ಶುಕ್ರವಾರ, ಮೇ 17, 2024
ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!-ನಾನು ಎಂದಿಗೂ ಹಿಂದೂ ಅಥವಾ ಮುಸ್ಲಿಂ ಬಗ್ಗೆ ಮಾತನಾಡಿಲ್ಲ; ಪ್ರಧಾನಿ ಮೋದಿ-ಕಾಲೇಜು ಕಟ್ಟಡದಿಂದ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿ ಆತ್ಮಹತ್ಯೆ ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪೋಕ್ಸೊ ಪ್ರಕರಣ ಒಂದೇ ದಿನದಲ್ಲಿ ವಿಚಾರಣೆ, ಜೀವಾವಧಿ ಸಜೆ ಪ್ರಕಟ

Twitter
Facebook
LinkedIn
WhatsApp
ಭ್ರಷ್ಟಾಚಾರ ಆರೋಪ: ನಿರ್ಮಿತಿ ಕೇಂದ್ರದ ಮಾಜಿ ಯೋಜನಾ ನಿರ್ದೇಶಕ ಅರೆಸ್ಟ್​

ಬಿಹಾರದ ಅರಾರಿಯಾ ಜಿಲ್ಲೆಯ ಪೋಕ್ಸೊ ವಿಶೇಷ ನ್ಯಾಯಾಲಯ ಒಂದೇ ದಿನದಲ್ಲಿ ಪ್ರಕರಣದ ವಿಚಾರಣೆ ನಡೆಸಿ ಅಪರಾಧಿಗೆ ಸಜೆಯನ್ನೂ ವಿಧಿಸಿ ತ್ವರಿತವಾಗಿ ನ್ಯಾಯದಾನ ಮಾಡಿದ ರಾಷ್ಟ್ರೀಯ ದಾಖಲೆ ಮಾಡಿದೆ.

ಪಾಟ್ನಾ: ನ್ಯಾಯದಾನ ವಿಳಂಬವು ನ್ಯಾಯದ ನಿರಾಕರಣೆ ಎಂದು ಕಾನೂನಿನ ಪರಿಭಾಷೆಯಲ್ಲಿ ಹೇಳಲಾಗುತ್ತದೆ. ಆದರೆ, ಬಿಹಾರದ ಅರಾರಿಯಾ ಜಿಲ್ಲೆಯ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆ ಕಾಯ್ದೆ (ಪೋಕ್ಸೊ) ಅಡಿಯ ಪ್ರಕರಣಗಳ ವಿಚಾರಣೆ ನಡೆಸುವ ವಿಶೇಷ ನ್ಯಾಯಾಲಯವು ಒಂದೇ ದಿನದಲ್ಲಿ ಸಾಕ್ಷ್ಯಗಳ ಹೇಳಿಕೆ ದಾಖಲು ಮಾಡಿಕೊಂಡು, ವಾದ, ಪ್ರತಿವಾದ ಆಲಿಸಿ, ಸಾಕ್ಷ್ಯಗಳ ಪಾಟೀಸವಾಲು ನಡೆಸಿ ಅಪರಾಧಿಗೆ ಜೀವಾವಧಿ ಸಜೆ ಮತ್ತು 50 ಸಾವಿರ ರೂಪಾಯಿ ದಂಡ ವಿಧಿಸಿದೆ. ಅತ್ಯಾಚಾರ ಸಂತ್ರಸ್ತರ ಪರಿಹಾರ ನಿಧಿಯಿಂದ ಸಂತ್ರಸ್ತ ಬಾಲಕಿಗೆ 7 ಲಕ್ಷ ರೂಪಾಯಿ ಪರಿಹಾರ ನೀಡುವಂತೆಯೂ ಆದೇಶಿಸಿದೆ.
ಈ ರೀತಿ ಒಂದೇ ದಿನದಲ್ಲಿ ಪ್ರಕರಣದ ಎಲ್ಲ ವಿಚಾರಣೆಯನ್ನು ಮುಗಿಸಿ ತೀರ್ಪು ನೀಡಿದ ಬಹುಶಃ ದೇಶದಲ್ಲಿ ಮೊದಲ ಪ್ರಕರಣ ಇದಾಗಿದೆ. 2018ರ ಆಗಸ್ಟ್​ 8ರಂದು ಮಧ್ಯಪ್ರದೇಶದ ಡಾಟಿಯಾದ ಕೋರ್ಟ್​ ಮೂರು ದಿನ ವಿಚಾರಣೆ ನಡೆಸಿ ತೀರ್ಪು ನೀಡಿತ್ತು.

ಪೋಕ್ಸೊ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಶಶಿಕಾಂತ ರೈ ಕಳೆದ ಅಕ್ಟೋಬರ್​ 4ರಂದು ಈ ಪ್ರಕರಣದ ವಿಚಾರಣೆ ನಡೆಸಿ ಅವತ್ತೆ ತೀರ್ಪು ನೀಡಿದ್ದಾರೆ. ಆದರೆ ಇದು ಈಗ ಬೆಳಕಿಗೆ ಬಂದಿದೆ.
ಪ್ರಕರಣದ ತನಿಖಾಧಿಕಾರಿಯೂ ಸಂಶಯಕ್ಕೆ ಆಸ್ಪದ ಇಲ್ಲದಂತೆ ತಮ್ಮ ಕೆಲಸವನ್ನು ಅಚ್ಚುಕಟ್ಟಾಗಿ ಮಾಡಿದ್ದಾರೆ. ಸ್ಥಳದ ಮಹಾಜರು, ಸಂತ್ರಸ್ತೆಯ ಪರೀಕ್ಷೆ, ಹೇಳಿಕೆ ಪಡೆಯುವುದರಿಂದ ಹಿಡಿದು ಸಾಕ್ಷ್ಯ ಸಂಗ್ರಹವನ್ನು ಸಮಪರ್ಕವಾಗಿ ದಾಖಲಿಸಿದ್ದಾರೆ. ಆರೋಪಿಯ ಪರ ವಕೀಲರು ಘಟನೆ ನಡೆದ ಸ್ಥಳದ ಬಗ್ಗೆ ಯಾವುದೇ ತಕರಾರು ಎತ್ತಲಿಲ್ಲ’ ಎಂದು ರೈ ತಮ್ಮ 20 ಪುಟಗಳ ತೀಪಿರ್ನಲ್ಲಿ ಉಲ್ಲೇಖಿಸಿದ್ದಾರೆ.
ಈ ಪ್ರಕರಣವು ಕಳೆದ ಜುಲೈ 22ರಂದು ನಡೆದಿತ್ತು. 8 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಲಾಗಿತ್ತು. ಜುಲೈ 23ರಂದು ಎಫ್‌ಐಆರ್​ ದಾಖಲಾಗಿ ಸೆಪ್ಟೆಂಬರ್​ 24ರಂದು ಆರೋಪಿಯ ವಿರುದ್ಧ ಆರೋಪ ನಿಗದಿ ಮಾಡಲಾಯಿತು. ಈ ಪ್ರಕರಣದ ತನಿಖೆಯನ್ನು ಅರಾರಿಯಾ ಮಹಿಳಾ ಠಾಣೆಯ ಅಧಿಕಾರಿ ರೀಟಾ ಕುಮಾರಿ ನಡೆಸಿದ್ದರು ಎಂದು ಸರ್ಕಾರಿ ವಕೀಲೆ ಶ್ಯಾಮಲಾ ಯಾದವ್​ ಹೇಳಿದ್ದಾರೆ.

ನಮ್ಮನ್ನು ಬೆಂಬಲಿಸಲು ಇಲ್ಲಿ ಕ್ಲಿಕ್ ಮಾಡಿ

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಅಂಕಣ

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು