ಸೋಮವಾರ, ಜೂನ್ 24, 2024
Sports for change Kho Kho ಪಂದ್ಯಾಟ: ಕರ್ನಾಟಕ ತಂಡವನ್ನು ಪ್ರತಿನಿಧಿಸಿದ ನಯನಾಡು ಸರಕಾರಿ ಪ್ರೌಢಶಾಲಾ ವಿದ್ಯಾರ್ಥಿಗಳು-T20 ವಿಶ್ವಕಪ್‌: ಆಸ್ಟ್ರೇಲಿಯಾ ವಿರುದ್ಧ ಐತಿಹಾಸಿಕ ಗೆಲುವು ಸಾಧಿಸಿದ ಅಫ್ಘಾನಿಸ್ತಾನ-ವಿಧಾನ ಪರಿಷತ್ ಸದಸ್ಯ ಡಾ.ಸೂರಜ್‌ ರೇವಣ್ಣ ಬಂಧನ-ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಗುಡ್ ನ್ಯೂಸ್; ಜಾಮೀನು ಮಂಜೂರು..!-ದರ್ಶನ್ ಸೇರಿದಂತೆ 17 ಆರೋಪಿಗಳ ಕಸ್ಟಡಿ ಅಂತ್ಯ; ಇಂದು ನ್ಯಾಯಾಲಯಕ್ಕೆ ಹಾಜರು.!-ರಾಜ್ಯದಲ್ಲಿ ಮುಂಗಾರು ಚುರುಕು; ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಮುನ್ಸೂಚನೆ.!-ಅಶ್ಲೀಲ ವಿಡಿಯೋ ಪ್ರಕರಣ; ಪ್ರಜ್ವಲ್ ರೇವಣ್ಣಗೆ ಮತ್ತೆ ನ್ಯಾಯಾಂಗ ಬಂಧನ.!-4 ಓವರ್ ಗಳಲ್ಲಿ ಒಂದೇ ಒಂದು ರನ್ ನೀಡದೆ 3 ವಿಕೆಟ್ ಕಬಳಿಸಿ ದಾಖಲೆ ಬರೆದ ಲಾಕಿ ಫರ್ಗುಸನ್..!-ದರ್ಶನ್ ಫಾರಂ ಹೌಸ್ ಮ್ಯಾನೇಜರ್ ನಿಗೂಢ ಸಾವು; ಅನುಮಾನಾಸ್ಪದ ಸಾವು ಪ್ರಕರಣ ದಾಖಲು.!-ಶತಕದತ್ತ ಟೊಮೆಟೊ ದರ; ಮತ್ತಷ್ಟು ಏರಿಕೆಯಾಗಲಿದೆಯೇ ಟೊಮೆಟೊ ಬೆಲೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!

Twitter
Facebook
LinkedIn
WhatsApp
ಪೋಕ್ಸೊ ಕೇಸ್​; ವಾರಂಟ್ ಜಾರಿಯಾದ್ರೆ ಮಾಜಿ ಸಿಎಂ ಯಡಿಯೂರಪ್ಪ ಬಂಧನ ಫಿಕ್ಸ್..!

ಬೆಂಗಳೂರು: ಪೋಕ್ಸೊ ಕೇಸ್​ನಲ್ಲಿ ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ (BS Yediyurappa) ಬಂಧಿಸಲು ಪೊಲೀಸರು ಸಿದ್ಧತೆ ನಡೆಸುತ್ತಿದ್ದಾರೆ. ವಿಚಾರಣೆಗೆ ಬಿಎಸ್​ ಯಡಿಯೂರಪ್ಪ ಹಾಜರಾಗದ ಹಿನ್ನೆಲೆ ಜಾಮೀನು ರಹಿತ ​ವಾರಂಟ್ ಹೊರಡಿಸಲು ಪೊಲೀಸರು ನಿನ್ನೆ ತ್ವರಿತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿದ್ದರು. ಇಂದು ವಾರಂಟ್ ಹೊರಡಿಸುವ ಬಗ್ಗೆ ಬೆಂಗಳೂರಿನ 42ನೇ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ ನೀಡಲಿದೆ. ಒಂದು ಪಕ್ಷ ಕೋರ್ಟ್ ವಾರಂಟ್ ಜಾರಿ ಮಾಡಿದರೆ ಪೊಲೀಸರು (Police) ಬಿಎಸ್​ ಯಡಿಯೂರಪ್ಪನವರನ್ನು ಬಂಧಿಸಲಿದ್ದಾರೆ.

ಮಾಜಿ ಸಿಎಂ ಬಿಎಸ್ ಯಡಿಯೂರಪ್ಪನವರಿಗೆ ದೊಡ್ಡ ಸಂಕಷ್ಟ ಎದುರಾಗಿದೆ. ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಿಚಾರಣೆಗೆ ಹಾಜರಾಗುವಂತೆ ಬಿ ಎಸ್ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಮಹಿಳೆಯೊಬ್ಬರು ತಮ್ಮ ಅಪ್ರಾಪ್ತ ಪುತ್ರಿಯೊಂದಿಗೆ ಬಿಎಸ್‌ವೈ ಅಸಭ್ಯವಾಗಿ ವರ್ತಿಸಿದ್ದಾರೆಂದು ಆರೋಪಿಸಿ ಕಳೆದ ಮಾರ್ಚ್ ತಿಂಗಳಲ್ಲೇ ದೂರು ನೀಡಿದ್ದರು. ಆದರೆ ಕಳೆದ ತಿಂಗಳು ಆ ಮಹಿಳೆ ಅನಾರೋಗ್ಯದಿಂದ ಮೃತಪಟ್ಟಿದ್ದರು.

ಮಹಿಳೆಯ ದೂರಿಗೆ ಸಂಬಂಧಿಸಿದಂತೆ ಬಿಎಸ್ ಯಡಿಯೂರಪ್ಪಗೆ ನೋಟಿಸ್ ಜಾರಿಗೊಳಿಸಿದ್ದ ಪೊಲೀಸರು ನಿನ್ನೆ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಅಪಾಯ ಮನಗಂಡ ಬಿಎಸ್ ವೈ ಪ್ರಕರಣ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಪ್ರಕರಣಕ್ಕೆ ತಡೆಯಾಜ್ಞೆ ನೀಡುವಂತೆ ಮನವಿ ಮಾಡಿದ್ದಾರೆ. ಇನ್ನು ವಿಚಾರಣೆಗೆ ಹಾಜರಾಗುವಂತೆ ನೀಡಿರುವ ನೋಟಿಸ್ ಗೂ ಉತ್ತರ ನೀಡಿರುವ ಬಿಎಸ್‌ವೈ ಸೋಮವಾರ ಜೂನ್ 17 ರಂದು ವಿಚಾರಣೆಗೆ ಹಾಜರಾಗುವುದಾಗಿ ತಿಳಿಸಿದ್ದಾರೆ.

ಪೊಲೀಸ್ ನೋಟಿಸ್​ಗೆ ಬಿಎಸ್‌ವೈ ಉತ್ತರ

ಇನ್ನು ಮತ್ತೊಂದೆಡೆ ತನಿಖೆಗೆ ಹಾಜರಾಗುವಂತೆ ಪೊಲೀಸರು ನೀಡಿದ್ದ ನೋಟಿಸ್​ಗೆ ಬಿಎಂ ಯಡಿಯೂರಪ್ಪ ಉತ್ತರಿಸಿದ್ದಾರೆ. ನಾನು ಕಳೆದ ಮಾರ್ಚ್ 28 ರಂದು ನೀಡಿದ್ದ ನೋಟಿಸ್ ನಂತೆ ವಿಚಾರಣೆಗೆ ಹಾಜರಾಗಿ ತನಿಖೆಗೆ ಸಂಪೂರ್ಣ ಸಹಕಾರ ನೀಡಿದ್ದೆ. ಆದರೆ ಮತ್ತೆ ಜೂನ್ 12 ರಂದು ತಾವು ನೀಡಿರುವ ನೋಟಿಸ್ ನನಗೆ ನಿನ್ನೆಯಷ್ಟೇ ತಲುಪಿದೆ. ನಾನು ಪಕ್ಷದ ಪೂರ್ವ ನಿರ್ಧರಿತ ಕಾರ್ಯಕ್ರಮದಲ್ಲಿ ಭಾಗಿಯಾಗಬೇಕಿರುವುದರಿಂದ ದೆಹಲಿಗೆ ತೆರಳುತ್ತಿದ್ದೇನೆ. ಹೀಗಾಗಿ ಈ ಬಾರಿ ನಾನು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ನಾನು ಜೂನ್ 17 ರಂದು ಖುದ್ದಾಗಿ ವಿಚಾರಣೆಗೆ ಹಾಜರಾಗುತ್ತೇನೆ. ಈ ಹಿಂದೆಯೂ ನಾನು ತನಿಖೆಗೆ ಸಹಕರಿಸಿದ್ದೇನೆ. ಸಕಾರಣಗಳಿಂದಲೇ ಈ ಬಾರಿ ತನಿಖೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ವಿನಾಯಿತಿ ನೀಡಬೇಕು ಎಂದು ತಿಳಿಸಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ