ಶುಕ್ರವಾರ, ಮೇ 10, 2024
ಕರ್ನಾಟಕ ಬಿಜೆಪಿ ಸಾಮಾಜಿಕ ಜಾಲತಾಣದ ಸಂಚಾಲಕ ಪೊಲೀಸ್ ವಶಕ್ಕೆ; ಏನಿದು ಪ್ರಕರಣ?-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಬಿವೈ.ರಾಘವೇಂದ್ರ ವಿರುದ್ಧ ಪಕ್ಷೇತರ ಅಭ್ಯರ್ಥಿ ಈಶ್ವರಪ್ಪ ಚುನಾವಣಾಧಿಕಾರಿಗಳಿಗೆ ದೂರು..!-ಕ್ಯಾಮೆರಾಗಳ ಮುಂದೆನೇ ನಾಯಕ ಕೆ ಎಲ್ ರಾಹುಲ್ ಗೆ ತರಾಟೆಗೆ ತೆಗೆದುಕೊಂಡ LSG ಮಾಲೀಕ ; ಅಭಿಮಾನಿಗಳು ಆಕ್ರೋಶ..!-ಮನೆಯಲ್ಲಿ ನೇಣುಬಿಗಿದುಕೊಂಡು ಅತಿಥಿ ಉಪನ್ಯಾಸಕಿ ಆತ್ಮಹತ್ಯೆ-SSLC ಪಲಿತಾಂಶ ಪ್ರಕಟ; ಇಲ್ಲಿದೆ ಲಿಂಕ್-ಕೋವಿಶೀಲ್ಡ್‌ ಲಸಿಕೆ ಪಡೆದವರಲ್ಲಿ ಅಡ್ಡಪರಿಣಾಮದ ಬಗ್ಗೆ ಪ್ಯಾಕ್‌ ಮೇಲೇ ಸ್ಪಷ್ಟನೆ ನೀಡಿದ್ದೇವು: ಸೀರಂ-ಜೆಪಿ ನಡ್ಡಾ ಮತ್ತು ಅಮಿತ್ ಮಾಲವೀಯಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರು ಪೊಲೀಸರಿಂದ ಸಮನ್ಸ್.!-ಇಂದು SSLC ಪಲಿತಾಂಶ ಪ್ರಕಟ; ಎಷ್ಟು ಹೊತ್ತಿಗೆ ಪಲಿತಾಂಶ ಪ್ರಕಟವಾಗಲಿದೆ.?-Gold Price: ದುಬಾರಿಯಾಗಿದ್ದ ಚಿನ್ನದ ದರ ಇಂದು ಹೇಗಿದೆ.?
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

ಪ್ರವೀಣ್‌ ನೆಟ್ಟಾರು ಪತ್ನಿ ನೇಮಕಾತಿ ರದ್ದು

Twitter
Facebook
LinkedIn
WhatsApp
32

ಬೆಂಗಳೂರು: ಮುಖ್ಯಮಂತ್ರಿಗಳ ವಿಶೇಷ ಅಧಿಕಾರದಲ್ಲಿ ಸರ್ಕಾರಿ ಉದ್ಯೋಗಕ್ಕೆ ತಾತ್ಕಾಲಿಕವಾಗಿ ನೇಮಕಗೊಂಡಿದ್ದ ದಕ್ಷಿಣ ಕನ್ನಡದ ಬಿಜೆಪಿ (BJP) ಮುಖಂಡ ದಿ.ಪ್ರವೀಣ್‌ ನೆಟ್ಟಾರ್‌ (Praveen Nettaru) ಅವರ ಪತ್ನಿ ನೂತನ ಅವರ ನೇಮಕಾತಿಯನ್ನು ಸರ್ಕಾರ ರದ್ದು ಮಾಡಿದೆ. ಈ ಹಿಂದಿನ ಬಸವರಾಜ ಬೊಮ್ಮಾಯಿ (Basavaraj Bommai) ಸರ್ಕಾರ ಮಾನವೀಯ ದೃಷ್ಠಿಯಿಂದ 2022 ರ ಸೆ.22 ರಂದು ಗುತ್ತಿಗೆ ಆಧಾರದಲ್ಲಿ ಗ್ರೂಪ್ ಸಿ ಹುದ್ದೆಗೆ ನೇಮಕ ಮಾಡಿತ್ತು. ಈ ಹಿನ್ನೆಲೆ ನೂತನ ಅವರು ದಕ್ಷಿಣ ಕನ್ನಡ ಜಿಲ್ಲಾಡಳಿತ ಕಛೇರಿಯ ಪ್ರಾಕೃತಿಕ ವಿಕೋಪ ವಿಭಾಗದದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆದರೆ ಇದೀಗ ಹೊಸ ಸರ್ಕಾರ ಬಂದಿದ್ದು ನೂತನ ಅವರನ್ನು ಕೆಲಸದಿಂದ ವಜಾ ಮಾಡಿದೆ.

ಬಿಜೆಪಿ ಮುಖಂಡ ಪ್ರವೀಣ್‌ ನೆಟ್ಟಾರು ಅವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿದ ಘಟನೆ ಬಳಿಕ ಕಾರ್ಯಕರ್ತರ ಆಕ್ರೋಶ ಬಿಜೆಪಿ ಮುಖಂಡರ ಕಡೆಗೆ ತಿರುಗಿತ್ತು. ಈ ವೇಳೆ ಘಟನೆಯ ಸಮಗ್ರ ತನಿಖೆಯನ್ನು ಅಂದಿನ ಬಿಜೆಪಿ ಸರ್ಕಾರ ರಾಷ್ಟ್ರೀಯ ತನಿಖಾ ಏಜೆನ್ಸಿಗೆ ವಹಿಸಿತ್ತು.

ಅಲ್ಲದೆ ಪ್ರವೀಣ್‌ ನೆಟ್ಟಾರು ಕುಟುಂಬಕ್ಕೆ ಬಿಜೆಪಿ ವತಿಯಿಂದ ಕನಸಿನ ಮನೆ ನಿರ್ಮಾಣ ಹಾಗೂ ಪ್ರವೀಣ್‌ ಪತ್ನಿಗೆ ಮಾನವೀಯ ನೆಲೆಯಲ್ಲಿ ಸಿಎಂ ಅವರ ವಿಶೇಷಾಧಿಕಾರ ಬಳಸಿ ಸರ್ಕಾರಿ ಕೆಲಸ ಕೊಡಿಸುವುದಾಗಿ ಸಂಸದ, ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಭರವಸೆ ನೀಡಿದ್ದರು. ಅದರಂತೆ ಮುಖ್ಯಮಂತ್ರಿಗಳ ಜತೆ ಮಾತುಕತೆ ನಡೆಸಿದ್ದರು.

ಅಲ್ಲದೇ ಪ್ರವೀಣ್ ನೆಟ್ಟಾರ್ ಪತ್ನಿಗೆ ಸರ್ಕಾರದ ವತಿಯಿಂದ ಕೆಲಸ ಕೊಡಬೇಕು ಎಂಬ ಕೂಗು ಸಾಮಾಜಿಕ ಜಾಲತಾಣದಲ್ಲಿ ಕೇಳಿ ಬಂದಿತ್ತು. ಬಿಜೆಪಿ ಮತ್ತು ಹಿಂದುತ್ವ ಪರ ಕಾರ್ಯಕರ್ತರು ಈ ಬಗ್ಗೆ ಅಭಿಯಾನವನ್ನೂ ನಡೆಸಿದ್ದರು. ಇದನ್ನು ವಿಶೇಷ ಪ್ರಕರಣ ಎಂದು ಪರಿಗಣಿಸಿ ಮುಖ್ಯಮಂತ್ರಿ ಕಚೇರಿಯಲ್ಲೇ ವಿಶೇಷ ನೇಮಕಾತಿ ನಡೆಸಿ 2022ರ ಸೆ.22ರಂದು ಅಂದಿನ ಸಿಎಂ ಬಸವರಾಜ ಬೊಮ್ಮಾಯಿ ಆದೇಶ ಹೊರಡಿಸಿದ್ದರು.

ಇದೀಗ ಹೊಸ ಸರ್ಕಾರ ಬಸವರಾಜ ಬೊಮ್ಮಾಯಿ ಸರ್ಕಾರದ ತಾತ್ಕಾಲಿಕ ನೆಲೆಯ ನೇಮಕಾತಿಯನ್ನು ರದ್ದುಗೊಳಿಸಿದ್ದು, ಪ್ರವೀಣ್ ನೆಟ್ಟಾರ್ ಪತ್ನಿ ನೂತನರನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಸರ್ಕಾರ ಬದಲಾದ್ದರಿಂದ ಹಿಂದಿನ ತಾತ್ಕಾಲಿಕ ನೇಮಕಾತಿಗಳು ಸಹಜವಾಗಿ ರದ್ದುಗೊಳ್ಳುವುದು ಕ್ರಮ. ಎಲ್ಲರಂತೆ ಇವರದ್ದು ಕೂಡ ಅದೇ ರೀತಿ ಆಗಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ