ಶುಕ್ರವಾರ, ನವೆಂಬರ್ 22, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!

Twitter
Facebook
LinkedIn
WhatsApp
ಪ್ರಜ್ವಲ್ ಪೆನ್ ಡ್ರೈವ್ ಪ್ರಕರಣ; ಸಚಿವರು ಅನಗತ್ಯವಾಗಿ ಹೇಳಿಕೆ ನೀಡದಂತೆ ಸಿದ್ದರಾಮಯ್ಯ ಸೂಚನೆ..!

ಹಾಸನ ಸಂಸದ ಪ್ರಜ್ವಲ್​ ರೇವಣ್ಣ  ಅವರದ್ದು ಎನ್ನಲಾಗಿರುವ ಅಶ್ಲೀಲ ವಿಡಿಯೋಗಳಿರುವ ಪೆನ್​ಡ್ರೈವ್ (Pen Drive)​ ಪ್ರಕರಣ ರಾಜ್ಯದಲ್ಲಿ ಹಲ್​ಚಲ್​ ಸೃಷ್ಟಿಸಿದೆ. ಪ್ರಕರಣದ ತನಿಖೆಯನ್ನು ವಿಶೇಷ ತನಿಖಾ ದಳ (SIT) ನಡೆಸುತ್ತಿದೆ. ಪ್ರಕರಣದ ಕುರಿತು ಕೆಲ ಸಚಿವರ ಹೇಳಿಕೆಗಳು ತನಿಖೆಯ ತಪ್ಪಿಸುವ ಸಾಧ್ಯತೆ ಇದೆ. ಹೇಳಿಕೆಗಳಿಂದ ಪಕ್ಷಕ್ಕೂ ಕೂಡ ಡ್ಯಾಮೆಜ್ ಆಗುವ ಸಾಧ್ಯತೆ ಇದೆ. ಹೀಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಸಚಿವರಿಗೆ ಕೆಲ ಸೂಚನೆ ನೀಡಿದ್ದಾರೆ.

ಪೆನ್​ಡ್ರೈವ್ ಪ್ರಕರಣದಲ್ಲಿ ಅನಗತ್ಯವಾಗಿ ಪ್ರತಿಕ್ರಿಯೆ ಕೊಡಬೇಡಿ. ಮಾತು ಹೆಚ್ಚಾದರೆ ಇಡೀ ಪ್ರಕರಣದ ದಿಕ್ಕೇ ತಪ್ಪಿ ಹೋಗಬಹುದು. ಹೀಗಾಗಿ ಪ್ರತಿಕ್ರಿಯೆ ಕೊಡುವಾಗ ಎಚ್ಚರಿಕೆ ವಹಿಸಿ ಎಂದು ಮುಖಮಂತ್ರಿ ಸಿದ್ದರಾಮಯ್ಯ ಅವರು ಸಚಿವರಿಗೆ ಸಲಹೆ ನೀಡಿದ್ದಾರೆ. ಮುಖ್ಯಮಂತ್ರಿಗಳ ಈ ಸಲಹೆಯನ್ನು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್​​ ಮತ್ತು ಸಚಿವರು ಗಂಭೀರವಾಗಿ ಪರಿಗಣಿಸಿದ್ದಾರೆ.

ಇನ್ನು ಮಾಜಿ ಪ್ರಧಾನಿ ದೇವೇಗೌಡರ ಕುಟುಂಬ ಒಕ್ಕಲಿಗ ನಾಯಕರಾಗಿ ಗುರುತಿಸಿಕೊಂಡಿದೆ. ಇದೀಗ, ಹೆಚ್​ಡಿ ದೇವೇಗೌಡರ ಮಗ ಮತ್ತು ಮೊಮ್ಮಗ ಇಂತಹ ಪ್ರಕರಣದಲ್ಲಿ ಸಿಲುಕಿಕೊಂಡಿದ್ದು, ಸಹಜವಾಗಿ ಒಕ್ಕಲಿಗ ಸಮಾಜ ಕೂಡ ಮುಜುಗುರ ಪಡುವಂತಾಗಿದೆ. ಅಲ್ಲದೆ, ಹೆಚ್​ಡಿ ರೇವಣ್ಣ ಮತ್ತು ಪ್ರಜ್ವಲ್​ ರೇವಣ್ಣ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸುವಲ್ಲಿ ಡಿಕೆ ಶಿವಕುಮಾರ್​ ಅವರ ಪಾತ್ರವೂ ಇದೆ ಎಂಬ ಆರೋಪ ಕೇಳಿ ಬಂದಿದೆ. ಇದರಿಂದ ಒಕ್ಕಲಿಗರು ಡಿಕೆ ಶಿವಕುಮಾರ್​ ಮೇಲೆ ಮುನಿಸಿಕೊಳ್ಳಲು ಸಾಧ್ಯತೆ ಇದೆ. ಒಂದು ವೇಳೆ ಒಕ್ಕಲಿಗರು ಮುನಿಸಿಕೊಂಡರೆ ಕಾಂಗ್ರೆಸ್​ಗೆ ಹಳೇ ಮೈಸೂರು ಭಾಗದಲ್ಲಿ ನಷ್ಟವಾಗಲಿದೆ.

ಹೀಗಾಗಿ ಪ್ರಕರಣದಿಂದ ಅಂತರ ಕಾಯ್ದುಕೊಳ್ಳವಂತೆ ಡಿಕೆ ಶಿವಕುಮಾರ್​ ಅವರಿಗೆ ಒಕ್ಕಲಿಗ ನಾಯಕರು ಸಲಹೆ ನೀಡಿದ್ದಾರೆ. ಪೆನ್​ಡ್ರೈವ್​ ಕೇಸ್​ನಲ್ಲಿ ಮಾತನಾಡದಂತೆ ಸಲಹೆ ನೀಡಿದ್ದಾರೆ ಎಂದು ಟಿವಿ9ಗೆ ಮೂಲಗಳಿಂದ ಮಾಹಿತಿ ದೊರೆತಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ