ಭಾನುವಾರ, ಏಪ್ರಿಲ್ 28, 2024
ಅಶ್ಲೀಲ ವಿಡಿಯೋ ಹಂಚಿಕೆ ಪ್ರಕರಣ; ಪ್ರಜ್ವಲ್ ರೇವಣ್ಣ ಜೊತೆಗೆ ಹೆಚ್​​ಡಿ ರೇವಣ್ಣ ವಿರುದ್ಧವೂ ಎಫ್ಐಆರ್‌ ದಾಖಲು..!-ಮಂಗಳೂರು ಲೋಕಸಭೆ 2024: ಎಲ್ಲರ ಚಿತ್ತ ಬೆಳ್ತಂಗಡಿ-ಮೂಡಬಿದ್ರಿ ಬಿಲ್ಲವ ಮತಗಳ ಕಡೆಗೆ . ಚುನಾವಣಾ ದಿಕ್ಕನ್ನು ನಿರ್ಧರಿಸಲಿದೆ ಬೆಳ್ತಂಗಡಿ -ಮೂಡಬಿದ್ರಿ !.-ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದಿಂದ ಸರ್ಕಾರಕ್ಕೆ ಪತ್ರ; ಜರ್ಮನಿಗೆ ಹಾರಿದ ಪ್ರಜ್ವಲ್‌ ರೇವಣ್ಣ!-ಮದುವೆ ಆಮಂತ್ರಣದಲ್ಲಿ ಚುನಾವಣಾ ಪ್ರಚಾರ : ನೀತಿ ಸಂಹಿತೆಯಡಿ ಪ್ರಕರಣ ದಾಖಲು-ನೋಟಾ, ಅತಿ ಹೆಚ್ಚು ಅಲ್ಪಸಂಖ್ಯಾತರ ಮತದಾನ, ಮೂಡಬಿದ್ರೆ- ಬೆಳ್ತಂಗಡಿಯಲ್ಲಿ ಬಿಲ್ಲವರ ಅತಿ ಹೆಚ್ಚು ಮತದ ಬಗ್ಗೆ ಕಾಂಗ್ರೆಸ್ ನಿರೀಕ್ಷೆ.ಆ ಮೂಲಕ ಗೆಲುವಿನ ಭರವಸೆ!-ಬಿಜೆಪಿಯ ಬಣ ರಾಜಕೀಯ, ನೋಟಾ, ಸತ್ಯಜಿತ್ , ಗ್ಯಾರೆಂಟಿ, ಬಿಲ್ಲವ ಟ್ರಂಪ್ ಕಾರ್ಡ್ , ಅಲ್ಪಸಂಖ್ಯಾತರ ಬೂತುಗಳ ಹೆಚ್ಚಿನ ಮತದಾನ ಸಹಾಯ ಪಡೆದು ಮಂಗಳೂರು ಲೋಕಸಭೆಯಲ್ಲಿ ಪದ್ಮರಾಜ್ ವಿಜಯ ಪತಾಕೆ ಹಾರಿಸಬಹುದೇ?-ಲೋಕಸಭೆ ಚುನಾವಣೆ; ರಾಜ್ಯದಲ್ಲಿ ಇಂದು 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ-ಕರ್ಬೂಜ ಹಣ್ಣಿನಲ್ಲಿರುವ ವಿಶೇಷವಾದ ಆರೋಗ್ಯಕಾರಿ ಲಾಭಗಳೆಷ್ಟು.?-ಜೆಡಿಯು ಯುವ ಮುಖಂಡ ಸೌರಭ್​ ಕುಮಾರ್ ಗುಂಡಿಕ್ಕಿ ಹತ್ಯೆ..!-Rain Alert: ರಾಜ್ಯದ ಹಲವು ಜಿಲ್ಲೆಗಳಲ್ಲಿ 4 ದಿನಗಳ ಕಾಲ ಮುನ್ಸೂಚನೆ..!
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

Select Lanuage:

​​​ಪ್ರವೀಣ್‌ ನೆಟ್ಟಾರು ಪತ್ನಿಯನ್ನು ಕೆಲಸಕ್ಕೆ ಮರುನೇಮಕ ಮಾಡಿಕೊಳ್ಳಲಾಗುವುದು - ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

Twitter
Facebook
LinkedIn
WhatsApp
Ravi Bopara 3 14

ಬೆಂಗಳೂರು : ” ಪ್ರವೀಣ್‌ ನೆಟ್ಟಾರು ಅವರ ಪತ್ನಿ ನೂತನ ಕುಮಾರಿ ಅವರ ಕೆಲಸದ ವಿಚಾರವಾಗಿ ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ಮರು ನೇಮಕ ಮಾಡಲಾಗುವುದು ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.

ಈ ಕುರಿತು ಶನಿವಾರ ಸಂಜೆ ಟ್ವೀಟ್‌ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ” ಹೊಸ ಸರ್ಕಾರ ಬಂದ ನಂತರ ಹಿಂದಿನ ಸರ್ಕಾರ ನೇಮಕ ಮಾಡಿಕೊಂಡಿದ್ದ ತಾತ್ಕಾಲಿಕ ನೌಕರರನ್ನು ಸರ್ಕಾರಿ ಸೇವೆಯಿಂದ ವಜಾ ಮಾಡುವುದು ಒಂದು ಸಹಜ ಪ್ರಕ್ರಿಯೆ. ಪ್ರವೀಣ್ ನೆಟ್ಟಾರು ಅವರ ಪತ್ನಿ ಮಾತ್ರವಲ್ಲ ಸುಮಾರು 150ಕ್ಕೂ ಹೆಚ್ಚು ಗುತ್ತಿಗೆ ನೌಕರರನ್ನು ಈಗಾಗಲೇ ಸೇವೆಯಿಂದ ವಜಾ ಮಾಡಲಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ಹಸ್ತಕ್ಷೇಪವಿಲ್ಲ. ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಮಾನವೀಯತೆ ಆಧಾರದಲ್ಲಿ ನೂತನ ಕುಮಾರಿ ಅವರ ಮರು ನೇಮಕ ಮಾಡಲಾಗುವುದು.” ಎಂದು ತಿಳಿಸಿದ್ದಾರೆ.

ಪ್ರವೀಣ್‌ ನೆಟ್ಟಾರು ಪತ್ನಿಯ ಗುತ್ತಿಗೆ ಕೆಲಸವು ಕೈತಪ್ಪಿರುವ ವಿಚಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಬಿಜೆಪಿ ಕಾಂಗ್ರೆಸ್‌ ಪಕ್ಷಗಳು ಒಬ್ಬರ ಮೇಲೆ ಮತ್ತೊಬ್ಬರು ಆರೋಪ ಮಾಡುತ್ತಿದ್ದರು. ಸಾಮಾಜಿಕ ಜಾಲತಾಣಗಳಲ್ಲಿ ಪರ ವಿರೋಧ ಚರ್ಚೆಗಳ ಸಾಕಷ್ಟು ಪೋಸ್ಟ್‌ಗಳು ವೈರಲ್‌ ಆಗಿದ್ದವು.

ಕೆಪಿಸಿಸಿ ಟ್ವೀಟ್‌ನಲ್ಲಿ ಏನಿದೆ?

ಪ್ರವೀಣ್‌ ನೆಟ್ಟಾರು ಕುಟುಂಬದ ಬಗ್ಗೆ ಕಾಳಜಿ ಇದ್ದ ಬಿಜೆಪಿ ತಾತ್ಕಾಲಿಕ ಗುತ್ತಿಗೆ ಕೆಲಸ ನೀಡಿದ್ದೇಕೆ ಎಂದು ಪ್ರಶ್ನಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಕಮಿಟಿ (ಕೆಪಿಸಿಸಿ) ಈಗ ನೆಟ್ಟಾರು ಕುಟುಂಬಕ್ಕೆ ರಾಜ್ಯ ಬಿಜೆಪಿ ಕಚೇರಿಯಲ್ಲಿಯೇ ಶಾಶ್ವತ ಕೆಲಸ ಕೊಟ್ಟು ಭದ್ದತೆಯನ್ನು ಪ್ರದರ್ಶಿಸಲಿ ಎಂದು ತಿರುಗೇಟು ನೀಡಿದೆ

ಶನಿವಾರ ಸಂಜೆ ಟ್ವೀಟ್‌ ಮಾಡಿರುವ ಕೆಪಿಸಿಸಿ, ” ಪ್ರವೀಣ್ ನೆಟ್ಟಾರು ಬಿಜೆಪಿ ಕಾರ್ಯಕರ್ತ, ಬಿಜೆಪಿಗೆ ನಿಜಕ್ಕೂ ಆತನ ಕುಟುಂಬದ ಮೇಲೆ ಕಾಳಜಿ ಇದ್ದಿದ್ದೇ ಆದರೆ ತಾತ್ಕಾಲಿಕ ಕೆಲಸ ನೀಡಿ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿರಲಿಲ್ಲ. ಈಗಲೂ ಕಾಲ ಮಿಂಚಿಲ್ಲ ಕರ್ನಾಟಕ ರಾಜ್ಯ ಬಿಜೆಪಿ ಕಚೇರಿಯಲ್ಲೆ ಉತ್ತಮ ವೇತನದೊಂದಿಗೆ ಶಾಶ್ವತ ಉದ್ಯೋಗ ಕಲ್ಪಿಸಲಿ. ಬಿಜೆಪಿ ತನ್ನ ಭದ್ದತೆಯನ್ನು ಪ್ರದರ್ಶಿಸಲಿ’ ಎಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ