ಶುಕ್ರವಾರ, ಮೇ 17, 2024
ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ-Gold Rate : ಚಿನ್ನದ ಬೆಲೆ ಮತ್ತಷ್ಟು ದುಬಾರಿ.!-ಅಮಿತ್ ಶಾ ಪ್ರಧಾನಿಯಾಗಲು ವೇದಿಕೆ ಸಜ್ಜಾಗಿದೆ; ಹೇಳಿಕೆ ಪುನರುಚ್ಚರಿಸಿದ ಕೇಜ್ರಿವಾಲ್..!-ಮನೆಯ ಬಾತ್ ರೂಂ ನಲ್ಲಿ ಕುತ್ತಿಗೆ ಕೊಯ್ದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ.!-ಪತ್ನಿಗೆ ವಿಡಿಯೋ ಕಾಲ್ ಮಾಡಿ ನೇಣು ಬಿಗಿದುಕೊಂಡಂತೆ ಹೆದರಿಸುವಾಗಲೇ ಪತಿ ಸಾವು..!-ಮೇ 31 ರಂದು ಕೇರಳಕ್ಕೆ ಪ್ರವೇಶಿಸಲಿದೆ ನೈರುತ್ಯ ಮುಂಗಾರು.!-ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೈದ ಸಚಿನ್ ತೆಂಡೂಲ್ಕರ್ ಸೆಕ್ಯುರಿಟಿ ಗಾರ್ಡ್.!-Gold Price: ಆಭರಣ ಪ್ರಿಯರಿಗೆ ಇಂದಿನ ಚಿನ್ನ - ಬೆಳ್ಳಿಯ ದರ ಹೇಗಿದೆ.!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

‘ಪ್ರತಾಪ್ ಸಿಂಹ ಅಯೋಗ್ಯ, ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು

Twitter
Facebook
LinkedIn
WhatsApp
 ‘ಪ್ರತಾಪ್ ಸಿಂಹ ಅಯೋಗ್ಯ, ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು
 

ಮೈಸೂರು: ಪ್ರತಾಪ್ ಸಿಂಹ  ಒಬ್ಬ ಅಯೋಗ್ಯ, ವಕೀಲ ವೃತ್ತಿ ಬಗ್ಗೆ ಅವನಿಗೇನು ಗೊತ್ತು ಎಂದು ವಿಧಾನ ಪರಿಷತ್ ಸದಸ್ಯ ಹೆಚ್. ವಿಶ್ವನಾಥ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ನಾವೆಲ್ಲರೂ ಒಟ್ಟಿಗೆ ಲಾ ಪ್ರಾಕ್ಟೀಸ್ ಮಾಡಿದ್ದೇವೆ. ಅವನಿಗೇನಾಗಿದೆ ಬಾಯಿಗೆ ಬಂದಂಗೆ ಮಾತನಾಡುತ್ತಾನೆ. ಮಹಾರಾಜರನ್ನು ಬಿಟ್ಟರೇ ನಾನೇ ಹೆಚ್ಚು ಕೆಲಸ ಮಾಡಿದ್ದೇನೆ ಎಂದು ಕೊಚ್ಚಿಕೊಳ್ಳುತ್ತಾನೆ.  ಈ ಎಂಪಿ ಕಾಲದಲ್ಲಿ ಏನೂ ಕೆಲಸವಾಗಿಲ್ಲ ಎಂದು ಆರೋಪಿಸಿದರು.
 

2014ರ ಚುನಾವಣೆಯಲ್ಲಿ ಸಿದ್ದರಾಮಯ್ಯ ಪ್ರಾಮಾಣಿಕವಾಗಿ ಕೆಲಸ ಮಾಡಿದ್ದರೆ, ನಾನು ಸೋಲುತ್ತಿರಲಿಲ್ಲ. ರಾಜ್ಯದ ಮಾನವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹರಾಜು ಹಾಕುತ್ತಿದ್ದೀರಾ, ನಿಮಗೆ ನಾಚಿಕೆ ಆಗುವುದಿಲ್ಲವಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಶಾಂತಿಯನ್ನು ಮಸೀದಿಯಲ್ಲಿ ಶಿವಲಿಂಗ ಹುಡುಕುವ ಮೂಲಕ ಕದಡಲಾಗುತ್ತಿದೆ. ಬಿಜೆಪಿ ವಕ್ತಾರರು ಬಾಯಿಗೆ ಬಂದ ರೀತಿ ಮಾತನಾಡುತ್ತಿದ್ದಾರೆ. ನಾಯಕರು ಇದಕ್ಕೆ ಕಡಿವಾಣ ಹಾಕಬೇಕು. ಈ ಬಗ್ಗೆ ಆರ್‌ಎಸ್‌ಎಸ್‌ ನಾಯಕರು ಪತ್ರಿಕಾಗೋಷ್ಠಿಯಲ್ಲಿ ಹೇಳಬೇಕು. ಮಸೀದಿಗಳಲ್ಲಿ ಶಿವಲಿಂಗ ಹುಡುಕುವುದನ್ನು ನಿಲ್ಲಿಸಿ ಅಂತಾ ಹೇಳಬೇಕು ಹರಿಹಾಯ್ದಿದ್ದಾರೆ.

ಭಾಗವತ್ ಅವರು ಕುಣಿಯೋದನ್ನು ನಿಲ್ಲಿಸಿ ಎಂದರೂ ನೀವು ಏಕೆ ಕುಣಿಯುತ್ತಿದೀರಾ? ಬೆಂಕಿ ಹಚ್ಚುವುದನ್ನು ನಿಲ್ಲಿಸಿ ಎಂದು ಮೋಹನ್ ಭಾಗವತ್ ಹೇಳಿದ್ದಾರೆ. ಆದರೂ ನೀವು ಬೆಂಕಿ ಹಚ್ಚುವ ಕೆಲಸ ನಿಲ್ಲಿಸುತ್ತಿಲ್ಲ. ಸದ್ಯಕ್ಕೆ ರಾಜ್ಯದ ಮಾನ ಅಂತರರಾಷ್ಟ್ರೀಯ ಮಟ್ಟದಲ್ಲಿ ಹರಾಜಾಗಿದೆ. ಈ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆ ಆಗುತ್ತಿದೆ. ಇಲ್ಲಿ ಆಡಳಿತದಲ್ಲಿರುವುದು ಬಿಜೆಪಿ ಸರ್ಕಾರವೇ ಹೊರತು, ಆರ್.ಎಸ್.ಎಸ್. ಸರ್ಕಾರವಲ್ಲ. ನಾವು 17 ಮಂದಿ ಬಿಜೆಪಿ ಸರ್ಕಾರ ಬೆಂಬಲಿಸಿ ಬಂದವರು. ನಾವು ಆರ್.ಎಸ್.ಎಸ್. ಬೆಂಬಲಿಸಿ ಬಂದವರಲ್ಲ ಎಂದು ಹೆಚ್.ವಿಶ್ವನಾಥ್ ವಾಗ್ದಾಳಿ ನಡೆಸಿದರು.

Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ