ಸೋಮವಾರ, ಏಪ್ರಿಲ್ 29, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರಮಾಣವಚನ ಸ್ವೀಕರಿಸಿದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್

Twitter
Facebook
LinkedIn
WhatsApp
aa 1

ಬೆಂಗಳೂರು: ರಾಜ್ಯದ ನೂತನ ಕಾಂಗ್ರೆಸ್​ ಸರ್ಕಾರದ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ (Siddaramaiah) ಅವರು ಶನಿವಾರ ಮಧ್ಯಾಹ್ನ ಪ್ರಮಾಣವಚನ ಸ್ವೀಕರಿಸಿದರು. ಅವರೊಂದಿಗೆ ಉಪ ಮುಖ್ಯಮಮತ್ರಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ (DK Shivakumar) ಅವರೂ ಪ್ರತಿಜ್ಞಾವಿಧಿ ಸ್ವೀಕರಿಸಿದರು. ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಜತೆಗೆ ಎಂಟು ಮಂದಿ ಶಾಸಕರು ಸಚಿವರಾಗಿಯೂ ಪದಗ್ರಹಣ ಮಾಡಿದರು. ಇದರೊಂದಿಗೆ, ರಾಜ್ಯದಲ್ಲಿ ಹೊಸ ಸರ್ಕಾರ (Congress Govt) ಅಧಿಕೃತವಾಗಿ ಅಸ್ತಿತ್ವಕ್ಕೆ ಬಂದಂತಾಗಿದೆ. ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕಾಂಗ್ರೆಸ್ ನಾಯಕರು, ರಾಜ್ಯ ಕಾಂಗ್ರೆಸ್ ನಾಯಕರು, ಕಾರ್ಯಕರ್ತರು, ಬೆಂಬಲಿಗರು ಸೇರಿದಂತೆ ಲಕ್ಷಾಂತರ ಮಂದಿ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾದರು.

ದೇವರ ಹೆಸರಿನಲ್ಲಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕರಿಸಿದರೆ, ಶ್ರೀ ಗಂಗಾಧರ ಅಜ್ಜನ ಹೆಸರಿನಲ್ಲಿ ಡಿಕೆ ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆ.ಸಿ.ವೇಣುಗೋಪಾಲ್, ರಣದೀಪ್ ಸುರ್ಜೇವಾಲ ಹಾಗೂ ಇತರರ ಉಪಸ್ಥಿತಿಯಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನೆರವೇರಿತು. ಜತೆಗೆ, ರಾಜಸ್ಥಾನ ಸಿಎಂ ಅಶೋಕ್ ಗೆಹ್ಲೋಟ್, ಛತ್ತೀಸ್‌ಗಢ ಸಿಎಂ ಭೂಪೇಶ್ ಬಘೇಲ್, ಬಿಹಾರ ಸಿಎಂ ನಿತೀಶ್, ಹಿಮಾಚಲಪ್ರದೇಶದ ಸಿಎಂ ಸುಖ್‌ವಿಂದರ್ ಸಿಂಗ್ ಸುಖು, ಪುದುಚೆರಿ ಸಿಎಂ ರಂಗಸ್ವಾಮಿ, ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್‌, ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಹಾಗೂ ಇನ್ನೂ ಅನೇಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ನಾಯಕರು ಬಿಟ್ಟು ಉಳಿದವರು ಚುನಾವಣಾ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಿಸಿರಲಿಲ್ಲ. ಒಂದು ಹಂತದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪರ ಪ್ರಚಾರ ಕೈಗೊಳ್ಳುವುದಾಗಿ ಹೇಳಿದ್ದ ಬಿಹಾರ ಸಿಎಂ ನಿತೀಶ್ ಕುಮಾರ್ ಸಹ ನಂತರ ಪ್ರಚಾರಕ್ಕೆ ಬಂದಿರಲಿಲ್ಲ. ಇದೀಗ ಅವರೆಲ್ಲ ಪ್ರಮಾಣವಚನ ಸ್ವೀಕಾರ ಸಮಾರಂಭಕ್ಕೆ ಸಾಕ್ಷಿಯಾಗಿದ್ದಾರೆ.

ಮೇ 10ರಂದು ನಡೆದಿದ್ದ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಮೇ 13ರಂದು ಪ್ರಕಟವಾಗಿತ್ತು. ಕಾಂಗ್ರೆಸ್ ಪಕ್ಷವು 135 ಸ್ಥಾನ ಪಡೆದು ಭರ್ಜರಿ ಬಹುಮತ ಗಳಿಸಿತ್ತು. ನಂತರ ಮುಖ್ಯಮಂತ್ರಿ ಸ್ಥಾನಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವೆ ಪ್ರಬಲ ಪೈಪೋಟಿ ನಡೆದಿತ್ತು. ಇವರಿಬ್ಬರ ಮನವೊಲಿಸುವುದೇ ಹೈಕಮಾಂಡ್​​ಗೆ ಬಹುದೊಡ್ಡ ಸವಾಲಾಗಿತ್ತು. ದೆಹಲಿಯಲ್ಲಿ ಮೂರು ದಿನಗಳ ಕಾಲ ನಡೆದ ಸರಣಿ ಮಾತುಕತೆಗಳ ನಂತರ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯನ್ನಾಗಿಯೂ ಡಿಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯನ್ನಾಗಿಯೂ ಮನವೊಲಿಸುವಲ್ಲಿ ಹೈಕಮಾಂಡ್ ಯಶಸ್ವಿಯಾಗಿತ್ತು.

ನೂತನ ಸರ್ಕಾರದ ಪ್ರಮಾಣವಚನ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದವರ ಪೈಕಿ ಹೆಚ್ಚಿವರು ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡವರಾಗಿದ್ದಾರೆ. ಕೆಜೆ ಜಾರ್ಜ್, ಎಂಬಿ ಪಾಟೀಲ್, ಸತೀಶ್ ಜಾರಕಿಹೊಳಿ, ಪ್ರಿಯಾಂಕ್ ಖರ್ಗೆ, ರಾಮಲಿಂಗಾ ರೆಡ್ಡಿ ಹಾಗೂ ಬಿಝಡ್ ಜಮೀರ್ ಅಹ್ಮದ್ ಸಿದ್ದರಾಮಯ್ಯ ಬಣದಲ್ಲಿ ಗುರುತಿಸಿಕೊಂಡವರಾಗಿದ್ದಾರೆ. ಉಳಿದಂತೆ ಡಾ. ಜಿ ಪರಮೇಶ್ವರ, ಕೆಹೆಚ್ ಮುನಿಯಪ್ಪ ಅಧಿಕಾರ ಸ್ವೀಕರಿಸಿದ್ದಾರೆ. ಇದರೊಂದಿಗೆ, ಹೈಕಮಾಂಡ್​​ ಮನವೊಲಿಸಿ ಸಿಎಂ ಪಟ್ಟ ಗಿಟ್ಟಿಸಿಕೊಳ್ಳುವಲ್ಲಿ ಸಫಲರಾಗಿರುವ ಸಿದ್ದರಾಮಯ್ಯ, ಸಂಪುಟ ರಚನೆಯಲ್ಲಿಯೂ ಮೇಲುಗೈ ಸಾಧಿಸಿದಂತಾಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ