ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೊಲೀಸರೇ ಕತ್ತೆ ಕಾಯ್ತ ಇದ್ದೀರಾ?: ಸಚಿವ ಸೋಮಣ್ಣ ಕೆಂಡಾಮಂಡಲ

Twitter
Facebook
LinkedIn
WhatsApp
ಪೊಲೀಸರೇ ಕತ್ತೆ ಕಾಯ್ತ ಇದ್ದೀರಾ?: ಸಚಿವ ಸೋಮಣ್ಣ ಕೆಂಡಾಮಂಡಲ

ಚಾಮರಾಜನಗರ:  ಕಾನೂನು ಸುವ್ಯವಸ್ಧೆ ಹದಗೆಟ್ಟಿರುವ ಬಗ್ಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರು ಹಲವು ಬಾರಿ ಎಚ್ಚರಿಕೆ ನೀಡಿದ್ದರೂ, ಸರಿಪಡಿಸಿಕೊಳ್ಳದ ಪರಿಣಾಮ ಚಾಮರಾಜನಗರ ಜಿಲ್ಲಾ ದಸರಾ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನೆ ವೇಳೆ ವೇದಿಕೆಯಲ್ಲೇ ಕಪ್ಪು ಬಾವುಟ ಪ್ರದರ್ಶಿಸಿದ ಪರಿಣಾಮ ಎಸ್ಪಿ ಸಮ್ಮುಖದಲ್ಲೇ ಜಿಲ್ಲಾ ಉಸ್ತುವಾರಿ ಸಚಿವರು ಮುಜುಗರ ಅನುಭವಿಸಬೇಕಾಯಿತು.

ಚಾಮರಾಜೇಶ್ವರ ದೇವಾಲಯದ ಮುಂಭಾಗ ನಿರ್ಮಿಸಿರುವ ಮುಖ್ಯ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟಿಸಲು ಸಚಿವರು ಆಗಮಿಸುತ್ತಿದ್ದಂತೆ ಅಲ್ಲಿನ ಅವ್ಯವಸ್ಧೆ ಕಂಡು ವೇದಿಕೆಯಲ್ಲಿ ಕೂರದೆ ಎಲ್ಲವನ್ನು ಸರಿಪಡಿಸಿದರು. ನಂತರ ವೇದಿಕೆ ಮೇಲೆ ಕುಳಿತುಕೊಳ್ಳುತ್ತಿದ್ದಂತೆ ಹಿಂಬದಿಯಿಂದ ಬಂದ ನಗರಸಭಾ ಸದಸ್ಯ ಆರ್‌.ಪಿ.ನಂಜುಂಡಸ್ವಾಮಿ ದೀಪಾಲಂಕಾರದ ಅವ್ಯವಸ್ಥೆ ಖಂಡಿಸಿ ಕಪ್ಪು ಬಾವುಟ ಪ್ರದರ್ಶಿಸಿದರು.

ಬಳಿಕ, ಅಲ್ಲೇ ಇದ್ದ ಪೊಲೀಸರು ನಂಜುಂಡಸ್ವಾಮಿ ಅವರನ್ನು ಹೊರಕ್ಕೆ ಎಳೆದೊಯ್ದರು. ಮುಂಭಾಗದಿಂದ ಬಂದ ಮಹಿಳೆಯೊಬ್ಬರು ಸಹ ಧಿಕ್ಕಾರದ ಘೋಷಣೆ ಕೂಗಿದರು. ಅನಿರೀಕ್ಷಿತ ಘಟನೆಯಿಂದ ಕೆಂಡಾಮಂಡಲರಾದ ಸಚಿವ ಸೋಮಣ್ಣ, ಪೊಲೀಸರು ಏನು ಕತ್ತೆ ಕಾಯುತ್ತಿದ್ದೀರಾ, ಯಾವ ರೀತಿ ವ್ಯವಸ್ಥೆ ಮಾಡಿದ್ದೀರಾ ಎಂದು ಕಿಡಿಕಾರಿದರು.

ಪೊಲೀಸರೇ ಕತ್ತೆ ಕಾಯ್ತ ಇದ್ದೀರಾ?: ಸಚಿವ ಸೋಮಣ್ಣ ಕೆಂಡಾಮಂಡಲ

ನಾನು, ಒಂದು ಸಾರಿ ಬಾವುಟ ಹಾರಿಸಿ ವರ್ಷಾನುಗಟ್ಟಲೆ ಎಳಲಿಲ್ಲ, ಕಪುತ್ರ್ಪ ಬಾವುಟ ಪ್ರದರ್ಶಿಸುವುದು ದೊಡ್ಡದ್ದಲ್ಲ, ಯಾವುದೋ ಕೆಟ್ಟಉದ್ದೇಶ ಇಟ್ಟುಕೊಂಡು ಕಪ್ಪುಬಾವುಟ ಪ್ರದರ್ಶಿಸಿದ ವ್ಯಕ್ತಿಯನ್ನು ಸುಮ್ಮನೇ ಬಿಡುವುದಿಲ್ಲ. ತಾಯಿ ಚಾಮುಂಡೇಶ್ವರಿ ದುಷ್ಟರನ್ನು ಸಂಹಾರ ಮಾಡಿದಂತೆ ಇಂತಹವರನ್ನು ಸಂಹಾರ ಮಾಡಲು ಅಧಿಕಾರಿಗಳು ಮುಂದಾಗಬೇಕು ಎಂದು ಸೂಚನೆ ನೀಡಿದರು.

ಕಾರ್ಯಕ್ರಮ ಉದ್ಘಾಟನೆ ಮುನ್ನಾವೇ ಅವ್ಯವಸ್ಧೆ ಕಂಡು ಜಿಲ್ಲಾಡಳಿತ, ಪೊಲೀಸರು, ಚೆಸ್ಕಾಂ ಸಿಬ್ಬಂದಿ ಕಾರ್ಯಕ್ರಮದ ಬಳಿಕ ಸಭೆಗೆ ಹಾಜರಾಗಬೇಕು ಎಂದು ವೇದಿಕೆಯಲ್ಲೇ ಸೂಚಿಸಿದರು. ವೇದಿಕೆ ಎರಡೂ ಬದಿಯಲ್ಲಿ ನಿಂತಿದ್ದ ಮುಖಂಡರನ್ನು ಕಂಡು ಖುರ್ಚಿ ಹಾಕಿಸಿ ಯಾರೂ ನಿಲ್ಲಬಾರದು, ಜಂಜಾಟ ಮರೆತು ಕಾರ್ಯಕ್ರಮ ನೋಡಿ ಎಂದು ಹೇಳಿದರು.

ವಿಷಾಧ ವ್ಯಕ್ತಪಡಿಸಿದ ಶಾಸಕರು

ವೇದಿಕೆಯಲ್ಲಿ ಕಪ್ಪು ಬಾವುಟ ಪ್ರದರ್ಶಿಸಿದ ಘಟನೆ ಬಗ್ಗೆ ಶಾಸಕರಾದ ಸಿ. ಪುಟ್ಟರಂಗಶೆಟ್ಟಿಮತ್ತು ಎನ್‌. ಮಹೇಶ್‌ ವಿಷಾಧ ವ್ಯಕ್ತಪಡಿಸಿದರು. ಸಚಿವರು ಜಿಲ್ಲಾಭಿವೃದ್ಧಿಗಾಗಿ ವಿಶೇಷ ಕಾಳಜಿವಹಿಸಿ ಶ್ರಮಿಸುತ್ತಿದ್ದಾರೆ. ಜಾತಿಮತ ಭೇದವಿಲ್ಲದೆ ಎಲ್ಲರನ್ನು ಸಮಾನತೆಯಿಂದ ಕಾಣುತ್ತಾ ಜಿಲ್ಲಾಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಇಂತಹವರ ಮುಂದೆ ಈ ರೀತಿ ಘಟನೆ ನಡೆಯಬಾರದಿತ್ತು ಎಂದು ಇದಕ್ಕೆಲ್ಲ ನಮ್ಮ ಪೊಲೀಸರೇ ಕಾರಣ. ಇಂತಹ ಘಟನೆ ನಡೆಯುತ್ತದೆ ಎಂದು ಗೊತ್ತಿದ್ದು, ಪೊಲೀಸರು ಮೈಮರೆತರು ಎಂದು ಪೊಲೀಸರ ನಿರ್ಲಕ್ಷ್ಯದ ಬಗ್ಗೆ ಕಿಡಿಕಾರಿದರು.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ