ಬೆಂಗಳೂರು: ದೇಶಾದ್ಯಂತ ಭಾರಿ ಸದ್ದು ಮಾಡುತ್ತಿರುವ ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಸೆಕ್ಸ್ ವಿಡಿಯೋ ಪ್ರಕರಣ ರಾಜ್ಯದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದ್ದು, ರಾಜಕೀಯ ಆರೋಪ ಪ್ರತ್ಯಾರೋಪಗಳು ಜೋರಾಗಿವೆ.
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಲೀಕ್ ಆಗಲು ನನ್ನ ಪಾತ್ರವಿಲ್ಲ; ದೇವರಾಜೆಗೌಡರಿಂದ ಸುಳ್ಳು ಆರೋಪವೆಂದ ಡಿಕೆ ಶಿವಕುಮಾರ್
Twitter
Facebook
LinkedIn
WhatsApp
ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಬಿಡುಗಡೆ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಆರೋಪಿಸಿದ್ದು, ಈ ಆರೋಪವನ್ನು ಡಿಸಿಎಂ ಸ್ಪಷ್ಟವಾಗಿ ತಳ್ಳಿಹಾಕಿದ್ದಾರೆ.
ನನಗೂ, ಪೆನ್‌ಡ್ರೈವ್ ಬಿಡುಗಡೆ ಪ್ರಕರಣಕ್ಕೂ ಯಾವುದೇ ಸಂಬಂಧವಿಲ್ಲ. ನನ್ನ ವಿರುದ್ಧ ಆರೋಪಿಸಿರುವ ದೇವರಾಜೇಗೌಡ ಬಿಜೆಪಿ ಕಾರ್ಯಕರ್ತ ಎಂದು ಡಿಕೆ ಶಿವಕುಮಾರ್ ಅವರು ಸ್ಪಷ್ಟನೆ ನೀಡಿದ್ದಾರೆ.
ಬಿಜೆಪಿ-ಜೆಡಿಎಸ್ ನಾಯಕರ ಅಣತಿಯಂತೆ ದೇವರಾಜೇಗೌಡ ಅವರು ನನ್ನ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದಾರೆ. ನನ್ನ ವಿರುದ್ಧ ಮಾಡಿರುವ ಆಪಾದನೆಗಳು ಸುಳ್ಳು ಹಾಗೂ ಆಧಾರರಹಿತ. ದೇವರಾಜೇಗೌಡ ಈ ಹಿಂದೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ದೇವರಾಜೇಗೌಡ ಬಿಜೆಪಿಯ ಸಕ್ರಿಯ ಕಾರ್ಯಕರ್ತ. ಪ್ರಜ್ವಲ್ ಪ್ರಕರಣದಲ್ಲಿ ಜೆಡಿಎಸ್, ಮಿತ್ರ ಪಕ್ಷ ಬಿಜೆಪಿಗೂ ಬಹಳ ಮುಜುಗರ ಮತ್ತು ಮುಖಭಂಗ ಆಗಿದೆ. ಡ್ಯಾಮೇಜ್ ಕಂಟ್ರೋಲ್‌ಗೆ ಬಿಜೆಪಿ ಹಾಗೂ ಜೆಡಿಎಸ್ ನಾಯಕರು. ದೇವರಾಜೇಗೌಡ ಮೂಲಕ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ.
ಈ ಹಿಂದೆ ಇದೇ ದೇವರಾಜೇಗೌಡ ಸುದ್ದಿಗೋಷ್ಠಿ ನಡೆಸಿ ಪೆನ್ ಡ್ರೈವ್ ಇದೆ ಎಂದು ಹೇಳಿದ್ದರು. ಅಲ್ಲದೆ ಬಿಜೆಪಿ ನಾಯಕರ ಅನುಮತಿ ಪಡೆದು ಬಿಡುಗಡೆ ಮಾಡುವುದಾಗಿ ತಿಳಿಸಿದ್ದರು. ಹೀಗಿರುವಾಗ ನನಗೂ, ಪೆನ್ ಡ್ರೈವ್ ಬಿಡುಗಡೆಗೂ ಏನು ಸಂಬಂಧ? ಕೋತಿ ತಿಂದು ಮೇಕೆ ಬಾಯಿಗೆ ಒರೆಸಿತು ಎಂಬಂತೆ ದೇವರಾಜೇಗೌಡ ಮಾಡೋದೆಲ್ಲ ಮಾಡಿ ಈಗ ನನ್ನ ವಿರುದ್ಧ ಆರೋಪ ಮಾಡಿದ್ದಾರೆ. ಇದರ ಹಿಂದೆ ಬಿಜೆಪಿ-ಜೆಡಿಎಸ್ ನಾಯಕರ ಷಡ್ಯಂತ್ರ ಇದೆ. ಸದ್ಯ ನಾನು ಬೆಂಗಳೂರಿನಿಂದ ಹೊರಗಿದ್ದು, ಬಂದ ನಂತರ ಈ ಬಗ್ಗೆ ಮಾತಾಡುತ್ತೇನೆ ಎಂದು ಡಿಸಿಎಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Advocate Devaraje Gowda addressing a press meet on the ongoing alleged pen drive issue of MP Prajwal Revanna, in Bengaluru on Monday. @NewIndianXpress @XpressBengaluru @Cloudnirad @ramupatil_TNIE @AshwiniMS_TNIE pic.twitter.com/AtXW1qeRCX
— Shashidhar Byrappa (@ShashidharNIE) May 6, 2024