ಫೋನ್ ಪೇ ನಂತರ ಇದೀಗ ಪೇಟಿಎಂ ಸದ್ದಿಲ್ಲದೇ, ಮೊಬೈಲ್ ರೀಚಾರ್ಜ್ ಮಾಡಿಕೊಳ್ಳುವ ತನ್ನ ಬಳಕೆದಾರರಿಗೆ ಶುಲ್ಕವನ್ನು ವಿಧಿಸಲು ಆರಂಭಿಸಿದೆ.
ಸರ್ಚಾರ್ಜ್ ರೂಪದಲ್ಲಿ ಪೇಟಿಎಂ ಗ್ರಾಹಕರಿಂದ 1 ರಿಂದ 6 ರೂಪಾಯಿವರೆಗೆ ಶುಲ್ಕವನ್ನು ಪಡೆಯುತ್ತಿದೆ. ಪೇಟಿಎಂ ಮೊಬೈಲ್ ರೀಚಾರ್ಜ್ ಗಳಿಗೆಲ್ಲವಕ್ಕೂ ಈ ಶುಲ್ಕ ಅನ್ವಯವಾಗುತ್ತಿದೆ.
ಗ್ರಾಹಕರು ತಮ್ಮ ವ್ಯಾಲೆಟ್ ಬ್ಯಾಲೆನ್ಸ್ ಅಥವಾ ಯುಪಿಐ ಅಥವಾ ಬ್ಯಾಂಕ್ ಕ್ರೆಡಿಟ್ ಅಥವಾ ಡೆಬಿಟ್ ಕಾರ್ಡ್ ನೊಂದಿಗೆ ಪೇಟಿಎಂ ಮೂಲಕ ಮೊಬೈಲ್ ಅನ್ನು ರೀಚಾರ್ಜ್ ಮಾಡಿಸಿದರೂ ಈ ಶುಲ್ಕವನ್ನು ಪಾವತಿಸಲೇಬೇಕು.
ಈ ಶುಲ್ಕ ವಿಧಿಸುವ ಪ್ರಕ್ರಿಯೆ ಕಳೆದ ಮಾರ್ಚ್ ತಿಂಗಳಲ್ಲೇ ಜಾರಿಗೆ ಬಂದಿದೆಯಾದರೂ ಹೆಚ್ಚಿನ ಗ್ರಾಹಕರಿಗೆ ತಿಳಿದಿರಲಿಲ್ಲ. ಏಕೆಂದರೆ, ಆರಂಭದಲ್ಲಿ ಕೆಲವೇ ಕೆಲವು ಗ್ರಾಹಕರಿಗೆ ಶುಲ್ಕ ವಿಧಿಸಿರುವುದು ಕಂಡುಬಂದಿತ್ತು. ಆದರೆ, ದಿನ ಕಳೆದಂತೆ ಎಲ್ಲಾ ಗ್ರಾಹಕರಿಗೆ ಈ ಶುಲ್ಕದ ಬಿಸಿ ತಟ್ಟಿದ್ದು, ಅವರ ಆಕ್ರೋಶಕ್ಕೆ ಗುರಿಯಾಗಿದೆ.
ಪೇಟಿಎಂ ಆಯಪ್ ಮೂಲಕ ಮೊಬೈಲ್ ರೀಚಾರ್ಜ್ ಮಾಡಿಸಿದರೆ ಯಾವುದೇ ಶುಲ್ಕ ವಿಧಿಸುವುದಿಲ್ಲ ಎಂದು 2019 ರಲ್ಲಿ ಕಂಪನಿ ಘೋಷಣೆ ಮಾಡಿತ್ತು. ಆದರೆ, ಈಗ ಯಾವುದೇ ಮುನ್ಸೂಚನೆ ಇಲ್ಲದೇ ಏಕಾಏಕಿ ಶುಲ್ಕ ವಿಧಿಸುತ್ತಿದೆ ಎಂದು ಬಳಕೆದಾರರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.
ಅಲ್ಲದೇ, ಗ್ರಾಹಕರಿಗೆ ಶುಲ್ಕ ವಿಧಿಸುವ ಮೂಲಕ ಪೇಟಿಎಂ ಕಂಪನಿ ದ್ವಂದ್ವ ನೀತಿ ಅನುಸರಿಸುತ್ತಿದೆ ಎಂದು ಗ್ರಾಹಕರು ತಮ್ಮ ಕೋಪ ಹೊರಹಾಕಿದ್ದಾರೆ.
ಮುರುಡೇಶ್ವರ ದಲ್ಲಿ ನಾಲ್ವರು ವಿದ್ಯಾರ್ಥಿನಿಯರ ಸಾವು; ಮುಖ್ಯಶಿಕ್ಷಕರು ಸೇರಿ 7 ಮಂದಿ ವಶಕ್ಕೆ! Twitter Facebook LinkedIn WhatsApp ಕಾರವಾರ: ಮುರುಡೇಶ್ವರ ದಲ್ಲಿ (Murudeshwar) ನೀರು ಪಾಲಾಗಿ ನಾಲ್ವರು ವಿದ್ಯಾರ್ಥಿಯರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ
ಭಾರಿ ಮಳೆ ಹಿನ್ನೆಲೆ ನಾಳೆ ಡಿ.3 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಲಾ, ಪಿಯು ಕಾಲೇಜುಗಳಿಗೆ ರಜೆ ಘೋಷಣೆ Twitter Facebook LinkedIn WhatsApp ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಫೆಂಗಲ್ ಚಂಡಮಾರುತದ ಪರಿಣಾಮ
ದೇಶದ ಪ್ರಮುಖ ಪ್ರತಿಭಾವಂತ ಯುವ ರಾಜಕೀಯ ಸಲಹ ಗಾರರು ಹಾಗೂ ತಂತ್ರ ಗಾರರು Twitter Facebook LinkedIn WhatsApp ನವದೆಹಲಿ: ಆಧುನಿಕ ಚುನಾವಣೆ ಮತ್ತು ರಾಜಕೀಯದಲ್ಲಿ ಚುನಾವಣಾ ಸಲಹೆ ನೀಡುವವರು ಹಾಗೂ ತಂತ್ರಗಾರರು(Political Strategist