ರಜ್ವಲ್ ಈಗಾಗಲೇ ಜರ್ಮನಿಯಲ್ಲಿದ್ದಾರೆ. ಇತ್ತ ರೇವಣ್ಣ ಕೂಡ ವಿಚಾರಣೆಗೆ ಗೈರಾಗುವ ಸಾಧ್ಯತೆಗಳೀವೆ ಎಂಬುದಾಗಿ ಮುಳಗಳಿಂದ ತಿಳಿದುಬಂದಿದೆ.

ಈ ನಡುವೆ ಪ್ರಕರಣಕ್ಕೆ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ (karnataka State Child Rights Protection Commission) ಎಂಟ್ರಿ ಕೊಟ್ಟಿದೆ. ಪ್ರಕರಣ ಸಂಬಂಧ ವಿಶೇಷ ತನಿಖಾ ತಂಡ (SIT) ಮುಖ್ಯಸ್ಥ ಬಿಜಯ್ ಕುಮಾರ್ ಸಿಂಗ್‌ಗೆ ಮಕ್ಕಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಪತ್ರ ಬರೆದಿದ್ದಾರೆ.

ಸಂತ್ರಸ್ತೆ ಒಬ್ಬರು ತನ್ನ ಮಗಳ ಜೊತೆ ಕೂಡ ಅಸಭ್ಯವಾಗಿ ವರ್ತಿಸಿರುವ ಬಗ್ಗೆ ಮಾಧ್ಯಮದಲ್ಲಿ ಹೇಳಿಕೆ ನೀಡಿದ್ದಾರೆ. ಪ್ರಕರಣದಲ್ಲಿ ಆರೋಪಿ ಅಪ್ರಾಪ್ತ ಹೆಣ್ಣು ಮಕ್ಕಳನ್ನ ಬಳಸಿಕೊಂಡಿರುವ ಬಗ್ಗೆ ಮೇಲ್ನೋಟಕ್ಕೆ ಅನುಮಾನ ಇದೆ. ಹಾಗಾಗಿ ಪ್ರಕರಣದಲ್ಲಿ ಆರೋಪಿಯಿಂದ ಅಪ್ರಾಪ್ತ ಹೆಣ್ಣು ಮಕ್ಕಳ ಬಳಕೆ ಪತ್ತೆಯಾದಲ್ಲಿ ಈ ಬಗ್ಗೆ ವರದಿ ನೀಡುವಂತೆ ಎಸ್‌ಐಟಿಗೆ ಪತ್ರ ಬರೆದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ