ಶನಿವಾರ, ಮೇ 18, 2024
ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಎಂಜಲು ಉಗುಳುವ ಬರದಲ್ಲಿ ತಲೆ ಸಿಕ್ಕಿಸಿಕೊಂಡು ಒದ್ದಾಡಿದ ಮಹಿಳೆ..!-ಇಂದು ನಡೆಯಲಿದೆ ಆರ್​ಸಿಬಿ ಮತ್ತು ಸಿಎಸ್​ಕೆ ಹೈ ವೋಲ್ಟೇಜ್ ಪಂದ್ಯ; ಆರ್ಸಿಬಿ ಇಂದು ಗೆಲ್ಲುವುದೇ..?-Ration card: ಮುಂದಿನ ತಿಂಗಳು ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸಲು ಅವಕಾಶ ; ಇಲ್ಲಿದೆ ಮಾಹಿತಿ-ಸರ್ಕಾರ ನನಗೆ ಸ್ಲೀಪಿಂಗ್ ಪಾಟ್ನರ್ ಆಗಿದೆ; ವಿತ್ತಸಚಿವೆ ನಿರ್ಮಲಾ ಸೀತಾರಾಮನ್ ಗೆ ಸ್ಟಾಕ್ ಬ್ರೋಕರ್ ಕೇಳಿದ ಪ್ರಶ್ನೆ ವೈರಲ್.!-ಎವರೆಸ್ಟ್ ಚಿಕನ್ ಮಸಾಲಾ ಬಳಸದಂತೆ ಆಹಾರ ಸುರಕ್ಷತಾ ಅಧಿಕಾರಿ ಸೂಚನೆ-Matthew Hayden: ಮ್ಯಾಥ್ಯೂ ಹೇಡನ್ ಅವರ ಮಗಳು ಎಸ್‌ಆರ್‌ಹೆಚ್ ಅಭಿಮಾನಿಗಳೊಂದಿಗೆ ಹೈದರಾಬಾದಿ ಬಿರಿಯಾನಿ ತಿನ್ನುವ ವಿಡಿಯೋ ವೈರಲ್!-ಅರವಿಂದ್ ಕೇಜ್ರಿವಾಲ್‌ ಆಪ್ತ ಸಹಾಯಕ ಬಿಭವ್‌ ಕುಮಾರ್‌ ಅರೆಸ್ಟ್‌-ಹುಬ್ಬಳ್ಳಿಯಲ್ಲಿ ಅಂಜಲಿ ಕೊಲೆ ಕೇಸ್; ಆರೋಪಿ ವಿಶ್ವನಾಥ್ ಬಂಧನ.!-ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅತ್ಯಾಚಾರ; ಅರ್ಚಕ ವಿರುದ್ಧ ಟಿವಿ ನಿರೂಪಕಿ ಆರೋಪ.!-ಕೋವ್ಯಾಕ್ಸಿನ್‌' ಪಡೆದ 30% ಜನರಲ್ಲೂ ಅಡ್ಡ ಪರಿಣಾಮ ಪತ್ತೆ; ಅಧ್ಯಯನ ವರದಿ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರತಿಭಟನೆಯ ಬಿಸಿ: ಅಗ್ನಿಪಥ ಯೋಜನೆಯ ಮೊದಲ ಬ್ಯಾಚ್‌ನ ವಯೋಮಿತಿ 23 ವರ್ಷಕ್ಕೆ ಏರಿಕೆ!

Twitter
Facebook
LinkedIn
WhatsApp
ಪ್ರತಿಭಟನೆಯ ಬಿಸಿ: ಅಗ್ನಿಪಥ ಯೋಜನೆಯ ಮೊದಲ ಬ್ಯಾಚ್‌ನ ವಯೋಮಿತಿ 23 ವರ್ಷಕ್ಕೆ ಏರಿಕೆ!

ನವದೆಹಲಿ: ಸೇನಾ ನೇಮಕಾತಿ ಅಗ್ನಿಪಥ ಹೊಸ ಮಾದರಿ ಯೋಜನೆಯ ವಿರುದ್ಧ ವ್ಯಾಪಕ ಪ್ರತಿಭಟನೆಗಳ ನಡುವೆ 2022ನೇ ಸಾಲಿನ ಅಗ್ನಿಪಥ ಯೋಜನೆಯಡಿ ನೇಮಕಾತಿಯ ಗರಿಷ್ಠ ವಯೋಮಿತಿಯನ್ನು ಕೇಂದ್ರ ಸರ್ಕಾರ 21 ವರ್ಷದಿಂದ 23 ವರ್ಷಕ್ಕೆ ಹೆಚ್ಚಿಸಿದೆ.

ಕಳೆದ ಮಂಗಳವಾರ ಯೋಜನೆಯನ್ನು ಅನಾವರಣಗೊಳಿಸಿದ್ದ ಕೇಂದ್ರ ಸರ್ಕಾರ, ಎಲ್ಲಾ ಹೊಸ ನೇಮಕಾತಿಗಳಿಗೆ ಪ್ರವೇಶ ವಯಸ್ಸು 17ರಿಂದ  21 ವರ್ಷದೊಳಗೆ ಇರಬೇಕು ಎಂದು ಹೇಳಿತ್ತು. ಇನ್ನು ಕಳೆದ ಎರಡು ವರ್ಷಗಳಿಂದ ನೇಮಕಾತಿ ಪ್ರಕ್ರಿಯೆಗಳು ನಡೆಯದೆ ಇದ್ದಿದ್ದರಿಂದ ಬಿಹಾರ, ಹರಿಯಾಣ ಸೇರಿದಂತೆ ದೇಶದ ಕೆಲ ರಾಜ್ಯಗಳಲ್ಲಿ ಯುವಕರು ಬೀದಿಗಿಳಿದು ಹಿಂಸಾತ್ಮಕ ಪ್ರತಿಭಟನೆ ನಡೆಸಿದ್ದರು. ಇದೆಲ್ಲವನ್ನು ಮನಗಂಡಿರುವ ಕೇಂದ್ರ ಸರ್ಕಾರ, 2022ರ ಪ್ರಸ್ತಾವಿತ ನೇಮಕಾತಿಗೆ ಒಂದು ಬಾರಿ ವಿನಾಯಿತಿ ನೀಡಲು ನಿರ್ಧರಿಸಿದೆ ಎಂದು ರಕ್ಷಣಾ ಸಚಿವಾಲಯದ ವಕ್ತಾರರು ತಿಳಿಸಿದ್ದಾರೆ.


2022 ರ ಅಗ್ನಿಪಥ್ ಯೋಜನೆಯಡಿ ನೇಮಕಾತಿ ಪ್ರಕ್ರಿಯೆಗೆ ಗರಿಷ್ಠ ವಯಸ್ಸಿನ ಮಿತಿಯನ್ನು 23 ವರ್ಷಕ್ಕೆ ಹೆಚ್ಚಿಸಲಾಗಿದೆ ಎಂದು ವಕ್ತಾರರು ತಿಳಿಸಿದ್ದಾರೆ. ದೇಶದ ಕೆಲ ರಾಜ್ಯಗಳಲ್ಲಿ ‘ಅಗ್ನಿಪಥ’ ಯೋಜನೆ ವಿರುದ್ದ ಯುವಕರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದರು. ಉದ್ರಿಕ್ತ ಯುವಕರು ಕೆಲ ರೈಲುಗಳಿಗೆ ಬೆಂಕಿ ಹಚ್ಚಿದ್ದು ಸಾರ್ವಜನಿಕರು ಮತ್ತು ಪೊಲೀಸ್ ವಾಹನಗಳ ಮೇಲೆ ದಾಳಿ ನಡೆಸಿದ್ದರು. ಇದರಿಂದ ಕೆಲ ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದರು.

ಬಿಹಾರದ ಆರಾದಿಂದ ಹರಿಯಾಣದ ಪಲ್ವಾಲ್‌ವರೆಗೆ, ಉತ್ತರ ಪ್ರದೇಶದ ಆಗ್ರಾದಿಂದ ಗ್ವಾಲಿಯರ್ ಮತ್ತು ಮಧ್ಯಪ್ರದೇಶದ ಗ್ವಾಲಿಯರ್ ಮತ್ತು ಇಂದೋರ್‌ವರೆಗೆ ಸಶಸ್ತ್ರ ಪಡೆಗಳಲ್ಲಿ ಉದ್ಯೋಗಕ್ಕಾಗಿ ನೂರಾರು ಯುವ ಆಕಾಂಕ್ಷಿಗಳು ಬೀದಿಗಿಳಿದು ಸಾರ್ವಜನಿಕ ಮತ್ತು ಖಾಸಗಿ ಆಸ್ತಿಯ ಮೇಲೆ ತಮ್ಮ ಕೋಪವನ್ನು ತೋರಿಸಿದ್ದರು. ನಾಲ್ಕು ವರ್ಷಗಳ ಕಡಿಮೆ ಅವಧಿಗೆ ಕಲ್ಪಿಸುವ ಯೋಜನೆಯ ವಿರುದ್ಧದ ಪ್ರತಿಭಟನೆಯ ಎರಡನೇ ದಿನವಾದ ಗುರುವಾರ, ಆಡಳಿತಾರೂಢ ಬಿಜೆಪಿ ಶಾಸಕ ಸೇರಿದಂತೆ, ರೈಲುಗಳಿಗೆ ಬೆಂಕಿ ಹಚ್ಚಿದ್ದರು. ಬಸ್‌ಗಳ ಕಿಟಕಿ ಗಾಜುಗಳನ್ನು ಒಡೆದು ಹಾಕಿದ್ದು ಬಿಹಾರದಲ್ಲಿ ದಾರಿಹೋಕರ ಮೇಲೆ ಕಲ್ಲು ತೂರಾಟ ನಡೆಸಿದ್ದರು.

ನಾವಡದಲ್ಲಿ ನ್ಯಾಯಾಲಯಕ್ಕೆ ತೆರಳುತ್ತಿದ್ದ ಬಿಜೆಪಿ ಶಾಸಕಿ ಅರುಣಾದೇವಿ ಅವರ ವಾಹನದ ಮೇಲೆ ಪ್ರತಿಭಟನಾಕಾರರು ದಾಳಿ ನಡೆಸಿದ್ದು, ಶಾಸಕರು ಸೇರಿದಂತೆ ಐವರು ಗಾಯಗೊಂಡಿದ್ದಾರೆ. ಇನ್ನು ಪಲ್ವಾಲ್ ಜಿಲ್ಲಾಧಿಕಾರಿ ನಿವಾಸದ ಮೇಲೆ ಕಲ್ಲು ತೂರಾಟ ನಡೆಸಿದ್ದು, ಐದು ಸರ್ಕಾರಿ ವಾಹನಗಳಿಗೆ ಪ್ರತಿಭಟನಾಕಾರರು ಬೆಂಕಿ ಹಚ್ಚಿದ್ದರು.


Click here to support us

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.!

ಪುತ್ತೂರು: ಪ್ರೇತ ಮದುವೆಗೆ ವರ ಬೇಕಾಗಿದ್ದಾನೆ; ಪತ್ರಿಕೆಯಲ್ಲಿ ಜಾಹೀರಾತು ಮೊರೆ ಹೋದ ಕುಟುಂಬಸ್ಥರು.! Twitter Facebook LinkedIn WhatsApp ಪುತ್ತೂರು : ವರ (Groom) ಬೇಕು, ವಧು (Bride) ಬೇಕಾಗಿದ್ದಾರೆ ಎಂಬಂತಹ ಅನೇಕ ಜಾಹೀರಾತುಗಳನ್ನು ನೀವು ಪತ್ರಿಕೆಗಳಲ್ಲಿ

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.!

ಪರಿಷತ್ ಚುನಾವಣೆಯಲ್ಲಿ ಪಕ್ಷೇತರ ಸ್ಪರ್ಧಿಸುವುದಾಗಿ ಘೋಷಿಸಿದ ರಘುಪತಿ ಭಟ್.! Twitter Facebook LinkedIn WhatsApp ಉಡುಪಿ: ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ

ಅಂಕಣ