ಭಾನುವಾರ, ಮೇ 19, 2024
ಕಾಂಗ್ರೆಸ್ ನ ಅ೦ತರಿಕ ವರದಿ ಬಹಿರಂಗ: ಅಲ್ಪಸಂಖ್ಯಾತರ ಅತ್ಯಧಿಕ ಮತದಾನದ ಹೊರತಾಗಿಯೂ ತಂತ್ರಗಾರಿಕೆ ಇಲ್ಲದೆ ಮಂಗಳೂರು ಲೋಕಸಭೆಯಲ್ಲಿ ಎಡವಿತೇ ಕಾಂಗ್ರೆಸ್?-ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!

Twitter
Facebook
LinkedIn
WhatsApp
ಪ್ರಜ್ವಲ್ ರೇವಣ್ಣ ಪ್ರಕರಣದಲ್ಲಿ ದೇವೇಗೌಡ ಮತ್ತು ಕುಮಾರಸ್ವಾಮಿ ಹೆಸರು ಬಳಸದಂತೆ ಕೋರ್ಟ್ ಆದೇಶ.!

ತಮ್ಮ ವಿರುದ್ಧ ಸುದ್ದಿ ಪ್ರಸಾರ ಮಾಡದಂತೆ ನಿರ್ಬಂಧಕಾಜ್ಞೆಗೆ ಬೆಂಗಳೂರಿನ 34ನೇ ಸಿಟಿ ಸಿವಿಲ್ ಕೋರ್ಟ್​ನಲ್ಲಿ ಮನವಿ ಮಾಡಲಾಗಿತ್ತು. ಇದನ್ನು ಪರಿಗಣಿಸಿದ ಕೋರ್ಟ್, ಸಾಕ್ಷಿ ಇಲ್ಲದೇ ವಿಡಿಯೋ ಕೇಸ್​​​ನಲ್ಲಿ ಸುದ್ದಿ ಪ್ರಸಾರಿಸುವಂತಿಲ್ಲ ಎಚ್.ಡಿ.ದೇವೇಗೌಡ, ಎಚ್​ಡಿ ಕುಮಾರಸ್ವಾಮಿ ವಿರುದ್ಧ ಸುಳ್ಳು ಸುದ್ದಿ ಪ್ರಸಾರ ಮಾಡಬಾರದು. ಸತ್ಯಾಂಶವಿದ್ದು, ಸಾಕ್ಷ್ಯಗಳಿದ್ದರೆ ಮಾತ್ರ ಸುದ್ದಿ ಪ್ರಸಾರ ಮಾಡಬಹುದು ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ವಿಡಿಯೋಗಳ ವೈರಲ್ ಆಗುತ್ತಿದ್ದಂತೆಯೇ ಪ್ರಕರಣದ ಸಂದರ್ಭದಲ್ಲಿ ದೇವೇಗೌಡರ ಕುಟುಂಬದ ಹೆಸರುಗಳನ್ನು ಕೆಲವರು ಪ್ರಸ್ತಾಪ ಮಾಡುತ್ತಿದ್ದರು. ಇದರಿಂದ ಅವರ ಕುಟುಂಬಕ್ಕೆ ತೀವ್ರ ಮುಜುಗರವಾಗಿತ್ತು. ಅಲ್ಲದೆ, ಎಚ್‌.ಡಿ. ಕುಮಾರಸ್ವಾಮಿ ಅವರು ನೇರವಾಗಿಯೇ ಇದರ ಬಗ್ಗೆ ಕಿಡಿಕಾರಿದ್ದರು. ನಮ್ಮ ಕುಟುಂಬಕ್ಕೂ ರೇವಣ್ಣ ಕುಟುಂಬಕ್ಕೂ ಸಂಬಂಧ ಇಲ್ಲ, ಉಪ್ಪು ತಿಂದವರು ನೀರು ಕುಡಿಯಲೇಬೇಕೆಂದು ಕುಮಾರಸ್ವಾಮಿ ಹೇಳಿದ್ದಾರೆ. ಆದರೂ ಸಹ ಈಗ ತಮ್ಮ ಹೆಸರನ್ನು ಬಳಕೆ ಮಾಡದಂತೆ ಉಭಯ ನಾಯಕರು ಸೆಷನ್ಸ್ ಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದಾರೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ