ಗುರುವಾರ, ನವೆಂಬರ್ 21, 2024
ಟೆಸ್ಲಾ ಕಾರು ಅಪಘಾತ, ಗುಜರಾತ್ ಮೂಲದ ನಾಲ್ವರ ದುರ್ಮರಣ!-ರೂಪೇಶ್ ಶೆಟ್ಟಿಯ ‘ಜೈ' ತುಳು ಸಿನಿಮಾಕ್ಕೆ ನಾಯಕಿಯಾಗಿ ಅದ್ವಿತಿ ಶೆಟ್ಟಿ ಎಂಟ್ರಿ!-ಸ್ನೇಹಿತೆಯರ ಜತೆ ಸೆಲ್ಫಿ: ಕೆರೆ ಕೋಡಿಯಲ್ಲಿ ಕೊಚ್ಚಿ ಹೋಗಿದ್ದ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ರಕ್ಷಣೆ-ದಾಖಲೆ ಬರೆದ ತೇಜಸ್ವಿ ಸೂರ್ಯ, 'ಐರನ್‌ ಮ್ಯಾನ್‌ 70.3 ರೇಸ್‌' ಪೂರ್ಣಗೊಳಿಸಿದ ಮೊದಲ ಸಂಸದ-ಟೆಕ್ನಾಲಜಿ ಬದಲಾದ್ರೆ ಸಾಕಾ? ರಾಜಕೀಯ, ರಾಜಕಾರಣಿಗಳು ಬದಲಾಗಬಾರದಾ? ಸಂಚಲನ ಸೃಷ್ಟಿಸಿದ ದಳಪತಿ ವಿಜಯ್-ಉಪ ಚುನಾವಣೆಯಲ್ಲಿ ಗೆದ್ದರೆ ಡಿಕೆಶಿ ಸಿಎಂ, ಸಂಚಲನ ಮೂಡಿಸಿದ ಕೈ ಶಾಸಕನ ಹೇಳಿಕೆ!-ಶಿಗ್ಗಾಂವಿ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್ ಬಂಡಾಯ ಶಮನ; ಅಕ್ಟೋಬರ್ 30ರಂದು ನಾಮಪತ್ರ ವಾಪಸ್ ಪಡೆದುಕೊಳ್ಳುತ್ತಾರಾ ಖಾದ್ರಿ?-19 ವರ್ಷದ ಗೆಳತಿಯನ್ನು ಕೊಂದು ಹೂತಿಟ್ಟ ಪ್ರಿಯಕರ, ಸಹಚರನ ಬಂಧನ-ಲವರ್ ಜತೆ ಸೇರಿ ಪ್ರತಿನಿತ್ಯ ಊಟದಲ್ಲಿ ವಿಷ ಬೆರೆಸಿ ತಾಳಿ ಕಟ್ಟಿದವನನ್ನೇ ಕೊಂದಳು!-ಕಾಂಗ್ರೆಸ್ ಶಾಸಕ ಸತೀಶ್ ಸೈಲ್‌ಗೆ 7 ವರ್ಷ ಜೈಲು ಶಿಕ್ಷೆ
ಬ್ರೇಕಿಂಗ್ ನ್ಯೂಸ್
{"ticker_effect":"slide-v","autoplay":"true","speed":3000,"font_style":"normal"}

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ; ಆರೋಪಿಗಳು ಎನ್ಐಎ ಕೋರ್ಟ್ ಗೆ ಶರಣಾಗುವಂತೆ 2 ನೇ ನೋಟಿಸ್!

Twitter
Facebook
LinkedIn
WhatsApp
Untitled 30

ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿರುವ ಆರೋಪಿಗಳಿಗೆ ರಾಷ್ಟ್ರೀಯ ತನಿಖಾ ಏಜೆನ್ಸಿ (ಎನ್‌ಐಎ) ಆ.18ರೊಳಗೆ ಶರಣಾಗುವಂತೆ ಎರಡನೇ ಬಾರಿ ನೋಟಿಸ್ ನೀಡಿದೆ.

ಎನ್‌ಐಎ ಕೋರ್ಟ್ ಆದೇಶದಂತೆ ಜು. 15 ರಂದು ಎನ್‌ಐಎ ಅಧಿಕಾರಿಗಳು ತಲೆಮರೆಸಿಕೊಂಡಿರುವ ಆರೋಪಿಗಳ ಮನೆಗೆ ಎಚ್ಚರಿಕೆ ನೋಟಿಸ್ ಅಂಟಿಸಿದ್ದಾರೆ, ಅಲ್ಲದೆ ಧ್ವನಿ ವರ್ಧಕ ಮೂಲಕವೂ ಎಚ್ಚರಿಕೆ ನೀಡಿದ್ದಾರೆ.

ಜೂನ್‌ನಲ್ಲಿ ಮೊದಲ ಬಾರಿಗೆ ಎನ್‌ಐಎ ಅಧಿಕಾರಿಗಳು ಇದೇ ರೀತಿ ಎಚ್ಚರಿಕೆ ನೀಡಿದ್ದರು. ಜೂ.30ರಂದು ಶರಣಾಗುವಂತೆ ಗಡು ವಿಧಿಸಿದ್ದರು. ಶರಣಾಗದಿದ್ದರೆ ಆರೋಪಿಗಳ ಮನೆ, ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಎಚ್ಚರಿಕೆ ನೀಡಿರುವ ಎನ್‌ಐಎ ತಂಡ, ಆರೋಪಿಗಳ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಷಿಸಿದೆ. ಈಗಾಗಲೇ ತಲೆಮರೆಸಿಕೊಂಡಿರುವ ಆರೋಪಿಗಳ ಮನೆಗೆ ಎನ್‌ಐಎ ತಂಡ ಕೋರ್ಟ್ ಆದೇಶದ ಪ್ರತಿ ಅಂಟಿಸಿದೆ.

ಇನ್ನು ಇದು ಎರಡನೇಯ ಸೂಚನೆಯಾಗಿದ್ದು ಶರಣಾಗದಿದ್ದರೆ ಮುಂದಿನ ಕ್ರಮದ ಸೂಚನೆ ನೀಡಿರುವುದಾಗಿ ತಿಳಿದುಬಂದಿದೆ.

ಇದಕ್ಕೆ ಸಂಬಂಧಿಸಿದ ಇತರ ಸುದ್ದಿಗಳು

ಕರಾವಳಿ