ಪ್ರಜ್ವಲ್ ರೇವಣ್ಣಗೆ ಕಠೋರ ಶಿಕ್ಷೆ ನೀಡಿ: ನಾವು ಬೆಂಬಲಿಸುತ್ತೇವೆ; ಅಮಿತ್ ಶಾ
ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅಶ್ಲೀಲ ವಿಡಿಯೋ ಪ್ರಕರಣ ಕೋಲಾಹಲವನ್ನೇ ಸೃಷ್ಟಿಸಿದೆ. ರಾಜ್ಯವನ್ನೇ ತಲ್ಲಣಗೊಳಿಸುವ ಮೂಲಕ ದೇಶದೆಲ್ಲೆಡೆ ಸದ್ದು ಮಾಡುತ್ತಿದೆ. ವಿಚಾರಣೆಗೆ ಹಾಜರಾಗಿ ಎಂದು ತಂದೆ- ಮಗನಿಗೆ ಎಸ್‌ಐಟಿ ನೊಟೀಸ್ ನೀಡಿದೆ. ಆದರೆ ಫೇಸ್‌ಬುಕ್ ಮೂಲಕವೇ ಆರೋಪಿ ಪ್ರಜ್ವಲ್ ಪ್ರತ್ಯಕ್ಷವಾಗಿದ್ದು, ವಿಚಾರಣೆಗೆ ಸಮಯ ಕೇಳಿದ್ದಾರೆ. ಸದ್ಯ ಈ ವಿಚಾರವಾಗಿ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಮಾತನಾಡಿದ್ದು, ಮಹಿಳೆಯರ ಮೇಲೆ ದೌರ್ಜನ್ಯವೆಸಗಿದವರ ನಾವು ಇರುವುದಿಲ್ಲ. ಪ್ರಜ್ವಲ್ ರೇವಣ್ಣನಿಗೆ ಕಠೋರ ಶಿಕ್ಷೆ ನೀಡಿ, ನಾವು ಬೆಂಬಲಿಸುತ್ತೇವೆ ಎಂದು ಹೇಳಿದ್ದಾರೆ.
ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಹಾರಿಹೋಗಲು ಏಕೆ ಬಿಟ್ಟಿದ್ದೀರಿ? ರಾಜ್ಯ ಸರ್ಕಾರಕ್ಕೆ ಶಾ ಪ್ರಶ್ನೆ
ನಗರದಲ್ಲಿ ಆಯೋಜಿಸಲಾಗಿದ್ದ ಬಿಜೆಪಿ ಸಮಾವೇಶದಲ್ಲಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುತ್ತಿದ್ದಂತೆ ಪ್ರಜ್ವಲ್ ರೇವಣ್ಣನ ಪೆನ್ಡ್ರೈವ್ ಬಂತು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಯಾಕೆ ಕ್ರಮಕೈಗೊಳ್ಳಲಿಲ್ಲ. ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಹಾರಿಹೋಗಲು ಏಕೆ ಬಿಟ್ಟಿದ್ದೀರಿ ಎಂದು ಪ್ರಶ್ನಿಸಿದ್ದು, ಇಂತಹ ಪ್ರಕರಣದಲ್ಲೂ ಕಾಂಗ್ರೆಸ್ ರಾಜಕಾರಣ ಮಾಡುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ.
ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಲು ನಿಮಗೆ ಆಗದಿದ್ದಲ್ಲಿ ಹೇಳಿ ಕರ್ನಾಟಕವನ್ನು ನಾವು ಸುರಕ್ಷಿತವಾಗಿ ಇಡುತ್ತೇವೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ನೇಹಾ ಹಿರೇಮಠ ಕೊಲೆ ಪ್ರಕರಣ ಪ್ರಸ್ತಾಪಿಸಿದ ಅಮಿತ್ ಶಾ, ಏ.18ರಂದು ನೇಹಾಗೆ ಚಾಕುವಿನಿಂದ ಇರಿದು ಕೊಂದಿದ್ದ ಫಯಾಜ್. ನೇಹಾ ಹಿರೇಮಠ ಹಂತಕನಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಹೇಳಿದ್ದಾರೆ.
ಆತಂಕವಾದಕ್ಕೆ ಅಂತ್ಯ ಹಾಡಬೇಕೆಂದರೆ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡಬೇಕು. ಮೋದಿ ಮತ್ತೊಮ್ಮೆ ಪ್ರಧಾನಿ ಆಗಿದ್ದರಿಂದ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಯಿತು. ಮತ ಬ್ಯಾಂಕ್ ದೂರವಾಗುತ್ತೆ ಅಂತ ಸೋನಿಯಾ, ರಾಹುಲ್, ಖರ್ಗೆ ರಾಮ ಪ್ರಾಣ ಪ್ರತಿಷ್ಠಾಪನೆಯಿಂದ ದೂರ ಉಳಿದರು ಭ್ರಷ್ಟಾಚಾರ, ಪರಿವಾರವಾದದಲ್ಲಿ ಕಾಂಗ್ರೆಸ್ ಮುಳುಗಿತು. ಪ್ರಲ್ಹಾದ್ ಜೋಶಿಯನ್ನು ಮತ್ತೊಮ್ಮೆ ದೆಹಲಿಗೆ ಕಳಿಸಿ ಅವರಿಗೆ ಏನೂ ಮಾಡಬೇಕು ನಾವು ಮಾಡುತ್ತೇವೆ ಎಂದಿದ್ದಾರೆ.